ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಡಗು: ಡ್ರಾಪ್ ಕೊಡುವ ನೆಪದಲ್ಲಿ ಅತ್ಯಾಚಾರ; ಆರೋಪಿ ಬಂಧನ

Last Updated 17 ಮಾರ್ಚ್ 2023, 8:48 IST
ಅಕ್ಷರ ಗಾತ್ರ

ಗೋಣಿಕೊಪ್ಪಲು (ಕೊಡಗು ಜಿಲ್ಲೆ): ಕೊಡಗು ಜಿಲ್ಲೆಯ ಬಾರ್‌ವೊಂದರಲ್ಲಿ ಸ್ವಚ್ಛತಾ ಕೆಲಸ ಮಾಡುತ್ತಿದ್ದ 48 ವರ್ಷದ ಮಹಿಳೆಯೊಬ್ಬರ ಮೇಲೆ ಡ್ರಾಪ್ ಕೊಡುವ ನೆಪದಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೋಯ್ದು ಅತ್ಯಾಚಾರ ಎಸಗಿದ್ದ ಆರೋಪಿ ವ್ಯಾನ್‌ ಚಾಲಕ ಮಣಿಕಂಠ (39) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

‘ಮಹಿಳೆಯು ಭಾನುವಾರ ಸಂಜೆ ಮದ್ಯದಂಗಡಿಯಲ್ಲಿ ಕೆಲಸ ಮುಗಿಸಿ ವಾಪಸ್ ತಮ್ಮ ಊರಿಗೆ ತೆರಳಲು ಬಸ್‌ನಿಲ್ದಾಣದ ಬಳಿ ನಿಂತಿದ್ದಾಗ ಮಾರುತಿ ಓಮ್ನಿ ವ್ಯಾನ್‌ನಲ್ಲಿ ಬಂದ ಆರೋಪಿಯು ಡ್ರಾಪ್‌ ಕೊಡುವುದಾಗಿ ಹೇಳಿ ನಿರ್ಜನ ಪ್ರದೇಶಕ್ಕೆ ಕರೆದೋಯ್ದು ಅತ್ಯಾಚಾರ ಎಸಗಿದ್ದಾನೆ. ಬಳಿಕ ಪೊಲೀಸರಿಗೆ ದೂರು ನೀಡಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದಲ್ಲದೇ ಮೊಬೈಲ್‌ ನಂಬರ್‌ನ್ನು ವಿನಿಮಯ ಮಾಡಿಕೊಂಡು, ತಾನು ಕರೆದಾಗ ಬರಬೇಕು ಎಂದೂ ಧಮಕಿ ಹಾಕಿದ್ದಾನೆ.

ಘಟನೆಯಿಂದ ಆಘಾತಕ್ಕೆ ಒಳಗಾದ ಮಹಿಳೆಯು ಮೂರು ದಿನಗಳ ಕಾಲ ಕೆಲಸಕ್ಕೆ ಬಂದಿರಲಿಲ್ಲ. ಗುರುವಾರ ಕೆಲಸಕ್ಕೆ ಬಂದಾಗ ಬಾರ್‌ನ ಮಾಲೀಕರು ವಿಚಾರಿಸಿದಾಗ ಮಹಿಳೆ ಅತ್ಯಾಚಾರದ ಘಟನೆ ಕುರಿತು ಹೇಳಿದ್ದಾರೆ. ಮಾಲೀಕರು ಕೂಡಲೇ ಪೊಲೀಸರಿಗೆ ದೂರು ನೀಡುವಂತೆ ತಿಳಿಸಿದ ನಂತರವಷ್ಟೇ ಮಹಿಳೆ ಪೊಲೀಸ್ ಠಾಣೆಗೆ ಬಂದರು. ಆರೋಪಿ ಮಹಿಳೆಗೆ ನೀಡಿದ್ದ ಮೊಬೈಲ್‌ ನಂಬರ್‌ನ ಆಧಾರದ ಮೇಲೆ ಆರೋಪಿಯನ್ನು ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT