ಗೋಣಿಕೊಪ್ಪಲು: ಪೊನ್ನಂಪೇಟೆ ತಾಲ್ಲೂಕಿನ ಬೀರುಗ ಚೆಪ್ಪುಡಿಕೊಲ್ಲಿಯಲ್ಲಿ ಬೊಮ್ಮುಂಜಿ ನದಿಗೆ ನೂತನ ಸೇತುವೆ ನಿರ್ಮಾಣಕ್ಕೆ ಶಾಸಕ ಎ.ಎಸ್.ಪೊನ್ನಣ್ಣ ಭೂಮಿ ಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು ಹಲವು ವರ್ಷದಿಂದ ಕುಸಿದಿದ್ದ ಹಳೆಯ ಸೇತುವೆಯಿಂದಾಗಿ ವಾಹನ ಸಂಚಾರಕ್ಕೆ ಅಡ್ಡಿಯಾಗಿತ್ತು. ಇದೀಗ ₹2.50 ಕೋಟಿ ವೆಚ್ಚದಲ್ಲಿ ನೂತನ ಸೇತುವೆ ಮತ್ತು ಚೆಕ್ ಡ್ಯಾಂ ನಿರ್ಮಾಣ ಮಾಡಲಾಗುವುದು ಎಂದು ಹೇಳಿದರು.

ಸಣ್ಣ ನೀರಾವರಿ ಯೋಜನೆಯ ಅನುದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಬೋಸರಾಜು ಅವರೊಂದಿಗೆ ಮಾತನಾಡಿ ಕಾಮಗಾರಿ ಆರಂಭ ಮಾಡಲಾಗುವುದು. ನೂತನ ಸೇತುವೆ ಚೆಕ್ ಡ್ಯಾಂನಿಂದ ಈ ಭಾಗದ ರೈತರಿಗೆ ಬೇಸಿಗೆಯಲ್ಲಿ ಕೃಷಿಗೆ ನೀರು ಸಿಗಲಿದೆ ಎಂದು ಹೇಳಿದರು.

ಒಳ್ಳೆಯ ಯೋಜನೆಗೆ ಸರ್ಕಾರ ಅನುದಾನ ನೀಡಿದೆ. ಉಸ್ತುವಾರಿ ಸಚಿವರು ಮತ್ತು ರಾಜ್ಯ ಸರ್ಕಾರಕ್ಕೆ ಧನ್ಯವಾದ ಸಲ್ಲಿಸುತ್ತೇನೆ. ಈ ಯೋಜನೆಯನ್ನು ಆದಷ್ಟು ಬೇಗ ಪೂರ್ಣಗೊಳಿಸಲು ಗುತ್ತಿಗೆದಾರರು ಹಾಗೂ ಎಂಜಿನಿಯರ್ ಅವರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು. ಜಿಲ್ಲೆಯ ಗ್ರಾಮಗಳ ಮೂಲೆ ಮೂಲೆಗಳಲ್ಲಿ ಅಭಿವೃದ್ಧಿ ಕಾಮಗಾರಿ ನಡೆಯುತ್ತಿವೆ. ಅಭಿವೃದ್ಧಿ ನಿಂತ ನೀರಲ್ಲ ಅದು ನಿರಂತರವಾಗಿ ನಡೆಯುತ್ತಿರುತ್ತದೆ. ತಾವೆಲ್ಲ ಇದರಲ್ಲಿ ಕೈಜೋಡಿಸಿ ಸಹಕರಿಸಬೇಕು ಎಂದು ಮನವಿ ಮಾಡಿದರು.

ಚೆಪ್ಪುಡಿಕೊಲ್ಲಿ ಈಶ್ವರ, ಚಾಮುಂಡಿ ದೇವಸ್ಥಾನದ ಪ್ರಮುಖರಾದ ಚೆಪ್ಪುಡಿರ ಪೊನ್ನಪ್ಪ, ದೇವಸ್ಥಾನ ಸಮಿತಿ ಪ್ರಮುಖರಾದ ಬಾದುಮಂಡ ವಿಷ್ಣು ಕಾರ್ಯಪ್ಪ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್, ಕಾರ್ಯದರ್ಶಿ ಎ.ಜೆ.ಬಾಬು, ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಕಾಳಿಮಾಡ ಪ್ರಶಾಂತ್, ಹಿರಿಯರಾದ ಚೆಪ್ಪುಡೀರ ಪೊನ್ನಪ್ಪ, ಚೆಕ್ಕೇರ ಕಾಳಯ್ಯ, ತೀತಿರ ಪ್ರಭು ಸುಬ್ಬಯ್ಯ, ಪೆಮ್ಮಂಡ ರಾಜಾ ಕುಶಾಲಪ್ಪ, ಮಚ್ಚಮಾಡ ಉದಯ, ಅಪ್ಪಚ್ಚಂಗಡ ಮೋಟಯ್ಯ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-51-1625932196

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.