ಸೋಮವಾರಪೇಟೆ: ತಾಲ್ಲೂಕಿನ ಮಾದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಂಬೂರು ಗ್ರಾಮದ ಸರ್ವೆ ನಂಬರ್ 125/1 ರಲ್ಲಿ ಲಭ್ಯವಿರುವ 31 ಎಕರೆ ಪೈಸಾರಿ ಜಾಗವನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಇತರರಿಗೆ ನಿವೇಶನದ ರೂಪದಲ್ಲಿ ಮಂಜೂರಾತಿ ಮಾಡಬೇಕೆಂದು ಕೋರಿ ಕಳೆದ 20 ವರ್ಷಗಳಿಂದ ಅರ್ಹರು ಅರ್ಜಿ ಸಲ್ಲಿಸುತ್ತಿದ್ದಾರೆ ಎಂದು ಎಐಟಿಯುಸಿ ಜಿಲ್ಲಾಧ್ಯಕ್ಷ ಮತ್ತು ಆದಿ ದ್ರಾವೀಡ ಸಮಾ ಸೇವಾ ಸಂಘದ ರಾಜ್ಯಾಧ್ಯಕ್ಷ ಎಚ್.ಎಂ. ಸೋಮಪ್ಪ ತಿಳಿಸಿದರು.

ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದಿಗೂ ಜಿಲ್ಲೆಯಲ್ಲಿ 5ರಿಂದ 6 ಸಾವಿರ ಕೃಷಿ ಕಾರ್ಮಿಕರು ಲೈನ್ ಮನೆ ಹಾಗೂ ಬಾಡಿಗೆ ಮನೆಯಲ್ಲಿ ವಾಸಮಾಡುತ್ತಿದ್ದಾರೆ. ಇವರಿಗೆ ನಿವೇಶನ ನೀಡುವಂತೆ ನಿರಂತರ ಪ್ರತಿಭಟನೆಗಳನ್ನು ನಡೆಸಿ ರಾಜ್ಯ ಸರ್ಕಾರದ ಗಮನ ಸೆಳೆಯಲಾಗಿದೆ. 2024ರಲ್ಲಿ ಮಡಿಕೇರಿಯಲ್ಲಿ ನಡೆದ ಜನಸ್ಪಂದನಾ ಸಭೆಯಲ್ಲಿ ಮಾನ್ಯ ಮುಖ್ಯಮಂತ್ರಿಗಳಿಗೆ ಕೂಡ ಮನವಿಯನ್ನು ಸಲ್ಲಿಸಲಾಗಿತ್ತು ಎಂದು ಸ್ಮರಿಸಿದರು.

ಕಂದಾಯ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರಿಗೆ, ಶಾಸಕರುಗಳಿಗೆ ಹಾಗೂ ಜಿಲ್ಲಾಡಳಿತಕ್ಕೆ ಮನವಿಯನ್ನು ಸಲ್ಲಿಸಿ ನಿವೇಶನ ಮಂಜೂರಾತಿಗೆ ಕೋರಿದ್ದೇವೆ. ಕುಂಬೂರು ಗ್ರಾಮದ ಸರ್ವೆ ನಂಬರ್ 125/1 ರಲ್ಲಿ ಸಾಕಷ್ಟು ಜನರು ಒಂದು ಎರಡು ಏಕರೆ ಭೂಮಿಯನ್ನು ಒತ್ತುವರಿ ಮಾಡಿಕೊಂಡು ಕೃಷಿ ಮಾಡುತ್ತಿದ್ದಾರೆ. ಮಾದಾಪುರ ಗ್ರಾ.ಪಂ ವ್ಯಾಪ್ತಿಯ 500ಕ್ಕೂ ಅಧಿಕ ಅರ್ಜಿದಾರರು ಉಳದ ಜಾಗ ನಿವೇಶನದ ರೂಪದಲ್ಲಿ ಲಭಿಸುತ್ತದೆ ಎನ್ನುವ ನಿರೀಕ್ಷೆಯಲ್ಲಿದ್ದಾರೆ ಎಂದರು.

ಜಿಲ್ಲೆಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾಕಷ್ಟು ನಿವೇಶನ ರಹಿತರಿದ್ದು, ಈಗಾಗಲೇ ಸಂಬಂಧಿಸಿದ ಪಂಚಾಯಿತಿಗೆ ನಿವೇಶನಕ್ಕಾಗಿ ಅರ್ಜಿ ಸಲ್ಲಿಸಲಾಗಿದೆ. ನಿವೇಶನ ನೀಡುವ ಸಂದರ್ಭ ಇದನ್ನು ಪರಿಗಣನೆಗೆ ತೆಗೆದುಕೊಂಡು, ಆಯಾ ಪಂಚಾಯಿತಿ ವ್ಯಾಪ್ತಿಯಲ್ಲಿ ಅರ್ಜಿ ಸಲ್ಲಿಸಿದ ಹಿರಿತನದ ಆಧಾರದ ಮೇಲೆ ನಿವೇಶನ ನೀಡಬೇಕು. ಕುಂಬೂರು ಗ್ರಾಮದ ಸರ್ವೆ ನಂಬರ್ 125/1 ರಲ್ಲಿರುವ ಜಾಗವನ್ನು ಮಾದಾಪುರ ಗ್ರಾ.ಪಂ ವ್ಯಾಪ್ತಿಯ ಅರ್ಜಿದಾರರಿಗೆ ನೀಡಬೇಕು ಮತ್ತು ಇಲ್ಲಿ ಈಗಾಗಲೇ ನೆಲೆ ನಿಂತಿರುವ ಸಣ್ಣ ಹಿಡುವಳಿದಾರರಿಗೆ ಹಕ್ಕುಪತ್ರ ನೀಡಬೇಕು ಎಂದು ಒತ್ತಾಯಿಸಿದರು.

ಜಿಲ್ಲೆಯ ಇಬ್ಬರೂ ಶಾಸಕರು ರಾಜ್ಯದ ಮುಖ್ಯ ಮಂತ್ರಿಗಳ ಗಮನಕ್ಕೆ ತಂದು ಬೇಗೆ ನಿವೇಶನ ರಹಿತರಿಗೆ ನಿವೇಶನ ಕೊಡಿಸುವ ಕೆಲಸ ಮಾಡಬೇಕೆಂದು ಮನವಿ ಮಾಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-51-1647950928

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.