ಮಡಿಕೇರಿ: ಕನಿಷ್ಠ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಮೇ 30ರಂದು ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆಯಂತಹ ಕಠಿಣ ಹೋರಾಟಕ್ಕೆ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿಐಟಿಯು) ಕರೆ ನೀಡಿತ್ತು. ಈಗ ಸರ್ಕಾರ ಕನಿಷ್ಠ ವೇತನವನ್ನು ತುಸು ಹೆಚ್ಚಿಸಿದೆ. ಅದು ಏನೇನೂ ಸಾಲದು. ಮೇ 30ರಂದು ಕಠಿಣ ಹೋರಾಟ ಕೈಬಿಟ್ಟು ಮನವಿ ಸಲ್ಲಿಸಲಾಗುವುದು ಎಂದು ಸಿಟಿಐಟಿಯು ಪ್ರಧಾನ ಕಾರ್ಯದರ್ಶಿ ಪಿ.ಆರ್.ಭರತ್ ತಿಳಿಸಿದರು.

ರಾಜ್ಯ ಸರ್ಕಾರ ಕನಿಷ್ಠ ವೇತನದ ಕರಡು ಅಧಿಸೂಚನೆ ಹೊರಡಿಸಿದ 2025 ಏಪ್ರಿಲ್ 11 ರಿಂದಲೇ ಪೂರ್ವಾನ್ವಯಿಸಿ ಕನಿಷ್ಠ ವೇತನ ಜಾರಿಗೆ ತರುವ ಬದಲಾಗಿ 2026 ಮೇ 22 ರಂದು ಅಧಿಸೂಚನೆ ಹೊರಡಿಸಿದ ದಿನದಿಂದ ಜಾರಿಗೆ ತಂದಿರುವುದು ಬಹುಸಂಖ್ಯಾತ ಕಾರ್ಮಿಕರಿಗೆ ಒಂದು ವರ್ಗದ ‘ಅರಿಯರ್ಸ್’ ಸಿಗದಂತೆ ಮಾಡಿದೆ. ಹಾಗಾಗಿ ಕನಿಷ್ಠ ವೇತನವನ್ನು ಏಪ್ರಿಲ್ 2025 ರಿಂದಲೇ ಜಾರಿಗೆ ಬರುವಂತೆ ತಿದ್ದುಪಡಿ ಮಾಡಿ ಅಧಿಸೂಚನೆ ಹೊರಡಿಸಬೇಕು ಎಂದು ಅವರು ಇಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.

ಈ ಅಧಿಸೂಚನೆಯಿಂದ ಗಾಮೆಂಟ್ಸ್, ಪ್ಲಾಂಟೇಷನ್, ಬೀಡಿ, ಅಗರಬತ್ತಿ, ಕೈಮಗ್ಗ ಸೇರಿ 19 ವಿಭಾಗದ ಉದ್ದಿಮೆಗಳನ್ನು ಹೊರಗಿಟ್ಟಿರುವ ರಾಜ್ಯ ಸರ್ಕಾರದ ಕ್ರಮದಿಂದ ಬಹುಸಂಖ್ಯಾತ ಮಹಿಳಾ ಕಾರ್ಮಿಕರು ಕನಿಷ್ಠ ವೇತನ ಹೆಚ್ಚಳದಿಂದ ವಂಚಿತರಾಗಲಿದ್ದಾರೆ. ಪ್ರಸ್ತುತ ಮೇ 22 ರಂದು ಜಾರಿಗೆ ತಂದಿರುವ ಕನಿಷ್ಠ ವೇತನವನ್ನೆ ಈ 19 ಉದ್ದಿಮೆಗಳಿಗೂ ವಿಸ್ತರಿಸಿ ಕೂಡಲೇ ಅಧಿಸೂಚನೆ ಹೊರಡಿಸಬೇಕು. ಸ್ಕೀಂ ನೌಕರರನ್ನು ಕನಿಷ್ಠ ವೇತನ ವ್ಯಾಪ್ತಿಗೆ ತರಬೇಕು ಎಂದು ಆಗ್ರಹಿಸಿದರು.

ಸಿಐಟಿಯು ಜಿಲ್ಲಾಧ್ಯಕ್ಷ ಎ.ಸಿ.ಸಾಬು ಮಾತನಾಡಿ, ‘ಕಳೆದ 10 ವರ್ಷಗಳಿಂದ ಸರ್ಕಾರ ಕನಿಷ್ಠ ವೇತನವನ್ನು ಏರಿಕೆ ಮಾಡಿರಲಿಲ್ಲ. ಈಗ ಏರಿಕೆ ಮಾಡಿದ್ದರೂ, ಅದು ಏನೇನೂ ಸಾಲದು. ಕೂಡಲೇ ₹ 36 ಸಾವಿರ ಕನಿಷ್ಠ ವೇತನ ನೀಡಬೇಕು’ ಎಂದು ಅವರು ಒತ್ತಾಯಿಸಿದರು. ಕೇಂದ್ರ ಸರ್ಕಾರವು 29 ಕಾರ್ಮಿಕ ಕಾನೂನುಗಳನ್ನು ರದ್ದುಪಡಿಸಿ ಮಾಡಿರುವ 4 ಕಾರ್ಮಿಕ ಸಂಹಿತೆಗಳನ್ನು ಯಥಾವತ್ತಾಗಿ ರಾಜ್ಯದಲ್ಲಿ ಜಾರಿಗೆ ತರಬಾರದು. ಸಂವಿಧಾನ ನೀಡಿರುವ ಅಧಿಕಾರವನ್ನು ಬಳಸಿ ರಾಜ್ಯ ಸರ್ಕಾರ ಈ 4 ಸಂಹಿತೆಗಳಿಗೆ ಕಾರ್ಮಿಕರ ಪರವಾದ ಕರ್ನಾಟಕ ತಿದ್ದುಪಡಿಗಳನ್ನು ತರಬೇಕು, ನಂತರ ನಿಯಮಗಳನ್ನು ರೂಪಿಸಬೇಕು ಎಂದು ಮನವಿ ಮಾಡಿದರು. ಸಂಘಟನೆಯ ಮುಖಂಡರಾದ ಕೆ.ಸಿ.ಇಂದಿರಾ, ಎಚ್.ಕೆ.ಜಾನಕಿ, ಎಚ್.ಎಂ.ದಿನೇಶ್, ಆರ್.ನದಿಯಾ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-51-1548718354

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.