ಕೊಡಗು ಜಿಲ್ಲೆಯಲ್ಲೂ ಮಳೆ ಅಬ್ಬರ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಗುರುವಾರವೂ ಮಳೆಯ ಅಬ್ಬರ ಮುಂದುವರಿದಿದೆ.
ಕಾವೇರಿ ನದಿ ಸೇರಿದಂತೆ ಹಳ್ಳ, ಕೊಳ್ಳಗಳಲ್ಲಿ ನೀರಿನಮಟ್ಟ ಏರಿಕೆಯಾಗಿದೆ. ಹಾರಂಗಿ ಒಳಹರಿವು 760 ಕ್ಯುಸೆಕ್ನಿಂದ 3,285 ಕ್ಯುಸೆಕ್ಗೆ ಏರಿಕೆಯಾಗಿದೆ. ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಯಾಗಿದ್ದು, ಇಂದಿನ ನೀರಿನಮಟ್ಟ 2,850 ಅಡಿಗೆ ತಲುಪಿದೆ. ಜಲಾಶಯದ ಭರ್ತಿಗೆ 9 ಅಡಿಯಷ್ಟೇ ಬಾಕಿಯಿದೆ. ಕಳೆದ ವರ್ಷ ಇದೇ ದಿನ 2,821 ಅಡಿ ಲಯಷ್ಟೇ ನೀರಿತ್ತು.
ಚಟ್ಟಳ್ಳಿ- ಮಡಿಕೇರಿ ರಸ್ತೆಯ ಅಲ್ಲಲ್ಲಿ ಸಣ್ಣ ಪ್ರಮಾಣದ ಭೂಕುಸಿತವಾಗಿದ್ದು ಈ ರಸ್ತೆಯಲ್ಲಿ ಸಂಚಾರ ಅಪಾಯಕಾರಿಯಾಗಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.