ಮೈಸೂರು: ‘ಕೊಡಗು ಜಿಲ್ಲೆಯ ಮೂಲಕ ಹಾದುಹೋಗುವ ಯಾವುದೇ ರೈಲು ಮಾರ್ಗಕ್ಕೆ ಸಂಬಂಧಿಸಿದಂತೆ ಪ್ರಸ್ತುತ ರೈಲ್ವೆ ಸಚಿವಾಲಯದ ಮುಂದೆ ಪ್ರಸ್ತಾವ ಇಲ್ಲ’ ಎಂದು ಮೈಸೂರು–ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸ್ಪಷ್ಟಪಡಿಸಿದ್ದಾರೆ.

ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿ ಚರ್ಚಿಸಿದ ನಂತರ ಅವರು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

‘ಇತ್ತೀಚಿನ ದಿನಗಳಲ್ಲಿ ಹರಿದಾಡುತ್ತಿರುವ ಕೆಲವು ವರದಿಗಳು ಮತ್ತು ಚರ್ಚೆಗಳು ಕೊಡಗಿನ ಮೂಲಕ ರೈಲು ಮಾರ್ಗ ಹಾದುಹೋಗುವ ಸಾಧ್ಯತೆಯ ಬಗ್ಗೆ ಸಾರ್ವಜನಿಕರ ಒಂದು ವಲಯದಲ್ಲಿ ಆತಂಕ ಉಂಟು ಮಾಡಿವೆ. ಇಂತಹ ಯಾವುದೇ ಪ್ರಸ್ತಾವ ಪ್ರಸ್ತುತ ಸಚಿವಾಲಯದ ಪರಿಗಣನೆಯಲ್ಲಿ ಇಲ್ಲ ಎಂಬುದು ಸಚಿವರೊಂದಿಗೆ ನಡೆದ ಮಾತುಕತೆಯಲ್ಲಿ ದೃಢಪಟ್ಟಿದೆ’ ಎಂದು ಮಾಹಿತಿ ನೀಡಿದ್ದಾರೆ.

‘ಈ ಪ್ರದೇಶಕ್ಕೆ ಸಂಬಂಧಿಸಿದ ಯಾವುದೇ ಭವಿಷ್ಯದ ಮೂಲಸೌಕರ್ಯ ಯೋಜನೆ ಕೈಗೊಳ್ಳುವ ಮೊದಲು ಎಲ್ಲರೊಂದಿಗೂ ಸಮಾಲೋಚನೆ ನಡೆಸಲಾಗುವುದು. ಜಿಲ್ಲೆಯ ಪರಿಸರ, ಪರಿಸ್ಥಿತಿ ಮತ್ತು ಅಭಿವೃದ್ಧಿ ಸಂಬಂಧಿತ ಹಿತಾಸಕ್ತಿಗಳನ್ನು ಪರಿಗಣಿಸಲಾಗುವುದು’ ಎಂದು ಹೇಳಿದ್ದಾರೆ.

‘ಕೊಡಗಿನ ಸಮತೋಲಿತ ಅಭಿವೃದ್ಧಿ ಖಚಿತಪಡಿಸುವ ಜೊತೆಗೆ ಅದರ ವಿಶಿಷ್ಟ ಪರಿಸರ ಮತ್ತು ಸಾಂಸ್ಕೃತಿಕ ಪರಂಪರೆ ಸಂರಕ್ಷಿಸುವಲ್ಲಿ ಬದ್ಧನಾಗಿದ್ದೇನೆ. ಆ ಪ್ರದೇಶದ ಹಿತಕ್ಕಾಗಿ ಉತ್ತಮ ಸಂಪರ್ಕ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದ ವಿಷಯಗಳಲ್ಲಿ ರೈಲ್ವೆ ಸಚಿವಾಲಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದೇನೆ’ ಎಂದು ತಿಳಿಸಿದ್ದಾರೆ.

‘ಊಹಾಪೋಹಗಳ ಆಧಾರದ ವರದಿಗಳಿಂದ ಸಾರ್ವಜನಿಕರು ದಾರಿ ತಪ್ಪಬಾರದು. ಈ ವಿಷಯಕ್ಕೆ ಸಂಬಂಧಿಸಿದ ಯಾವುದೇ ಅಧಿಕೃತ ಬೆಳವಣಿಗೆಯನ್ನು ಪಾರದರ್ಶಕವಾಗಿ ತಿಳಿಸಲಾಗುವುದು’ ಎಂದು ಹೇಳಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-51-420690887

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.