ಗುರುವಾರ , ಆಗಸ್ಟ್ 18, 2022
27 °C

ಕೊಡಗಿನಲ್ಲಿ ಮತ್ತೊಮ್ಮೆ ಕಂಪನ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಶನಿವಾರ ಮಧ್ಯಾಹ್ನ ಭೂಮಿ ಕಂಪಿಸಿದ ಅನುಭವ ಉಂಟಾಗಿದೆ. ಇಲ್ಲಿನ ಚೆಂಬು ಮತ್ತು ಗೂನಡ್ಕ ಭಾಗಗಳಲ್ಲಿ ಮಧ್ಯಾಹ್ನ 1.24ರ ಸಮಯದಲ್ಲಿ ಕೆಲವು ಸೆಕೆಂಡ್‌ಗಳ ಕಾಲ ಭೂಮಿ ಕಂಪಿಸಿತು ಎಂದು ಸ್ಥಳೀಯರು ತಿಳಿಸಿದ್ದಾರೆ.

ನಸುಕಿನಲ್ಲಿಯೂ ಭೂಕಂಪನವಾಗಿದೆ ಎಂಬ ಸಂದೇಶ ವಾಟ್ಸ್‌ಆ್ಯಪ್‌ಗಳಲ್ಲಿ ಸಾಕಷ್ಟು ಹರಿದಾಡಿತ್ತು. ಆದರೆ, ಭೂಕಂಪ ಸಂಭವಿಸಿಲ್ಲ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರ ಸ್ಪಷ್ಟಪಡಿಸಿತ್ತು. ಮತ್ತೆ ಮಧ್ಯಾಹ್ನ ಸಂಭವಿಸಿದೆ ಎನ್ನಲಾದ ಕಂಪನದ ಕುರಿತು ಪರಿಶೀಲನೆ ನಡೆಸುತ್ತಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.

ಎಡೆಬಿಡದೇ ಸುರಿಯುತ್ತಿರುವ ಮಳೆ ಹಾಗೂ ಭೂಮಿಯಿಂದ ಕೇಳಿ ಬರುತ್ತಿರುವ ಶಬ್ದಗಳಿಂದ ಇಲ್ಲಿನ ಜನರು ಆತಂಕಗೊಂಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು