ಸೋಮವಾರಪೇಟೆ: ಪ್ರತಿ ತಿಂಗಳಿಗೊಮ್ಮೆಯಾದರೂ ಪರಿಶಿಷ್ಟ ಜಾತಿಯವರ ಕುಂದು ಕೊರತೆ ಸಭೆ ಮಾಡುವ ಮೂಲಕ ಸಮಸ್ಯೆ ಪರಿಹಾರಕ್ಕೆ ಅಧಿಕಾರಿಗಳು ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ಕೊಡಗು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚಿಸಿದರು.

ಚೌಡ್ಲು ಗ್ರಾಮದಲ್ಲಿ ಬುಧವಾರ ನಡೆದ ಪರಿಶಿಷ್ಟ ಜನಾಂಗದವರ ಕುಂದುಕೊರತೆ ಆಲಿಸುವ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಹೋಬಳಿ ಮಟ್ಟದಲ್ಲಿಯೂ ಕುಂದುಕೊರತೆ ಸಭೆ ನಡೆಸಿದಲ್ಲಿ, ಸ್ಥಳೀಯ ಜನರ ಸಮಸ್ಯೆಗಳನ್ನು ಆಲಿಸಿದಲ್ಲಿ ಪರಿಹಾರ ಕಂಡುಕೊಳ್ಳಬಹುದಾಗಿದೆ. ಆ ನಿಟ್ಟಿನಲ್ಲಿ ಸಂಬಂಧಿಸಿದ ಅಧಿಕಾರಿಗಳು ಇಚ್ಛಾಶಕ್ತಿ ಹಾಗೂ ಬದ್ಧತೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿ ಹೆಚ್ಚಿನ ಅರ್ಜಿಗಳು ಸಲ್ಲಿಕೆಯಾಗಿದ್ದು, ಹೋಬಳಿ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಸಕಾಲದಲ್ಲಿ ಕರ್ತವ್ಯ ನಿರ್ವಹಿಸಿದಲ್ಲಿ ಹಲವು ಸಮಸ್ಯೆಗಳನ್ನು ಸ್ಥಳೀಯ ಹಂತದಲ್ಲಿ ಪರಿಹರಿಸಬಹುದಾಗಿದೆ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸುಮಾರು ಕುಂದುಕೊರತೆಗೆ ಸಂಬಂಧಿಸಿದ 48ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾದವು. ಕಂದಾಯ ಇಲಾಖೆಯ ದುರಸ್ತಿ, ಹಕ್ಕುಪತ್ರ ವಿತರಿಸುವುದು, ಮನೆ ದಾಖಲಾತಿ, ಅಕ್ರಮ ಸಕ್ರಮ, ಜಾಗ ಅತಿಕ್ರಮಣ ತೆರವುಗೊಳಿಸುವುದು, ಜಮೀನಿಗೆ ತೆರಳಲು ದಾರಿ ಬಿಡಿಸುವುದು, ಸಮಾಜ ಕಲ್ಯಾಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಪೊಲೀಸ್, ಕೃಷಿ, ಆಹಾರ, ಸೆಸ್ಕ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹೀಗೆ ವಿವಿಧ ಇಲಾಖೆಗೆ ಸಂಬಂಧಿಸಿ ಹೆಚ್ಚು ಅರ್ಜಿಗಳು ಸಲ್ಲಿಕೆಯಾದವು.

ಕಂದಾಯ ಇಲಾಖೆಗೆ ಸಂಬಂಧಿಸಿ 40ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿ, ಹಕ್ಕುಪತ್ರ, ನಿವೇಶನ ಒದಗಿಸುವುದು, ಮನೆ ನಿರ್ಮಾಣ, ಕೃಷಿ ಭೂಮಿ ಅತಿಕ್ರಮಣ ಮಾಡಿಕೊಂಡಿರುವುದು ಇಂದಿನ ಕುಂದುಕೊರತೆ ಸಭೆಯಲ್ಲಿ ಹೆಚ್ಚಾಗಿ ಕೇಳಿಬಂದವು.

ಸಿಐಟಿಯು ಜಿಲ್ಲಾಧ್ಯಕ್ಷ ಕುಂಬೂರಿನ ಸೋಮಪ್ಪ ಮಾತನಾಡಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಹಲವು ಸಮಸ್ಯೆಗಳಿದ್ದು, ಸಾಕಷ್ಟು ಮನವಿಗಳನ್ನು ಅಧಿಕಾರಿಗಳ ಗಮನಕ್ಕೆ ತಂದರೂ, ಯಾವುದೇ ಪ್ರಯೋಜನವಾಗಿಲ್ಲ. ಸಮಸ್ಯೆ ಪರಿಹರಿಸಬೇಕು. ಇಂದಿಗೂ ನಿವೇಶನ ಹಾಗೂ ಹಕ್ಕುಪತ್ರ ಇಲ್ಲದೆ ಮನೆ ನಿರ್ಮಾಣ ಕಷ್ಟವಾಗಿದೆ ಎಂದು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು.

ದಲಿತ ಮುಖಂಡ ಬಸವಯ್ಯ ಮಾತನಾಡಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಇಂದಿಗೂ ಸಂಕಷ್ಟದಲ್ಲಿ ಜೀವನ ದೂಡುತ್ತಿದ್ದು, ಇವರಿಗೆ ಕನಿಷ್ಠ ಮೂಲ ಸೌಲಭ್ಯವನ್ನಾದರೂ ಒದಗಿಸಬೇಕು. ಕೊಡ್ಲಿಪೇಟೆ, ಶನಿವಾರಸಂತೆ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪರಿಶಿಷ್ಟರು ಇದ್ದು, ಈ ಜನರಿಗೆ ನಿವೇಶನ ಹಾಗೂ ಜಮೀನು ಒದಗಿಸಬೇಕೆಂದು ಮನವಿ ಮಾಡಿದರು.

ಕುಶಾಲನಗರದ ರಾಜು ಮಾತನಾಡಿ, ಕುಶಾಲನಗರ ಬಳಿಯ ಸಿದ್ಧಲಿಂಗಪುರ ಬಳಿ ಸರ್ಕಾರಿ ಭೂಮಿ ಇದ್ದು, ಆ ಭೂಮಿಯಲ್ಲಿ ಇತರರು ಅತಿಕ್ರಮಣ ಮಾಡಿಕೊಂಡು ವಾಸ ಮಾಡುತ್ತಿದ್ದಾರೆ. ಇದನ್ನು ತೆರವುಗೊಳಿಸಬೇಕು. ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಸಕಾಲದಲ್ಲಿ ಸಾಲ ಸೌಲಭ್ಯ ನೀಡಬೇಕು ಎಂದು ತಿಳಿಸಿದರು.

ಉದಯ ಕುಮಾರ್ ಮಾತನಾಡಿ, ಪರಿಶಿಷ್ಟರ ಶ್ರೇಯೋಭಿವೃದ್ಧಿಗೆ ಪೊಲೀಸ್ ಇಲಾಖೆಯ ಪಾತ್ರ ಪ್ರಮುಖವಾಗಿದೆ. ಆ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯವರು ನಿಷ್ಪಕ್ಷಪಾತವಾಗಿ ಕರ್ತವ್ಯ ನಿರ್ವಹಿಸಿದ್ದಲ್ಲಿ ಹಲವು ಸಮಸ್ಯೆಗಳನ್ನು ಪರಿಹರಿಸಬಹುದಾಗಿದ್ದು, ಇಲಾಖೆ ಮುಂದಾಗಬೇಕೆಂದರು.

ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಶೇಖರ್, ತಹಶೀಲ್ದಾರ್ ಕೃಷ್ಣಮೂರ್ತಿ, ಕಿರಣ್ ಗೌರಯ್ಯ, ತಾ.ಪಂ. ಇಒ ಪರಮೇಶ ಕುಮಾರ್, ತಾಲ್ಲೂಕು ಮಟ್ಟದ ಅಧಿಕಾರಿಗಳು, ಸೋಮವಾರಪೇಟೆ ಮತ್ತು ಕುಶಾಲನಗರ ತಾಲ್ಲೂಕಿನ ಪರಿಶಿಷ್ಟ ಜಾತಿಯವರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-51-388124543

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.