ಕುಶಾಲನಗರ: ಕೊಡಗು ಜಿಲ್ಲೆಗೆ ಬುಧವಾರ ಆಗಮಿಸಿದ ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಅರಣ್ಯ ಖಾತೆ ಸಚಿವ ಈಶ್ವರ ಬಿ ಖಂಡ್ರೆ ಅವರನ್ನು ಕೊಡಗು ಜಿಲ್ಲಾ ವೀರಶೈವ ಮಹಾಸಭಾದ ವತಿಯಿಂದ ಸ್ವಾಗತಿಸಿ, ಮನವಿ ಪತ್ರ ಸಲ್ಲಿಸಲಾಯಿತು.

ಕೊಡಗಿನ ಪ್ರವೇಶ ದ್ವಾರ ಟೋಲ್ ಗೇಟ್ ಬಳಿ ಕಾವೇರಿ ದೇಗುಲದಲ್ಲಿ ಈಶ್ವರ ಖಂಡ್ರೆ ಅವರಿಗೆ ಕೊಡಗು ಜಿಲ್ಲಾ ವೀರಶೈವ ಮಹಾಸಭಾದ ಅಧ್ಯಕ್ಷ ಎಚ್.ವಿ.ಶಿವಪ್ಪ ಅವರು ಪುಷ್ಪಹಾರ ಹಾಕಿ ಗೌರವಿಸಿದರು.

ಜಿಲ್ಲಾ ಕೇಂದ್ರದಲ್ಲಿ ಜಿಲ್ಲಾ ಬಸವ ಭವನ ನಿರ್ಮಾಣ ಮಾಡುವ ಸಂಬಂಧ ರಾಜ್ಯ ಸರ್ಕಾರ ಸೂಕ್ತ ಭೂಮಿಯೊಂದಿಗೆ ಪೂರಕ ಅನುದಾನವನ್ನು ಬಿಡುಗಡೆಗೊಳಿಸಬೇಕು ಎಂದು ಶಿವಪ್ಪ ಅವರು ಸಚಿವರಲ್ಲಿ ಮನವಿ ಮಾಡಿದರು.

ಮಡಿಕೇರಿಯಲ್ಲಿರುವ ರಾಜರ ಗದ್ದುಗೆ, ಕೋಟೆ, ಅರಮನೆಗಳ ಸಂರಕ್ಷಣೆಗೆ ವಿಶೇಷ ಒತ್ತು ನೀಡಬೇಕು ಎಂದೂ ಅವರು ಕೋರಿದರು.

ಭವನ ನಿರ್ಮಾಣ ಭರವಸೆ: ಕೊಡಗು ಜಿಲ್ಲೆಯಲ್ಲಿ ವೀರಶೈವ–ಲಿಂಗಾಯತ ಸಮುದಾಯಕ್ಕೆ ಸೇರಿದವರು ಅತ್ಯಂತ ಕಡಿಮೆ ಸಂಖ್ಯೆಯಲ್ಲಿದ್ದಾರೆ. ಅವರಿಗೊಂದು ಭವನ ನಿರ್ಮಾಣ ಮಾಡಬೇಕು ಎಂಬ ಬೇಡಿಕೆ ಇದೆ. ಶಾಸಕರ ನಿಧಿ ಸೇರಿ ಇತರೆ ಮೂಲಗಳಿಂದ ಭವನ ನಿರ್ಮಾಣಕ್ಕೆ ಸಹಾಯಹಸ್ತ ಚಾಚುವುದಾಗಿ ಸಚಿವ ಈಶ್ವರ ಬಿ. ಖಂಡ್ರೆ ಭರವಸೆ ನೀಡಿದರು.

ಈ ವೇಳೆ ಮಹಾಸಭಾದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಶಾಂಭ ಶಿವಯ್ಯ, ಉಪಾಧ್ಯಕ್ಷ ಎಚ್.ಪಿ.ಉದಯ ಕುಮಾರ್, ತಾಲ್ಲೂಕು ವೀರಶೈವ ಮಹಾಸಭಾ ಅಧ್ಯಕ್ಷ ಎಚ್.ಎಂ.ಮಧುಸೂಧನ್, ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಎಸ್.ಮೂರ್ತಿ, ಜಿಲ್ಲಾ ಯುವ ಘಟಕದ ಅಧ್ಯಕ್ಷ ಮೋಹನ್, ಪ್ರಧಾನ ಕಾರ್ಯದರ್ಶಿ ಬಿ.ನಟರಾಜು, ಮುಖಂಡರಾದ ಕೆ.ಪಿ.ಪರಮೇಶ್, ಎಂ.ಎಸ್.ಗಣೇಶ್, ಎಂ.ಎಸ್.ಲೋಕೇಶ್, ಟಿ.ಜಿ.ಪ್ರೇಮ್ ಕುಮಾರ್, ಎಪಿಸಿಎಂಎಸ್ ಅಧ್ಯಕ್ಷ ಎಚ್.ಬಿ.ಚಂದ್ರಪ್ಪ, ತೊರೆನೂರು ಸಹಕಾರ ಸಂಘದ ಅಧ್ಯಕ್ಷ ಟಿ. ಬಿ.ಜಗದೀಶ್, ಶಿವಲಿಂಗಪ್ಪ, ಬಿ.ಬಿ.ಲೋಕೇಶ್, ಕೊಪ್ಪಾ ಉದ್ಯಮಿ ನಟ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-51-1674686292

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.