ಮಡಿಕೇರಿ: ಮುಂಗಾರು ಆಗಮನ ಸನ್ನಿಹಿತವಾಗುತ್ತಿದ್ದಂತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಮಂಗಳವಾರ ಜಿಲ್ಲೆಯಲ್ಲಿ ಸರಣಿ ಸಭೆಗಳನ್ನು ನಡೆಸಿದರು.

ಜಿಲ್ಲಾ ವಿಪತ್ತು ನಿರ್ವಹಣೆಗೆ ಸಂಬಂಧಿಸಿದಂತೆ ಬೆಳಿಗ್ಗೆ ಮಡಿಕೇರಿ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಡಿಕೇರಿ ತಾಲ್ಲೂಕುಮಟ್ಟದ ಸಭೆ ನಡೆಸಿದ ಬಳಿಕ ಅವರು ಮಧ್ಯಾಹ್ನದ ಹೊತ್ತಿಗೆ ಕುಶಾಲನಗರದ ಪುರಸಭೆ ಸಭಾಂಗಣದಲ್ಲಿ ಕುಶಾಲನಗರ ತಾಲ್ಲೂಕು ಮತ್ತು ಸೋಮವಾರಪೇಟೆಮಟ್ಟದ ಸಭೆ ನಡೆಸಿದರು. ಮಧ್ಯಾಹ್ನದ ನಂತರ ಅವರು ಪೊನ್ನಂಪೇಟೆ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಪೊನ್ನಂಪೇಟೆ ಹಾಗೂ ವಿರಾಜಪೇಟೆ ತಾಲ್ಲೂಕು ಮಟ್ಟದ ಸಭೆಗಳನ್ನು ನಡೆಸಿ ಸೂಚನೆ, ನಿರ್ದೇಶನಗಳನ್ನು ನೀಡಿದರು. ಜತೆಗೆ, ಅಲ್ಲಿನ ಪರಿಸ್ಥಿತಿ ಕುರಿತು ಮಾಹಿತಿಯನ್ನೂ ಪಡೆದುಕೊಂಡರು.

ಕೇಂದ್ರ ಸ್ಥಾನದಲ್ಲಿರಿ, ಮುನಚ್ಚರಿಕೆ ವಹಿಸಿರಿ:

ಮುಂಗಾರು ಸಂದರ್ಭದಲ್ಲಿ ಎಲ್ಲ ಅಧಿಕಾರಿಗಳೂ ಕೇಂದ್ರ ಸ್ಥಾನದಲ್ಲಿರಬೇಕು. ವಿಪತ್ತು ನಿರ್ವಹಣೆಗೆ ಸಂಬಂಧಿಸಿ ಈಗಾಗಲೇ ನಿಯೋಜಿಸಲಾಗಿರುವ ನೋಡಲ್ ಅಧಿಕಾರಿಗಳು ಮತ್ತು ಸಹಾಯಕ ನೋಡಲ್ ಅಧಿಕಾರಿಗಳು ಸೇರಿದಂತೆ ಎಲ್ಲಾ ಹಂತದ ಅಧಿಕಾರಿಗಳು ತಮ್ಮ ವ್ಯಾಪ್ತಿಗೆ ಮತ್ತೊಮ್ಮೆ ಭೇಟಿ ನೀಡಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ನಿರ್ದೇಶನ ನೀಡಿದರು.

ತಮ್ಮ ವ್ಯಾಪ್ತಿಯ ಸೂಕ್ಷ್ಮ ಹಾಗೂ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಮಾಹಿತಿ ಪಡೆದು ಅಗತ್ಯ ಕ್ರಮ ಕೈಗೊಳ್ಳಬೇಕು. ಭೂಕುಸಿತ ಹಾಗೂ ಪ್ರವಾಹ ಪೀಡಿತ ಪ್ರದೇಶಗಳಲ್ಲಿನ ಜನರಿಗೆ ಹೆಚ್ಚಿನ ಮಳೆ ಸಂದರ್ಭದಲ್ಲಿ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಬೇಕು. ಮಳೆ ಸಂಬಂಧ ಪ್ರತಿನಿತ್ಯದ ಮುನ್ನೆಚ್ಚರಿಕಾ ಮಾಹಿತಿ ನೀಡಬೇಕು ಎಂದು ಅವರು ಹೇಳಿದರು.

ಅಂಗನವಾಡಿ, ಶಾಲಾ ಕಾಲೇಜು ಕಟ್ಟಡಗಳ ಪರಿಸ್ಥಿತಿ ಕುರಿತು ಮತ್ತೊಮ್ಮೆ ಪರಿಶೀಲಿಸಬೇಕು. ಹೋಬಳಿಗೆ ನೇಮಕವಾಗಿರುವ ನೋಡಲ್ ಅಧಿಕಾರಿಗಳು, ಸಹಾಯಕ ನೋಡಲ್ ಅಧಿಕಾರಿಗಳು, ಹಾಗೆಯೇ ಗ್ರಾಮ ಪಂಚಾಯಿತಿ ಅಧಿಕಾರಿಗಳು, ಸೇರಿದಂತೆ ಎಲ್ಲಾ ಹಂತದ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಪ್ರತಿಯೊಬ್ಬರ ಮೊಬೈಲ್ ಸಂಖ್ಯೆಯನ್ನು ಸಂಗ್ರಹಿಸಿಟ್ಟುಕೊಂಡಿರಬೇಕು, ಸ್ಥಳೀಯವಾಗಿ ಜೆಸಿಬಿ ಹೊಂದಿರುವವರ ಹಾಗೂ ಸ್ವಯಂಸೇವಕರ ಮಾಹಿತಿ ಇಟ್ಟುಕೊಂಡಿರಬೇಕು ಎಂದು ಅವರು ತಿಳಿಸಿದರು.

ಹೆದ್ದಾರಿ, ಲೋಕೋಪಯೋಗಿ, ಪಂಚಾಯಿತಿಗಳು ರಸ್ತೆ ಬದಿ ಮಳೆ ನೀರು ಸರಾಗವಾಗಿ ಹರಿಯುವಂತಾಗಲು ಚರಂಡಿ ಸರಿಪಡಿಸಬೇಕು ಎಂದು ಎಂಜಿನಿಯರ್ಗಳಿಗೆ ಸೂಚಿಸಿದರು.

ವಿದ್ಯುತ್ ಕಂಬಗಳ ಸುಸ್ಥಿತಿ ಬಗ್ಗೆ ಆಗಾಗ ಗಮನಹರಿಸಬೇಕು. ವಿದ್ಯುತ್ ಪರಿವರ್ತಕಗಳ ನಿರ್ವಹಣೆ ಮತ್ತಿತರ ಬಗ್ಗೆ ಗಮನಹರಿಸಬೇಕು ಎಂದರು.

ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಅಗತ್ಯ ಔಷಧ ದಾಸ್ತಾನು ಮಾಡಿಕೊಂಡು ಸಾಂಕ್ರಾಮಿಕ ರೋಗ ಹರಡದಂತೆ ಎಲ್ಲೆಡೆ ಜಾಗೃತಿ ಮೂಡಿಸಬೇಕು ಎಂದು ಸಲಹೆ ನೀಡಿದರು.

ರಸ್ತೆ ನಿರ್ಮಾಣ ಸಂಬಂಧ ಪ್ರಾಕೃತಿಕ ವಿಕೋಪ ಕಾಮಗಾರಿಗಳು ಇನ್ನೂ ಸಹ ಬಾಕಿ ಇದ್ದು, ಇವುಗಳನ್ನು ಪೂರ್ಣಗೊಳಿಸುವಂತೆಯೂ ಅವರು ನಿರ್ದೇಶನ ನೀಡಿದರು.

ಮಡಿಕೇರಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶೇಖರ್ ಮಾತನಾಡಿ, ಮಡಿಕೇರಿ ಕಸಬಾ, ಗಾಳಿಬೀಡು, ಹೊದ್ದೂರು, ಮಕ್ಕಂದೂರು, ಕೆ.ನಿಡುಗಣೆ, ಮದೆನಾಡು, ಮಕ್ಕಂದೂರು, ನಾಪೋಕ್ಲು, ಸಂಪಾಜೆ, ಭಾಗಮಂಡಲ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಈಗಾಗಲೇ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ ಎಂದರು.

ಕಾಳಜಿ ಕೇಂದ್ರಗಳಲ್ಲಿ ಆಹಾರ ಕಿಟ್ ವಿತರಣೆ, ಪ್ರವಾಹ ಪೀಡಿತ ಪ್ರದೇಶದಲ್ಲಿ ಕುಟುಂಬಗಳ ಸ್ಥಳಾಂತರ, ಮತ್ತಿತರ ಬಗ್ಗೆ ಮಾಹಿತಿ ನೀಡಿದರು.

ಪ್ರಾಕೃತಿಕ ವಿಪತ್ತು ನಿರ್ವಹಣೆ ಸಂಬಂಧ ಈ ಹಿಂದೆ ಪ್ರತೀ ಗ್ರಾಮ ಪಂಚಾಯಿತಿಗೆ ₹ 50 ಸಾವಿರ ನೀಡಲಾಗುತ್ತಿದ್ದು, ಅದನ್ನು ಒದಗಿಸಬೇಕು ಎಂದು ಕೋರಿದರು.

ಕೊಯನಾಡು ಬಳಿ ಕಿಂಡಿ ಅಣೆಕಟ್ಟು ಬಳಿ ಮರದ ದಿಮ್ಮಿಗಳು ಸಿಲುಕಿ ಪ್ರವಾಹ ಉಂಟಾಗುತ್ತಿದೆ. ಇದರಿಂದ 6 ಕುಟುಂಬಗಳು ತೊಂದರೆಗೆ ಸಿಲುಕಲಿವೆ. ಆ ಸಂದರ್ಭದಲ್ಲಿ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಭಾಗಮಂಡಲ ವ್ಯಾಪ್ತಿಯಲ್ಲಿ ಹೆಚ್ಚಿನ ಮಳೆ ಸಂದರ್ಭದಲ್ಲಿ ವಿದ್ಯುತ್ ವ್ಯತ್ಯಯದಿಂದ ದೂರವಾಣಿ ಸಂಪರ್ಕ ಕಡಿತಗೊಳ್ಳಲಿದೆ. ಹಾಗಾಗಿ, ಇಂಧನ ಪೂರೈಸಬೇಕು ಎಂದು ಅವರು ಕೋರಿದರು.

ತಹಶೀಲ್ದಾರರಾದ ಶ್ರೀಧರ, ಕೃಷ್ಣಮೂರ್ತಿ, ಪ್ರವೀಣ್ ಕುಮಾರ್, ಸಂಜನಾ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಲೋಕೋಪಯೋಗಿ, ಪಂಚಾಯತ್ ರಾಜ್, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್, ಕೃಷಿ, ತೋಟಗಾರಿಕೆ, ಪಶುಪಾಲನೆ, ಮೀನುಗಾರಿಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಸೆಸ್ಕ್, ಅಗ್ನಿಶಾಮಕ, ಅರಣ್ಯ, ಶಾಲಾ ಶಿಕ್ಷಣ, ಕಾರ್ಮಿಕ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆ ನೋಡಲ್ ಅಧಿಕಾರಿಗಳು ತಮ್ಮ ವ್ಯಾಪ್ತಿಗೆ ಸಂಬಂಧಿಸಿದಂತೆ ಹಲವು ಮಾಹಿತಿ ನೀಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-51-1665109342

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.