ಮಡಿಕೇರಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಪತ್ರಿಕಾ ಪ್ರವಾಸದ ಉಪಯೋಗಕ್ಕಾಗಿ ಹೊಸದಾಗಿ ಕೊಡಗು ಜಿಲ್ಲೆಗೆ ಒದಗಿಸಲಾಗಿರುವ ಮಿನಿ ಬಸ್ಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ಇಲ್ಲಿನ ಜಿಲ್ಲಾ ಪಂಚಾಯಿತಿ ಭವನದ ಆವರಣದಲ್ಲಿ ಮಂಗಳವಾರ ಹಸಿರು ನಿಶಾನೆ ತೋರಿದರು. ಶಾಸಕ ಡಾ.ಮಂತರ್ಗೌಡ ಅವರು ಮಿನಿ ಬಸ್ನ್ನು ಸ್ವತಃ ಚಾಲನೆ ಮಾಡಿದರು.

ಜಿಲ್ಲೆಯ ಪತ್ರಕರ್ತರು, ಶಾಸಕದ್ವಯರು ಹಾಗೂ ಸರ್ಕಾರ ಹೀಗೆ ಎಲ್ಲರ ಪ್ರಯತ್ನದಿಂದ ಜಿಲ್ಲೆಗೆ 32 ಆಸನದ ಮಿನಿ ಬಸ್ ಹಂಚಿಕೆ ಮಾಡಿದೆ ಎಂದು ಸಚಿವರು ತಿಳಿಸಿದರು.

ನಗರಸಭೆ ಅಧ್ಯಕ್ಷೆ ಪಿ.ಕಲಾವತಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಸಿ.ಎಸ್.ಅರುಣ್ ಮಾಚಯ್ಯ, ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ, ಡಿಸಿಎಫ್ ಅಭಿಷೇಕ್, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ಸತೀಶ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಚಿನ್ನಸ್ವಾಮಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-51-1048453289

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.