ಮಡಿಕೇರಿ: ಮುಂಗಾರು ಆಗಮನಕ್ಕೆ ದಿನಗಣನೆ ಆರಂಭವಾಗಿರುವಂತೆಯೇ ಜಿಲ್ಲಾಡಳಿತವು ಅಗತ್ಯ ಸಿದ್ಧತೆಯಲ್ಲಿ ತೊಡಗಿದೆ. ಮಂಗಳವಾರ ಇಲ್ಲಿ ‘ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ’ ಸಭೆ ನಡೆಸಿದ ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಮುನ್ನಚ್ಚರಿಕಾ ಕ್ರಮ ಕೈಗೊಳ್ಳುವಂತೆ ಜಿಲ್ಲೆಯ ಎಲ್ಲ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜನವರಿಯಿಂದ ಇಲ್ಲಿಯವರೆಗೆ ಶೇ 50ಕ್ಕಿಂತಲೂ ಕಡಿಮೆ ಮಳೆ ಆಗಿದೆ ಎಂದು ಮೈಮರೆಯಬಾರದು. ಮುಂಗಾರಿನ ಅವಧಿಯಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ, ಈಗಾಗಲೇ ಗುರುತಿಸಲಾಗಿರುವ ಪ್ರವಾಹ ಪೀಡಿತ ಹಾಗೂ ಭೂಕುಸಿತ ಪ್ರದೇಶ, ಸೂಕ್ಷ್ಮ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಬೇಕು ಎಂದು ಅವರು ನಿರ್ದೇಶನ ನೀಡಿದರು.

ಭಾರತೀಯ ಭೂ ವೈಜ್ಞಾನಿಕ ಸರ್ವೇಕ್ಷಣಾ ಸಂಸ್ಥೆ(ಜಿಎಸ್ಐ) ನೀಡಿರುವ ಮಾಹಿತಿಯಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಕೆಲವು ಸಂದರ್ಭದಲ್ಲಿ ಕಡಿಮೆ ಅವಧಿಯಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಈ ಬಗ್ಗೆ ಸ್ಥಳೀಯರಿಗೆ ಮಾಹಿತಿ ನೀಡಬೇಕು, ಮನ್ನಚ್ಚರಿಕೆ ವಹಿಸಬೇಕು ಎಂದು ಹೇಳಿದರು.

ಮಳೆಗಾಲದ ಅವಧಿಯಲ್ಲಿ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮವಹಿಸಬೇಕು. ಅಗತ್ಯ ಔಷಧಿ ದಾಸ್ತಾನು ಇರಬೇಕು ಎಂದು ತಿಳಿಸಿದರು.

ಶಾಸಕರ ನೇತೃತ್ವದಲ್ಲಿ ತಾಲ್ಲೂಕು ಮಟ್ಟದಲ್ಲಿ ಕಾರ್ಯಪಡೆ ಸಭೆ ನಡೆಸಲಾಗುವುದು. ತಾಲ್ಲೂಕು ಮಟ್ಟದಲ್ಲಿಯೂ ಸಭೆ ನಡೆಸಿ ಪ್ರವಾಹ ಪೀಡಿತ ಹಾಗೂ ಭೂಕುಸಿತ ಪ್ರದೇಶಗಳಲ್ಲಿ ಮುನ್ನೆಚ್ಚರ ವಹಿಸಲು ಮಾಹಿತಿ ನೀಡಬೇಕು ಎಂದು ಹೇಳಿದರು.

ಶಾಲಾ-ಕಾಲೇಜು ಹಾಗೂ ಸರ್ಕಾರಿ ಕಟ್ಟಡಗಳ ಸುಸ್ಥಿತಿ ಬಗ್ಗೆ ವರದಿ ನೀಡಬೇಕು. ಈಗಾಗಲೇ ಜಿಲ್ಲಾ ಮಟ್ಟದಲ್ಲಿ ಸಹಾಯವಾಣಿ ಕೇಂದ್ರವಿದ್ದು, ತಾಲ್ಲೂಕು ಮಟ್ಟದಲ್ಲಿಯೂ ಸಹ ಸಹಾಯವಾಣಿ ಕೇಂದ್ರ ಆರಂಭಿಸಬೇಕು. ಮಳೆಗಾಲದ ಅವಧಿಯಲ್ಲಿ ಸಹಾಯವಾಣಿ ಕೇಂದ್ರದಲ್ಲಿ ದಿನದ 24 ಗಂಟೆ ಅವಧಿಯಲ್ಲಿ ಮೂರು ಪಾಳಿಯಲ್ಲಿ ಸಿಬ್ಬಂದಿ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ರಸ್ತೆ ಬದಿಯ ಅಪಾಯಕಾರಿ ಮರ, ಕೊಂಬೆಗಳ ತೆರವು, ವಿದ್ಯುತ್ ಕಂಬ ಬದಲಿಸುವುದು, ಹಲವು ಕ್ರಮಗಳನ್ನು ಕೈಗೊಳ್ಳಬೇಕು. ಪ್ರವಾಹಪೀಡಿತ ಹಾಗೂ ಸೂಕ್ಷ್ಮ ಪ್ರದೇಶದಲ್ಲಿನ ಕುಟುಂಬಗಳ ಬಗ್ಗೆ ಮೊದಲೇ ಮಾಹಿತಿ ಸಂಗ್ರಹಿಸಬೇಕು. ಹೆಚ್ಚಿನ ಮಳೆಯಿಂದ ಪ್ರವಾಹ ಹಾಗೂ ಭೂಕುಸಿತ ಉಂಟಾದಲ್ಲಿ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲು ಅಗತ್ಯ ಸಿದ್ಧತೆ ಮಾಡಿಕೊಂಡಿರಬೇಕು. ಕಾಳಜಿ ಕೇಂದ್ರದಲ್ಲಿ ಕುಡಿಯುವ ನೀರು, ವಿದ್ಯುತ್ ಸಂಪರ್ಕ, ಶೌಚಾಲಯ, ಸೌಲಭ್ಯ ಇರಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.

ಎನ್ಸಿಸಿ, ಎನ್ಎಸ್ಎಸ್, ರೆಡ್ಕ್ರಾಸ್ ಸಂಸ್ಥೆ, ಮಾಜಿ ಸೈನಿಕರು, ಸ್ವಯಂಪ್ರೇರಣೆಯಿಂದ ಪ್ರಾಕೃತಿಕ ವಿಕೋಪ ನಿರ್ವಹಣಾ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವವರ ಸಹಕಾರವನ್ನು ಪಡೆಯಬೇಕು ಎಂದು ಸಲಹೆ ನೀಡಿದರು.

‘ಸಾಮಾಜಿಕ ಮಾಧ್ಯಮಗಳ ಮೂಲಕ ಸುಳ್ಳು ಸಂದೇಶಗಳು ಹೋಗದಂತೆ ಗಮನಹರಿಸಬೇಕು. ಆ ನಿಟ್ಟಿನಲ್ಲಿ ಜಿಲ್ಲಾಡಳಿತದಿಂದ ಕಾಲ ಕಾಲಕ್ಕೆ ಮಾಹಿತಿ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.

ಜನ-ಜಾನುವಾರು ರಕ್ಷಣೆ ಅತಿಮುಖ್ಯವಾಗಿದ್ದು, ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಸೋಮಶೇಖರ್ ಸಲಹೆ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ, ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಅಭಿಷೇಕ್, ಜಗನ್ನಾಥ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್, ತಹಶೀಲ್ದಾರ್ಗಳಾದ ಪ್ರವೀಣ್ ಕುಮಾರ್, ಕೃಷ್ಣಮೂರ್ತಿ, ಕಿರಣ್ ಗೌರಯ್ಯ, ಸಂಜನಾ, ಶ್ರೀಧರ, ಸೆಸ್ಕ್ ಕಾರ್ಯಪಾಲಕ ಎಂಜಿನಿಯರ್ ರಾಮಚಂದ್ರ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಕೆ.ಟಿ.ಪ್ರಭು, ಜಿಲ್ಲಾ ಪಂಚಾಯಿತಿ ಕಾರ್ಯಪಾಲಕ ಎಂಜಿನಿಯರ್ ಜಿ.ಕೆ.ನಾಯಕ್, ಪೊಲೀಸ್ ಇನ್ಸ್ಪೆಕ್ಟರ್ ಐ.ಪಿ.ಮೇದಪ್ಪ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-51-354863496

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.