ಮಡಿಕೇರಿ: ಕಡಿಮೆ ದರಕ್ಕೆ ಟೆಂಡರ್ ತೆಗೆದುಕೊಂಡು ಕಳಪೆ ಕಾಮಗಾರಿ ಮಾಡುವವರ ವಿರುದ್ಧ ಲೋಕಾಯುಕ್ತರಿಗೆ ದೂರು ನೀಡಲಾ ಗುವುದು ಎಂದು ಕೊಡಗು ಜಿಲ್ಲಾ ಲೋಕೋಪಯೋಗಿ ಗುತ್ತಿಗೆದಾರರ ಸಂಘದ ಕಾರ್ಯಾಧ್ಯಕ್ಷ ವಿ.ಎ.ಲಾರೆನ್ಸ್ ಎಚ್ಚರಿಕೆ ನೀಡಿದರು.

‘ಹೊರ ಜಿಲ್ಲೆಯಿಂದ ಬಂದು ಇಲ್ಲಿ ಕಡಿಮೆ ದರಕ್ಕೆ ಟೆಂಡರ್ ಪಡೆದುಕೊಳ್ಳುತ್ತಾರೆ. ನಂತರ, ಕಳಪೆ ಕಾಮಗಾರಿ ಮಾಡುತ್ತಾರೆ. ಇದು ನಿಲ್ಲಬೇಕು. ಅದಕ್ಕಾಗಿ ಕಾಮಗಾರಿಯ ಸ್ವರೂಪವನ್ನು ಪರಿಶೀಲಿಸಲು ಸಂಘದ ವತಿಯಿಂದ ತಂಡ ರಚಿಸಿ ಪರಿಶೀಲನೆ ನಡೆಸಲಾಗುವುದು. ಒಂದು ವೇಳೆ ಕಳಪೆ ಕಾಮಗಾರಿ ಎಂಬುದು ಕಂಡು ಬಂದರೆ ಲೋಕಾಯುಕ್ತರಿಗೆ ದೂರು ಸಲ್ಲಿಸಲಾಗುವುದು’ ಎಂದು ಅವರು ಇಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಸಂಘದ ಅಧ್ಯಕ್ಷ ಕೆ.ಎ.ರವಿ ಚಂಗಪ್ಪ ಮಾತನಾಡಿ, ‘ಕೊಡಗು ಜಿಲ್ಲೆಯ ಎಲ್ಲ ಗುತ್ತಿಗೆದಾರರು ಆರ್ಥಿಕ ಮುಗ್ಗಟ್ಟಿನಿಂದ ತೊಂದರೆ ಅನುಭವಿಸುತ್ತಿದ್ದಾರೆ. ಸರಿಯಾದ ಸಮಯಕ್ಕೆ ಬಿಲ್ಲುಗಳು ಪಾವತಿಯಾಗದೇ ಅತ್ಯಂತ ಕಷ್ಟದಲ್ಲಿದ್ದಾರೆ. ಆದಷ್ಟು ಶೀಘ್ರ ಹಣ ಬಿಡುಗಡೆ ಮಾಡಬೇಕು’ ಎಂದು ಒತ್ತಾಯಿಸಿದರು.

ಒಂದು ತಾಲ್ಲೂಕಿನಿಂದ ಮತ್ತೊಂದು ತಾಲ್ಲೂಕಿಗೆ ಹೋಗಿ ಗುತ್ತಿಗೆ ಪಡೆಯದೇ ಆಯಾ ತಾಲ್ಲೂಕಿನ ಗುತ್ತಿಗೆದಾರರೇ ಟೆಂಡರ್ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು. ಇನ್ನು ಮುಂದೆ ಸಂಘವು ತೀವ್ರ ನಿಗಾ ಇರಿಸಲಿದ್ದು, ಅಕ್ರಮ ನಡೆದರೆ ಅಥವಾ ಕಳಪೆ ಕಾಮಗಾರಿ ಕಂಡು ಬಂದರೆ ಸಹಿಸುವ ಪ್ರಶ್ನೆಯೇ ಇಲ್ಲ ಎಂದರು. ಸಂಘದ ಮುಖಂಡರಾದ ಎಂ.ಅರುಣ್ಕುಮಾರ್ ಹಾಗೂ ಕವನ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-51-453024558

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.