ನಾಪೋಕ್ಲು: ಬಲ್ಲಮಾವಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಲ್ಲಮಾವಟಿ, ಪುಲಿಕೋಟು ಮತ್ತು ಪೇರೂರು ಗ್ರಾಮಗಳಲ್ಲಿ ನೆಟ್ವರ್ಕ್ ಸಮಸ್ಯೆ ಕಾಡುತ್ತಿದ್ದು ಗ್ರಾಮಸ್ಥರು ಸಮಸ್ಯೆ ಎದುರಿಸುವಂತಾಗಿದೆ. ಬಳಕೆದಾರರಿಗೆ ನೆಟ್ವರ್ಕ್ ಪೂರೈಸುವಲ್ಲಿ ಸಂಬಂಧಪಟ್ಟವರು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪೇರೂರು ಗ್ರಾಮದ ಕಾಫಿ ಬೆಳೆಗಾರ ತೋಲಂಡ ಪೂಣಚ್ಚ ಮನವಿ ಮಾಡಿದರು.

ಗ್ರಾಮ ವ್ಯಾಪ್ತಿಗೆ ಒಳಪಟ್ಟ ಪ್ರದೇಶಗಳಲ್ಲಿ ಬಿಎಸ್ಎನ್ಎಲ್, ಏರ್ಟೆಲ್, ಜಿಯೋ ಯಾವುದೇ ನೆಟ್ವರ್ಕ್ಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಡಿಜಿಟಲ್ ವ್ಯವಸ್ಥೆ ಜನಸಾಮಾನ್ಯರಿಗೆ ತೀರಾ ಅವಶ್ಯಕವಾಗಿದ್ದು ಬಳಕೆದಾರರು ಪರಿತಪಿಸುವಂತಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಸೂಕ್ತ ನೆಟ್ ವರ್ಕ್ ಸೌಲಭ್ಯ ಕಲ್ಪಿಸಲು ಶಾಸಕರು ಹಾಗೂ ಸಂಸದರು ಮುಂದಾಗಬೇಕು’ ಎಂದು ಅವರು ಒತ್ತಾಯಿಸಿದರು.

ಪುಲಿಕೋಟು ಗ್ರಾಮದ ಕಾಫಿ ಬೆಳೆಗಾರ ಮಣವಟ್ಟಿರ ದಯಾ ಚಿಣ್ಣಪ್ಪ ಮಾತನಾಡಿ, ‘ವಿವಿಧ ವರ್ಗದ ಜನರಿಗೆ ನೆಟ್ವರ್ಕ್ ಸಮಸ್ಯೆ ಕಾಡುತ್ತಿದೆ. ವಿದ್ಯಾರ್ಥಿಗಳು, ಯುವಜನರು ಕೆಲಸ ನಿರ್ವಹಿಸಲು ಓದಲು ಸಮಸ್ಯೆಯಾಗಿದೆ. ಬಲ್ಲಮಾವಟಿ ಗ್ರಾಮದಲ್ಲಿ ಕೆನರಾ ಬ್ಯಾಂಕ್ ಇದೆ. ಇಲ್ಲೂ ಜನಸಾಮಾನ್ಯರು ದೈನಂದಿನ ವ್ಯವಹಾರಗಳಿಗೆ ನಿಲ್ಲುವ ಪರಿಸ್ಥಿತಿ ಬಂದಿದೆ. ಪಡಿತರ ಪಡೆಯಲು ಸಹ ನೆಟ್ವರ್ಕ್ ಸಮಸ್ಯೆಯಿಂದಾಗಿ ತೊಂದರೆಯಾಗುತ್ತಿದೆ. ಕೂಡಲೇ ಸಮಸ್ಯೆ ಬಗೆಹರಿಸಬೇಕು. ತಪ್ಪಿದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗುವುದು’ ಎಂದು ಅವರು ಎಚ್ಚರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ದೊಡ್ಡಪುಲಿಕೋಟು ಗ್ರಾಮದ ಕಾಫಿ ಬೆಳೆಗಾರರಾದ ಮಣವಟ್ಟಿರ ಹರೀಶ್ ಸುಬ್ಬಯ್ಯ, ಮಣವಟ್ಟೀರ ಹ್ಯಾರಿ ಕರುಂಬಯ್ಯ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-51-1718095048

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.