ಸುಂಟಿಕೊಪ್ಪ: ಸುಂಟಿಕೊಪ್ಪ ನಗರ ಕಾಂಗ್ರೆಸ್ ಪಕ್ಷದ ವತಿಯಿಂದ ಬಸ್ ನಿಲ್ದಾಣದಲ್ಲಿ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರಿಗೆ ಅದ್ಧೂರಿ ಸ್ವಾಗತ ಕೋರಲಾಯಿತು.

ಸುಂಟಿಕೊಪ್ಪ ಪಟ್ಟಣಕ್ಕೆ ಆಗಮಿಸುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಜಯಘೋಷಗಳನ್ನು ಕೂಗುತ್ತಾ ಗೃಹ ಸಚಿವರನ್ನು ಬರಮಾಡಿಕೊಂಡು ಹೂವಿನ ಮಾಲೆ ಮತ್ತು ಪಕ್ಷದ ಶಲ್ಯ ಹಾಕಿ ಗೌರವಿಸಿದರು.

ಶಾಸಕ ಡಾ.ಮಂತರ್ಗೌಡ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಶಿವಮ್ಮ ಮಹೇಶ್, ಸದಸ್ಯರಾದ ಪಿ.ಎಫ್.ಸಬಾಸ್ಟೀನ್, ಶಬೀರ್, ಆಲಿಕುಟ್ಟಿ, ನಗರ ಕಾಂಗ್ರೆಸ್ ಅಧ್ಯಕ್ಷ ರಫೀಕ್ ಖಾನ್, ನಗರ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಅಕೀಮ್, ಕೆಪಿಸಿಸಿ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಎಂ.ಎ.ಉಸ್ಮಾನ್, ಹೋಬಳಿ ಅಧ್ಯಕ್ಷ ಕೆ.ಎಂ.ರಜಾಕ್, ನಗರ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ ಅಜೀಜ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರಮಣಿ, ಮುಖಂಡರಾದ ಕೆ.ಇ.ಕರೀಂ, ರೋಸ್ಮೇರಿ ರಾಡ್ರಿಗಸ್, ಇಸಾಕ್ ಖಾನ್, ಹಮೀದ್, ಶಂಷುದ್ದೀನ್ ಇದ್ದರು.

ನಂತರ ಸೂರ್ಲಬ್ಬಿ ವ್ಯಾಪ್ತಿಯ ಕುಂಬಾರಗಡಿಗೆಯಲ್ಲಿ ಹತ್ಯೆಯಾದ ವಿದ್ಯಾರ್ಥಿನಿ ಮೀನಾಳ ಕುಟುಂಬಸ್ಥರನ್ನು ಭೇಟಿ ಮಾಡಲು ತೆರಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.