ಶನಿವಾರಸಂತೆ: ಶಾಸಕ ಡಾ.ಮಂತರ್ಗೌಡ ಅವರು ಶನಿವಾರಸಂತೆ ಮತ್ತು ದುಂಡಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಕಡೆಗಳಲ್ಲಿ ಕಾಂಕ್ರಿಟ್ ರಸ್ತೆ ಅಭಿವೃದ್ದಿ ಕಾಮಗಾರಿಗೆ ಈಚೆಗೆ ಭೂಮಿಪೂಜೆ ನೆರವೇರಿಸಿದರು.

ಶನಿವಾರಸಂತೆ ಬೈಪಾಸ್ ರಸ್ತೆಯಲ್ಲಿರುವ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘಕ್ಕೆ ಸೇರಿದ ಜಾಗದಲ್ಲಿ ಮುಖ್ಯಮಂತ್ರಿ ನಿಧಿಯ ₹ 10 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಲಿರುವ ತಡೆಗೋಡೆ ನಿರ್ಮಾಣ ಮತ್ತು ಕಾಂಕ್ರಿಟ್ ರಸ್ತೆ ಕಾಮಗಾರಿ, ಬೈಪಾಸ್ ರಸ್ತೆಯಿಂದ ದುಂಡಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಮ್ಮನೆ ಗ್ರಾಮಕ್ಕೆ ಹೋಗಲು ಪ್ರಗತಿ ಕಾಲೋನಿ ಯೋಜನೆ ಅಡಿಯಲ್ಲಿ ₹ 1 ಕೋಟಿ ಮಂಜೂರಾಗಿರುವ 400 ಮೀಟರ್ ಕಾಂಕ್ರಿಟ್ ರಸ್ತೆ ನಿರ್ಮಾಣಕ್ಕೆ ಚಾಲನೆ ನೀಡಿದರು.

ಶಾಸಕರ ನಿಧಿಯಿಂದ ₹ 10 ಲಕ್ಷದಲ್ಲಿ ಚಿಕ್ಕಕೊಳತ್ತೂರು ಗ್ರಾಮದ ಡಾಂಬರು ರಸ್ತೆ ಅಭಿವೃದ್ಧಿ, ಮುಖ್ಯಮಂತ್ರಿಗಳ ವಿಶೇಷ ಯೋಜನೆ ₹ 20 ಲಕ್ಷ ಅನುದಾನದಲ್ಲಿ ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆ ಮೂಲಕವಾಗಿ ಹೋಗುವ ಚಿಕ್ಕಕೊಳತ್ತೂರು ಗ್ರಾಮದ ಕಾಂಕ್ರಿಟ್ ರಸ್ತೆ ಅಭಿವೃದ್ದಿ ಕಾಮಗಾರಿಯೂ ನಡೆಯಲಿದೆ.

ಶಾಸಕ ಡಾ.ಮಂತರ್ಗೌಡ ಮಾತನಾಡಿ, ‘ನಾನು ಶಾಸಕನಾಗಿದ್ದ ಪ್ರಾರಂಭದಲ್ಲೆ ಗ್ರಾಮೀಣ ರಸ್ತೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುವುದಾಗಿ ಭರವಸೆ ನೀಡಿದ್ದೆ. ಅದರಂತೆ ಸ್ವಲ್ಪ ವಿಳಂಬವಾದರೂ ಸಹ ಈ ಭಾಗದಲ್ಲಿ ಗ್ರಾಮೀಣ ರಸ್ತೆ ಅಭಿವೃದ್ದಿ, ಕಾಂಕ್ರಿಟ್ ರಸ್ತೆ ಅಭಿವೃದ್ದಿಗೆ ಅನುದಾನ ನೀಡಿದ್ದು, ಕೆಲ ರಸ್ತೆ ಅಭಿವೃದ್ದಿ ಕಾಮಗಾರಿ ಪೂರ್ಣಗೊಂಡಿದೆ’ ಎಂದರು.

ಉಳಿದಂತೆ, ಹಂತಹಂತವಾಗಿ ಪ್ರಗತಿಯಲ್ಲಿರುವ ರಸ್ತೆ ಅಭಿವೃದ್ದಿ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದರು.

ರಸ್ತೆ ಅಭಿವೃದ್ದಿ ಕಾಮಗಾರಿ ಸಂದರ್ಭದಲ್ಲಿ ಸ್ಥಳೀಯರು ಮತ್ತು ಗ್ರಾಮಸ್ಥರು ಗುಣಮಟ್ಟದ ಕಾಮಗಾರಿ ನಡೆಯುವಂತೆ ಗಮನಹರಿಸಬೇಕು. ಸಾರ್ವಜನಿಕರು ಮತ್ತು ಗ್ರಾಮಸ್ಥರು ಅಭಿವೃದ್ಧಿ ವಿಚಾರದಲ್ಲಿ ಪಕ್ಷಾತೀತವಾಗಿ ಕೈಜೋಡಿಸುವಂತೆ ಮನವಿ ಮಾಡಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕಾಂತರಾಜ್, ತಾ. ಪಂ.ಮಾಜಿ ಅಧ್ಯಕ್ಷ ಲೋಕೇಶ್, ತಾಲ್ಲೂಕು ಅಕ್ರಮ ಸಕ್ರಮ ಸಮಿತಿ ಸದಸ್ಯ ಜನಾರ್ಧನ್ ಮುಖಂಡರಾದ ಶರತ್ ಶೇಖರ್, ಗಿರೀಶ್, ಆದಿತ್ಯ ಗೌಡ, ಅಶೋಕ್, ಬಿ.ಕೆ.ದಿನೇಶ್, ಕಿರಣ್, ನಾಗರಾಜ್, ಎಪಿಸಿಎಂಎಸ್ ಅಧ್ಯಕ್ಷ ಧರ್ಮಪ್ಪ, ಉಪಾಧ್ಯಕ್ಷ ಕುಮಾರ್ ನಾಯಕ್, ಸರೋಜ ಶೇಖರ್, ಅಬ್ಬಾಸ್, ಮಹಮದ್ ಖನ್ನ, ಮಂಜುನಾಥ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-51-52411814

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.