ಮಡಿಕೇರಿ: ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಚೋದನಾಕಾರಿ ಬರಹ ಮತ್ತು ವಿಡಿಯೊ ಹಂಚಿಕೊಂಡಿರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಎಚ್ಚರಿಕೆ ನೀಡಿದ್ದಾರೆ.

ಪ್ರಕರಣವೊಂದರಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಆರೋಪಿಯೊಬ್ಬ ತನ್ನ ಇನ್ಸ್ಟಾಗ್ರಾಂ ಖಾತೆಯಲ್ಲಿ ಪ್ರಚೋದನಾಕಾರಿ ಬರಹ ಮತ್ತು ವಿಡಿಯೊ ಹಂಚಿಕೊಂಡಿರುವುದು ಗಮನಕ್ಕೆ ಬಂದಿದೆ. ಈತನ ವಿರುದ್ಧ ಪ್ರತ್ಯೇಕ ಪ್ರಕರಣ ದಾಖಲಿಸಿ ಜಾಮೀನು ರದ್ದುಗೊಳಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಲಾಗಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ಜನಾಂಗಗಳ ಮಧ್ಯೆ, ಧರ್ಮಗಳ ಮಧ್ಯೆ ಹಿಂಸೆ ಮತ್ತು ಅಶಾಂತಿಯನ್ನು ಪ್ರಚೋದಿಸುವ ಯಾವುದೇ ರೀತಿಯ ಹೇಳಿಕೆಗಳನ್ನು ಹಂಚಿಕೊಳ್ಳುವುದು, ಪೋಸ್ಟ್ ಹಾಕುವುದು, ಕಾನೂನು ಬಾಹಿರ. ಇಂತಹ ಕೃತ್ಯಗಳಲ್ಲಿ ತೊಡಗುವವರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-51-1059144138

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.