ನಾಪೋಕ್ಲು: ಕೊಡಗಿನ 35 ನಾಡುಗಳಲ್ಲಿ ನಾಪೋಕ್ಲು ಅತ್ಯಂತ ಶ್ರೇಷ್ಠ ನಾಡು ಇಗ್ಗುತಪ್ಪ ದೇವರ ನೆಲೆಯಾದ ನಾಲ್ಕು ನಾಡಿನಲ್ಲಿ ಹಿಂದುಗಳು ಸಂಘಟಿತರಾಗಬೇಕಾದ ಅವಶ್ಯಕತೆ ಇದೆ ಎಂದು ಹಿಂದೂ ಜಾಗರಣ ವೇದಿಕೆಯ ದಕ್ಷಿಣ ಪ್ರಾಂತ್ಯ ಕಾರ್ಯಕಾರಿ ಸಮಿತಿಯ ಶ್ರೀಕಾಂತ್ ಶೆಟ್ಟಿ ಕಾರ್ಕಳ ಹೇಳಿದರು.

ಹಿಂದೂ ಸುರಕ್ಷಾ ಸಮಿತಿ ವತಿಯಿಂದ ಇಲ್ಲಿನ ಮಾರುಕಟ್ಟೆ ಆವರಣದಲ್ಲಿ ಬುಧವಾರ ಆಯೋಜಿಸಲಾಗಿದ್ದ ಹಿಂದು ಜನಜಾಗೃತಿ ಜಾಥಾದ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ದಿಕ್ಸೂಚಿ ಭಾಷಣ ಮಾಡಿದರು.

ಹಿಂದೂ ಸಮಾಜದಲ್ಲಿ ಅನೇಕ ಜಾತಿಮತ, ಪಂಥಗಳು ಇದ್ದು ಸಮಾಜದೊಳಗಡೆ ಜಾತಿ ಹೆಸರಿನಲ್ಲಿ ವಿಷ ಬೀಜ ಬಿತ್ತುವ ಕೆಲಸ ಆಗುತ್ತಿದೆ, ಸಮಾಜದಲ್ಲಿ ಬೆಂಕಿ ಹುಟ್ಟದ ಹಾಗೆ ಜಾಗೃತ ಮಾಡಬೇಕಾಗಿದೆ. ಹಿಂದೂ ಸಮಾಜ ಸಂಘಟನೆ ಆಗಬೇಕಾದ ಅನಿವಾರ್ಯತೆ ಇದೆ. ಹಿಂದೂ ಸಮಾಜ ಸಂಘಟಿತ ಸಮಾಜ ಎಂಬ ಧ್ಯೇಯವನ್ನು ಇಟ್ಟುಕೊಂಡು ಇಂದಿನ ಕಾರ್ಯಕ್ರಮಕ್ಕೆ ಮುನ್ನುಡಿ ಬರೆಯಲಾಗಿದೆ ಎಂದು ಹೇಳಿದರು.

ನಾಪೋಕ್ಲು ಸುರಕ್ಷಾ ಸಮಿತಿ ಸಂಚಾಲಕ ಕರಮಂಡ ಲವ ನಾಣಯ್ಯ ಮಾತನಾಡಿ, ’ರಾಷ್ಟ್ರೀಯ ಸ್ವಯಂಸೇವಾ ಸಂಘಕ್ಕೆ ನೂರು ವರ್ಷ ತುಂಬಿದ ಹಿನ್ನೆಲೆಯಲ್ಲಿ ಜಿಲ್ಲೆಯ 80 ಮಂಡಲಗಳಲ್ಲಿ ಹಿಂದೂ ಸಮಾವೇಶವನ್ನು ಆಯೋಜಿಸಲಾಗಿದೆ.. ನಾಲ್ಕುನಾಡಿನಲ್ಲಿ ಭಯ ಮುಕ್ತ ವಾತಾವರಣ ನಿರ್ಮಾಣವಾಗಬೇಕು. ನಾಪೋಕ್ಲು ಪೊಲೀಸ್ ಠಾಣೆಗೆ ಹೆಚ್ಚಿನ ಸಿಬ್ಬಂದಿಗಳನ್ನು ನೇಮಕ ಮಾಡಬೇಕು ಎಂದು ತಿಳಿಸಿದರು.

ವೇದಿಕೆಯಲ್ಲಿ ಕರ್ನಾಟಕ ದಕ್ಷಿಣ ಪ್ರಾಂತ್ಯ ಸಮಿತಿ ಸದಸ್ಯ ಕೊಕ್ಕೇರ ಅಜಿತ್, ನಾಪೋಕ್ಲು ಹಿಂದೂ ಸುರಕ್ಷಾ ಸಮಿತಿಯ ಸಹ ಸಂಚಾಲಕರಾದ ರಾಧಾಕೃಷ್ಣ ರೈ, ಬಿ.ಎಂ.ಪ್ರತಿಪ, ಬಿಜೆಪಿ ಮುಖಂಡರಾದ ಕೆ.ಜಿ.ಬೋಪಯ್ಯ, ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ರವಿ ಕುಶಾಲಪ್ಪ, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ಕಾರ್ಯದರ್ಶಿ ಚಲನ್, ಮುಖಂಡರಾದ ಎ.ಕೆ ಮನುಮುತ್ತಪ್ಪ, ಮಣವಟ್ಟಿರ ಹರೀಶ್ ಕುಶಾಲಪ್ಪ, ಅಪ್ಪಚಿರ ಗೌತಮ್, ಪಾಡಿಯಮ್ಮಂಡ ಮನು ಮಹೇಶ್ ಭಾಗವಹಿಸಿದ್ದರು.

ಕಾರ್ಯಕ್ರಮಕ್ಕೆ ಮುನ್ನ ನಾಪೋಕ್ಲು ಭಗವತಿ ದೇವಾಲಯದಲ್ಲಿ ಪೂಜೆ ಸಲ್ಲಿಸಲಾಯಿತು. ಹಳೆ ತಾಲೂಕು ಜಂಕ್ಷನ್ ಬಳಿ ಶಿವಾಚಾಳಿಯಂಡ ಜಗದೀಶ್ ಈಡುಗಾಯಿ ಒಡೆದು ಮೆರವಣಿಗೆಗೆ ಚಾಲನೆ ನೀಡಿದರು. ಸಾವಿರಾರು ಮಂದಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಚಾಲಕ ಬೋಜೇಗೌಡ, ಕೊಡಗು ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಸುನಿಲ್, ಹಿಂದುದು ಸುರಕ್ಷಾ ಸಮಿತಿಯ ಸದಸ್ಯ ಕಾಂಗಡ ಜಾಲಿ ಪೂವಪ್ಪ, ಸರಸ್ವತಿ ಮನೋಹರಿ, ಹೇಮಾ ಅಜಿತ್ ಮಾದಾಪುರ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260402-51-786183560

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.