ಮಡಿಕೇರಿ: ಸರ್ಕಾರ ಹಣ ಬಿಡುಗಡೆ ಮಾಡಿದರೂ ಕೆಲಸ ಮಾಡುತ್ತಿಲ್ಲ. ಇರುವ ಸಮಸ್ಯೆಯಾದರೂ ಏನು ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅಧಿಕಾರಿಗಳ ವಿರುದ್ಧ ಹರಿಹಾಯ್ದರು.

ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (20 ಅಂಶಗಳ ಕಾರ್ಯಕ್ರಮ ಸೇರಿದಂತೆ) ಜಿಲ್ಲಾ ಮಟ್ಟದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಪ್ರಮುಖವಾಗಿ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಸರ್ಕಾರ ಹಣ ನೀಡಿದೆ, ಆದರೂ ರಸ್ತೆ ಗುಂಡಿಗಳನ್ನು ಹಲವೆಡೆ ಮುಚ್ಚಿಲ್ಲ. ಕಾಮಗಾರಿಗಳನ್ನು ಆರಂಭಿಸಿಲ್ಲ. ಮುಂಗಾರು ಆರಂಭಕ್ಕೆ ಮುನ್ನ ಎಲ್ಲ ಕಾಮಗಾರಿಗಳನ್ನೂ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.

2024–24ನೇ ಸಾಲಿನಲ್ಲಿ 14 ‘ಅಪೆಂಡಿಕ್ಸ್–ಇ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಮಂಜೂರಾತಿ ನೀಡಲಾಗಿತ್ತು. ಅದರಲ್ಲಿ ಇನ್ನೂ 6 ಕಾಮಗಾರಿಗಳು ನಡೆಯುತ್ತಲೇ ಇವೆ. 2025–26ನೇ ಸಾಲಿನಲ್ಲಿ 18 ಕಾಮಗಾರಿಗಳ ಪೈಕಿ ಕೇವಲ 3 ಮಾತ್ರ ಪೂರ್ಣಗೊಂಡಿದೆ. ಈ ರೀತಿ ಕೆಲಸ ಮಾಡಿದರೆ ಜನರು ಸರ್ಕಾರದ ಕುರಿತು ಯಾವ ರೀತಿ ಯೋಚಿಸಬಹುದು. ಅಧಿಕಾರಿಗಳ ಈ ನಡೆಯಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತಿದೆ ಎಂದು ಕಿಡಿಕಾರಿದರು.

‘ಸರ್ಕಾರ ಅನುದಾನ ಕೊಟ್ಟರೂ ಕೆಲಸ ಮಾಡದೇ ಇರುವುದು ಅಧಿಕಾರಿಗಳ ವೈಫಲ್ಯ. ನಿಮ್ಮ ವಿರುದ್ಧ ಸರ್ಕಾರಕ್ಕೆ ವರದಿ ಸಲ್ಲಿಸುವೆ’ ಎಂದೂ ಎಚ್ಚರಿಕೆ ನೀಡಿದರು.

ಈ ವೇಳೆ ಮಾತನಾಡಿದ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಸಿ.ಎಸ್.ಅರುಣ್ ಮಾಚಯ್ಯ, ಕರಿಕೆ ರಸ್ತೆ ಸೇರಿದಂತೆ ಬಹುತೇಕ ರಸ್ತೆಗಳ ಕಾಮಗಾರಿ ಬಾಕಿ ಇದ್ದು, ತುರ್ತಾಗಿ ಕೈಗೊಳ್ಳಬೇಕು ಎಂದು ಹೇಳಿದರು.

ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಸಹ ಬಿಟ್ಟಂಗಾಲ, ತಿತಿಮತಿ, ಬಾಳುಗೋಡು ಸೇರಿದಂತೆ ಹಲವು ರಸ್ತೆ ಸರಿಪಡಿಸಬೇಕು. ಜೊತೆಗೆ,ಲೋಕೋಪಯೋಗಿ ಇಲಾಖೆಯ ಪ್ರವಾಸಿ ಮಂದಿರಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡುತ್ತಿಲ್ಲ ಎಂದು ದೂರಿದರು.

ನದಿ ಇದ್ದರೂ ಕೊಳವೆಬಾವಿಯೇ ನೀರಿನ ಮೂಲ!: ಕೊಡಗಿನಲ್ಲಿ ಕಾವೇರಿ, ಹಾರಂಗಿ, ಲಕ್ಷ್ಮಣತೀರ್ಥ ಸೇರಿದಂತೆ ಹಲವು ನದಿ, ಉಪನದಿಗಳಿದ್ದರೂ ಜಲಜೀವನ್ ಮಿಷನ್ ಕಾಮಗಾರಿಯಲ್ಲಿ ಶೇ 80ರಷ್ಟು ನೀರಿನ ಮೂಲವನ್ನು ಕೊಳವೆಬಾವಿ ಎಂದೇ ಗುರುತಿಸಿರುವುದಕ್ಕೆ ಶಾಸಕ ಡಾ.ಮಂತರ್ಗೌಡ ಆಕ್ಷೇಪ ವ್ಯಕ್ತಪಡಿಸಿದರು.

ಟ್ಯಾಂಕ್ ಕಟ್ಟಿದ್ದೀರಿ ಅಲ್ಲಿಗೆ ನೀರು ಬಂದೇ ಇಲ್ಲ. ಈಗ ಆ ಟ್ಯಾಂಕ್ ದುರಸ್ತಿಗೂ ಬಂದಿದೆ. ಮೊದಲು ಮಾಡಿದ ಡಿಪಿಆರ್ ಸರಿ ಇಲ್ಲ. ಜನರ ದುಡ್ಡನ್ನು ಈ ರೀತಿ ಅಪವ್ಯಯ ಮಾಡುತ್ತಿದ್ದೀರಿ ಎಂದು ಹರಿಹಾಯ್ದರು. ಜತೆಗೆ, ಈ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದೂ ಒತ್ತಾಯಿಸಿದರು.

ಬಿಪಿಎಲ್ ಪಡಿತರ ಚೀಟ ಎಪಿಎಲ್ಗೆ ಆದಾಗ ಮಾಹಿತಿ ಕೊಟ್ಟಿಲ್ಲ: ಜಿಲ್ಲೆಯಲ್ಲಿ 4,900 ಬಿಪಿಎಲ್ ಪಡಿತರ ಚೀಟಿ ಎಪಿಎಲ್ಗೆ ಬದಲಾಗಿದೆ. ಇದನ್ನು ಪುನರ್ ಪರಿಶೀಲಿಸಲು ಬಂದ ಅರ್ಜಿಗಳು ಕೇವಲ 676. ಉಳಿದ ಜನರಿಗೆ ತಮ್ಮ ಪಡಿತರ ಚೀಟಿ ಎಪಿಎಲ್ಗೆ ಬದಲಾಗಿದೆ, ಅದನ್ನು ಪುನರ್ ಪರಿಶೀಲಿಸಲು ಅರ್ಜಿ ಸಲ್ಲಿಸಬೇಕು ಎಂಬ ಮಾಹಿತಿಯನ್ನೇ ಕೊಟ್ಟಿಲ್ಲ ಎಂದು ನಗರಸಭೆ ಅಧ್ಯಕ್ಷೆ ಕಲಾವತಿ, ಶಾಸಕ ಡಾ.ಮಂತರ್ಗೌಡ ಅಸಮಾಧಾನ ವ್ಯಕ್ತಪಡಿಸಿದರು.

ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಚಂದ್ರಶೇಖರ್ ಅವರು ಜಿಲ್ಲೆಯಲ್ಲಿ ರಸಗೊಬ್ಬರ ದಾಸ್ತಾನು ಇದ್ದು,ಸದ್ಯಕ್ಕೆ ಯಾವುದೇ ಕೊರತೆ ಇಲ್ಲ ಎಂದರು.

ಈ ವೇಳೆ ಮಾತನಾಡಿದ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬಾಂಡ್ ಗಣಪತಿ ‘ರಸಗೊಬ್ಬರ ಚೀಲದಲ್ಲಿ ತೂಕದ ವ್ಯತ್ಯಾಸ ಆಗುತ್ತಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಪ್ರಸ್ತಾಪಿಸಿದರು.

ರಸಗೊಬ್ಬರ ಚೀಲದ ತೂಕದಲ್ಲಿ ವ್ಯತ್ಯಾಸ ಕಂಡು ಬರುತ್ತಿರುವ ಬಗ್ಗೆ ದೂರುಗಳು ಬರುತ್ತಿರುವ ಹಿನ್ನೆಲೆ ಈ ಸಂಬಂಧ ಪರಿಶೀಲಿಸಬೇಕು ಎಂದು ಸಚಿವರು ಸೂಚಿಸಿದರು.

ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್, ಸಮಿತಿ ಸದಸ್ಯರಾದ ಸುನಿತಾ ಮಂಜುನಾಥ್, ಅವರು ಹಲವು ವಿಚಾರಗಳ ಕುರಿತು ಮಾತನಾಡಿದರು. ಕೃಷಿ ಇಲಾಖೆಯ ವಿವಿಧ ಯೋಜನೆ ಮತ್ತು ರಸಗೊಬ್ಬರದ ಬಗ್ಗೆ ಜಾಗೃತಿ ಮೂಡಿಸುವ ಬಿತ್ತಿಪತ್ರವನ್ನು ಬಿಡಗಡೆಗೊಳಿಸಲಾಯಿತು.

ಇದೇ ವೇಳೆ ಪ್ರಾಕೃತಿಕ ವಿಕೋಪ ಸಂದರ್ಭದಲ್ಲಿ ಮನೆ ಕಳೆದುಕೊಂಡ 129 ಸಂತ್ರಸ್ತ ಕುಟುಂಬದವರಿಗೆ ಗಾಳಿಬೀಡು, ಮದೆ ಮತ್ತು ಜಂಬೂರಿನಲ್ಲಿ ಹಕ್ಕುಪತ್ರ ವಿತರಿಸಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-51-1245345237

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.