ಕುಶಾಲನಗರ: ಕೊಡಗು ಜಿಲ್ಲೆಯಲ್ಲಿ ಆಸ್ತಿತ್ವಕ್ಕೆ ಬಂದಿರುವ ಶ್ರೀ ಮಹರ್ಷಿ ವಾಲ್ಮೀಕಿ ಪತ್ತಿನ ಸಹಕಾರ ಸಂಘದ ನೂತನ ಕಚೇರಿ ಉದ್ಘಾಟನೆ ಹಾಗೂ ಉದ್ಘಾಟನಾ ಸಮಾರಂಭ ಮೇ 31 ರಂದು ಭಾನುವಾರ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಕೆ.ಎನ್.ಅಶೋಕ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ 20 ರಂದು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸಚಿವರು, ಶಾಸಕರ ಅಲಭ್ಯತೆ ಕಾರಣ ಮುಂದೂಡಲಾಗಿದೆ ಎಂದು ತಿಳಿಸಿದರು.

ಸಂಘದ ನೂತನ ಕಚೇರಿಯನ್ನು ಶಾಸಕ ಡಾ. ಮಂತರ್ ಗೌಡ ಉದ್ಘಾಟಿಸಲಿದ್ದಾರೆ. ನಂತರ ಕಲಾಭವನದಲ್ಲಿ ನಡೆಯಲಿರುವ ವೇದಿಕೆ ಕಾರ್ಯಕ್ರಮದಲ್ಲಿ ಎಚ್.ಡಿ. ಕೋಟೆ ಶಾಸಕ ಅನಿಲ್ ಚಿಕ್ಕಮಾಧು ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪಾ ರ್ಚನೆ ಮಾಡಲಿದ್ದಾರೆ. ಸಭಾ ಕಾರ್ಯಕ್ರಮವನ್ನು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೋಳಿ ಉದ್ಘಾಟಿಸಲಿದ್ದಾರೆ. ಸಂಘದ ಪಾಲು ಬಂಡವಾಳ ದೃಢೀಕರಣ ಪತ್ರವನ್ನು ಶಾಸಕ ಕೆ.ಎನ್. ರಾಜಣ್ಣ ಬಿಡುಗಡೆ ಮಾಡಲಿದ್ದಾರೆ. ವಿರಾಜಪೇಟೆ ಕ್ಷೇತ್ರದ ಶಾಸಕ, ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೂನ್ನಣ್ಣ ಅವರು ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ನೆರವೇರಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಮುಖ್ಯ ಅತಿಥಿಗಳಾಗಿ ವಾಲ್ಮೀಕಿ ನಿಗಮದ ಮಾಜಿ ಅಧ್ಯಕ್ಷ ಎಸ್.ಸಿ. ಬಸವರಾಜ್, ಕುಶಾಲನಗರ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್, ಮೈಸೂರು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಂಪನಾಯಕ, ರಾಜ್ಯ ವಾಲ್ಮೀಕಿ ಮಹಾಸಭಾ ಯುವ ಘಟಕ ರಾಜ್ಯ ಅಧ್ಯಕ್ಷ ಟಿ.ಆರ್. ತುಳಸಿರಾಮ್, ಮೈಸೂರು ವಾಲ್ಮೀಕಿ ಸಹಕಾರ ಸಂಘದ ಅಧ್ಯಕ್ಷ ದೇವರಾಜ್ ಟಿ. ಕಾಟೂರು, ಜಿಲ್ಲಾ ಸ್ಥಾಪಕ ಅಧ್ಯಕ್ಷ ಕೆ.ಎನ್. ಅಶೋಕ್, ಪಿ.ಟಿ. ಸುರೇಶ್ ಪಾಲ್ಗೊಳ್ಳಲಿದ್ದಾರೆ. ಪ್ರಸನ್ನಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ ಎಂದು ತಿಳಿಸಿದರು.

ಸಂಘದ ನಿರ್ದೇಶಕ ಬಿ.ಎಸ್.ಚಂದನ್ ಕುಮಾರ್ ಮಾತನಾಡಿ, ಸಂಘದ ಸದಸ್ಯತ್ವ ಮುಂದುವರೆಸಿದ್ದು ಅಂದಿನ ಕಾರ್ಯಕ್ರಮದಲ್ಲಿ ವಿಶೇಷ ಕೌಂಟರ್ ಸ್ಥಾಪಿಸಿ ನೋಂದಣಿ ಕಾರ್ಯ ನಡೆಸಲಾಗುತ್ತದೆ ಎಂದು ತಿಳಿಸಿದರು.

ಸಂಘದ ನಿರ್ದೇಶಕರಾದ ಕೃಷ್ಣ ಆರ್, ಶ್ರೀನಿವಾಸ ಕುಮಾರ್, ಮಂಜುನಾಥ್ ಎಸ್.ಎಸ್, ನಾರಾಯಣ ಸ್ವಾಮಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-51-2121473302

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.