ನಾಪೋಕ್ಲು: ಕುಂದಾಪುರದಿಂದ ಸಂಬಂಧಿಕರೊಂದಿಗೆ ದರ್ಗಾ ಪ್ರವಾಸಕ್ಕೆಂದು ಎಮ್ಮೆಮಾಡು ಗ್ರಾಮಕ್ಕೆ ಬಂದು ನಾಪತ್ತೆಯಾಗಿದ್ದ ವ್ಯಕ್ತಿಯ ಮೃತ ದೇಹವು ಗ್ರಾಮದ ಕಾವೇರಿ ನದಿಯ ದಡದಲ್ಲಿ ಭಾನುವಾರ ದೊರೆತಿದೆ.

ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಮಾವಿನಕಟ್ಟೆ ಕುರಕುಂಜೆಯ ನಿವಾಸಿ ಹಸೈನಾರ್ (65)ಮೃತಪಟ್ಟವರು. ಏ.15 ರಂದು ಎಮ್ಮೆಮಾಡು ಗ್ರಾಮಕ್ಕೆ ಬಂದಿದ್ದರು. ಎಮ್ಮೆಮಾಡು ಗ್ರಾಮದ ಮಸೀದಿಯ ಆವರಣದಲ್ಲಿ ಮಲಗಿದ್ದರು. ರಾತ್ರಿ ಮಲಗಿದ್ದ ಜಾಗದಲ್ಲಿ ಹಸೈನಾರ್ ಕಾಣದೇ ಇದ್ದುದರಿಂದ ಸಂಬಂಧಿಕರು ಹುಡುಕಾಟ ನಡೆಸಿದ್ದರು. ಮಾನಸಿಕ ಅಸ್ವಸ್ಥರಂತೆ ವರ್ತಿಸುತ್ತಿದ್ದ ಹಸೈನಾರ್ ಪತ್ತೆಗೆ ಗ್ರಾಮಸ್ಥರು ಹುಡುಕಾಟ ನಡೆಸಿದ್ದು ಬಳಿಕ ನಾಪೋಕ್ಲು ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು.

ಗ್ರಾಮಸ್ಥರು ಮತ್ತು ಪೊಲೀಸರು ಭಾನುವಾರ ಶೋಧ ನಡೆಸಿದಾಗ ಗ್ರಾಮದ ಕಾವೇರಿ ನದಿ ದಡದಲ್ಲಿ ಹಸೈನಾರ್ ಶವ ಪತ್ತೆಯಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260421-51-354453527

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.