ಜ.11 ರಿಂದ ‘ಕೊಡಗು ಪ್ರವಾಸಿ’ ಉತ್ಸವ

7
ಓಪನ್ ಸ್ಟ್ರೀಟ್ ಫೆಸ್ಟಿವಲ್, ಆಹಾರ ಮೇಳ ನಡೆಸಲು ಡಿಸಿ ತೀರ್ಮಾನ

ಜ.11 ರಿಂದ ‘ಕೊಡಗು ಪ್ರವಾಸಿ’ ಉತ್ಸವ

Published:
Updated:

ಮಡಿಕೇರಿ: ಜಿಲ್ಲಾಡಳಿತ ವತಿಯಿಂದ ಜ.11 ರಿಂದ ಮೂರು ದಿನಗಳ ಕಾಲ ಜಿಲ್ಲೆಯಲ್ಲಿ ಪ್ರವಾಸಿ ಉತ್ಸವ ಆಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಈಚೆಗೆ ಉತ್ಸವ ಆಯೋಜಿಸುವ ಸಂಬಂಧ ನಡೆದ ಸಭೆಯಲ್ಲಿ ತಿಳಿಸಿದರು.

ಮೂರು ದಿನದಲ್ಲಿ ಓಪನ್ ಸ್ಟ್ರೀಟ್ ಫೆಸ್ಟಿವಲ್, ಆಹಾರ ಮೇಳ, ಸಭಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಮಳಿಗೆ ನಿರ್ಮಾಣ ಮತ್ತಿತರ ಬಗ್ಗೆ ಅಂದಾಜು ಪಟ್ಟಿ ತಯಾರಿಸಿ, ವರದಿ ನೀಡುವಂತೆ ಪ್ರವಾಸೋದ್ಯಮ ಇಲಾಖೆ ಅಧಿಕಾರಿ ಸಿ ಜಗ್ಗನಾಥ್‌ ಗೆ ಸೂಚಿಸಿದರು.

ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಟ ಪ್ರದರ್ಶನವನ್ನು ಇದೆ ಸಂದರ್ಭದಲ್ಲಿ ಸಜ್ಜುಗೊಳಿಸಿ ಎಂದು ತೋಟಗಾರಿಕಾ ಇಲಾಖೆ ಉಪ ನಿರ್ದೇಶಕರಿಗೆ ಶ್ರೀವಿದ್ಯಾ ಸೂಚಿಸಿದರು.

ಜಿ.ಪಂ.ಸಿಇಒ ಲಕ್ಷ್ಮಿಪ್ರಿಯಾ, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ಚಂದ್ರಶೇಖರ್, ಹಿರಿಯ ಸಹಾಯಕ ನಿರ್ದೇಶಕಿ ದೇವಕಿ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಜಗನ್ನಾಥ್ ಹಾಜರಿದ್ದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !