ಸೋಮವಾರಪೇಟೆ: ಮುಂದಿನ ಪೀಳಿಗೆಗೂ ಪ್ರಕೃತ್ತಿಯನ್ನು ಸಂರಕ್ಷಿಸಿ, ಉಳಿಸಿ ಬೆಳೆಸಿಕೊಂಡು ಹೋಗುವ ಕೆಲಸ ನಾವೆಲ್ಲರೂ ಮಾಡಬೇಕು ಎಂದು ಶಾಸಕ ಡಾ. ಮಂತರ್ ಗೌಡ ಅಭಿಪ್ರಾಯಪಟ್ಟರು.

ಕಿರಗಂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಕ್ಕಳಗುಡಿ ಬೆಟ್ಟದಲ್ಲಿ ಶನಿವಾರ ನಡೆದ ಮಕ್ಕಳಗುಡಿ ಬೆಟ್ಟ ಸಂರಕ್ಷಣಾ ಮತ್ತು ಅಭಿವೃದ್ಧಿ ಸಮಿತಿ ಸಭೆಯಲ್ಲಿ ಮನವಿ ಸ್ವೀಕರಿಸಿ ಅವರು ಮಾತನಾಡಿದರು. ಪ್ರವಾಸಿ ತಾಣ ಮಕ್ಕಳಗುಡಿ ಬೆಟ್ಟದಲ್ಲಿ ಕೆಲವೊಂದು ಅಭಿವೃದ್ಧಿ ಕೆಲಸಗಳಾಗಿವೆ. ಇನ್ನೂ ಹೆಚ್ಚಿನ ಅಭಿವೃದ್ಧಿಯಾಗಬೇಕು. ಮುಂದಿನ ದಿನಗಳಲ್ಲಿ ಮಕ್ಕಳಿಗೆ ಉದ್ಯಾನ ಸೇರಿದಂತೆ ಅಭಿವೃದ್ಧಿ ಕೆಲಸಗಳಿಗೆ ಒತ್ತು ನೀಡಲಾಗುವುದು. ಸಮಿತಿ ಸದಸ್ಯರು ಸಭೆ ಸೇರಿ ಅಭಿವೃದ್ಧಿ ಬಗ್ಗೆ ಸೂಕ್ತ ಯೋಜನೆಗಳನ್ನು ರೂಪಿಸಬೇಕಿದೆ. ಎಲ್ಲಿಯೇ ಅಭಿವೃದ್ಧಿ ಕೆಲಸಗಳಾಗುವ ಸಂದರ್ಭ ಎಲ್ಲರೂ ಆ ಕೆಲಸಗಳಿಗೆ ಕೈ ಜೋಡಿಸಬೇಕೆಂದರು.

ಸಾಕಷ್ಟು ಪ್ರವಾಸಿ ಸ್ಥಳಗಳ ದಾಖಲೆಯನ್ನು ಸ್ಥಳೀಯ ಗ್ರಾಮ ಪಂಚಾಯಿತಿ ಹೆಸರಿನಲ್ಲಿ ಮಾಡಿಸಲಾಗಿದೆ. ಅದರಂತೆ ಮಕ್ಕಳ ಗುಡಿ ಬೆಟ್ಟದ ಪ್ರದೇಶವನ್ನು ಸರ್ವೆ ಮಾಡಿಸಿ, ಬೇಲಿ ಹಾಕಿಸಬೇಕು ಎಂದು ಸದಸ್ಯರು ಮಾಡಿದ ಮನವಿಗೆ, ಸ್ಥಳದಲ್ಲಿಯೇ ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ, ಮುಂದಿನ ಒಂದು ವಾರದಲ್ಲಿ ಮಕ್ಕಳಗುಡಿ ಬೆಟ್ಟದ ಗಡಿ ಗುರುತಿಸು ಕೆಲಸ ಮಾಡಿಸಿಕೊಡಬೇಕೆಂದು ಸೂಚಿಸಿದರು. ಈಗಾಗಲೇ ಸಾಕಷ್ಟು ಸ್ಥಳ ಅಕ್ಕಪಕ್ಕದವರು ಒತ್ತುವರಿ ಮಾಡಿಕೊಂಡಿರುವ ಬಗ್ಗೆ ಮಾಹಿತಿ ಇದ್ದು, ಸರ್ವೆ ಮಾಡಿಸುವ ಸಂದರ್ಭ ಎಲ್ಲರೂ ಸಹಕರಿಸಿ, ಸ್ಥಳ ತೆರವುಗೊಳಿಸಿ ಕೊಡಬೇಕೆಂದು ಸ್ಥಳೀಯರಲ್ಲಿ ಮನವಿ ಮಾಡಿದರು.

ಮಕ್ಕಳ ಗುಡಿ ಬೆಟ್ಟದ ಸುತ್ತಲೂ ಸಾಕಷ್ಟು ತ್ಯಾಜ್ಯ ಕಂಡುಬರುತ್ತಿದ್ದು, ಒಂದು ವಾರದಲ್ಲಿ ಸ್ವಚ್ಛ ಮಾಡಿಸುವಂತೆ ಕಿರಗಂದೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವೇಣುಗೋಪಾಲ್ ಅವರಿಗೆ ಸೂಚಿಸಿದರು. ತ್ಯಾಜ್ಯ ಸಂಗ್ರಹಿಸಲು ಅಲ್ಲಲ್ಲಿ ತೊಟ್ಟಿಗಳು, ಆಯ್ದ ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸುವ ಮೂಲಕ, ಈ ಆವರಣವನ್ನು ಅಶುದ್ಧಗೊಳಿಸಲು ಮುಂದಾಗುವವರ ಮೇಲೆ ಸೂಕ್ತ ಕ್ರಮ ಮತ್ತು ದಂಡ ವಿಧಿಸುವ ಕೆಲಸ ಮಾಡಬೇಕು ಎಂದರು.

ಐಗೂರು ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಚ್.ಬಿ. ಶಿವಕುಮಾರ್ ಮಾತನಾಡಿ, ಮಕ್ಕಳಗುಡಿ ಬೆಟ್ಟ ಸಮುದ್ರಮಟ್ಟದಿಂದ 4 ಸಾವಿರ ಅಡಿ ಎತ್ತರದಲ್ಲಿದ್ದು, ಕಣ್ಣು ಹಾಯಿಸಿದಷ್ಟು ದೂರ ಸುಂದರ ಪರಿಸರವನ್ನು ಕಾಣಬಹುದು. ದಾನಿಗಳ ನೆರವಿನಿಂದ ಆಸನಗಳು, ತ್ಯಾಜ್ಯ ಸಂಗ್ರಹಿಸುವ ತೊಟ್ಟಿಗಳನ್ನು ಅಳವಡಿಸಲಾಗಿದೆ. ಕಳೆದ ಕೆಲವು ವರ್ಷಗಳಿಂದ ಮಕ್ಕಳಗುಡಿ ಬೆಟ್ಟದ ಭೂಮಿ ಒತ್ತುವರಿಯಾಗದಂತೆ ಗ್ರಾಮಸ್ಥರು ಒಂದು ಸಮಿತಿಯನ್ನು ಮಾಡಿಕೊಂಡು ಜಾಗವನ್ನು ಉಳಿಸಿಕೊಂಡು ಬರುವ ಕೆಲಸ ಮಾಡಿದ್ದಾರೆ. ಇಲ್ಲಿ ಇನ್ನೂ ಸಾಕಷ್ಟು ಅಭಿವೃದ್ಧಿ ಕೆಲಸವಾಗಬೇಕಿದ್ದು, ಶಾಸಕರು ಮಾಡಿಕೊಡಬೇಕೆಂದು ಮನವಿ ಮಾಡಿದರು.

ಸಮಿತಿ ಅಧ್ಯಕ್ಷ ಸುರೇಶ್ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಕೊಡಗು ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಚಂಗಪ್ಪ, ತಾಲ್ಲೂಕು ಘಟಕದ ಅಧ್ಯಕ್ಷ ಎ.ಆರ್. ಮುತ್ತಣ್ಣ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಸತೀಶ್, ಸೆಸ್ಕ್ ಎಇಇ ವಿನಯ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-51-1024916744

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.