ಮಡಿಕೇರಿ: ಜೂನ್ 1ರಿಂದ ಕೊಡಗು ಜಿಲ್ಲೆಯ ಎಲ್ಲ ಶಾಲೆಗಳು ಆರಂಭವಾಗಲಿದ್ದು, ಭರದ ಸಿದ್ಧತೆಗಳು ನಡೆದಿವೆ.

ಜಿಲ್ಲೆಯಲ್ಲಿ ಒಟ್ಟು 605 ಶಾಲೆಗಳು ಇವೆ. ಕುಶಾಲನಗರ ತಾಲ್ಲೂಕನ್ನು ಒಳಗೊಂಡ ಸೋಮವಾರಪೇಟೆ ತಾಲ್ಲೂಕಿನಲ್ಲಿ 219, ಪೊನ್ನಂಪೇಟೆ ತಾಲ್ಲೂಕನ್ನು ಒಳಗೊಂಡ ವಿರಾಜಪೇಟೆಯಲ್ಲಿ 207 ಹಾಗೂ ಮಡಿಕೇರಿ ತಾಲ್ಲೂಕಿನಲ್ಲಿ 179 ಶಾಲೆಗಳು ಇವೆ. ಸದ್ಯದ ಮಟ್ಟಿಗೆ ಯಾವುದೇ ಶಾಲೆಗಳನ್ನು ಮುಚ್ಚುವ ಪ್ರಸ್ತಾವ ಇಲ್ಲ ಎಂದು ಡಿಡಿಪಿಐ ಬಸವರಾಜು ‘ಪ್ರಜಾವಾಣಿ’ಗೆ ತಿಳಿಸಿದರು.

ಶಾಲೆಗಳಿಗೆ ಶುಕ್ರವಾರದಿಂದಲೇ ಭೇಟಿ ನೀಡಿರುವ ಶಿಕ್ಷಕರು ಕೊಠಡಿಗಳನ್ನು ಸ್ವಚ್ಛಗೊಳಿಸಿದ್ದಾರೆ. ಶನಿವಾರ ಮತ್ತು ಭಾನುವಾರ ತಳಿರು, ತೋರಣ ಕಟ್ಟಿ ಸಿಂಗರಿಸಿದ್ದಾರೆ. ಬರುವ ಮಕ್ಕಳಿಗೆ ಕೆಲವಡೆ ಗುಲಾಬಿ ಹೂ ನೀಡಲು, ಸಿಹಿ ಹಂಚಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಎತ್ತಿನಗಾಡಿಯಲ್ಲಿ ಕುಳ್ಳಿರಿಸಿಕೊಂಡು ಅಪ್ಪಟ ಗ್ರಾಮೀಣ ಸೊಗಡಿನಲ್ಲಿ ಮಕ್ಕಳನ್ನು ಶಾಲೆಗೆ ಕರೆತರಲು ಸಿದ್ಧತೆ ನಡೆಸಲಾಗಿದೆ.

ಮಡಿಕೇರಿಯ ಪಿಎಂಶ್ರೀ ಶಾಲೆ ಮತ್ತು ಜ್ಯೂನಿಯರ್ ಕಾಲೇಜಿನ ಪ್ರೌಢಶಾಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಜಿಲ್ಲಾಮಟ್ಟದ ಕಾರ್ಯಕ್ರಮ ಆಯೋಜಿಸಿದೆ. ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ ಅವರನ್ನು ಆಹ್ವಾನಿಸಿ ಮಕ್ಕಳನ್ನು ಸ್ವಾಗತಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ಒಂದೆರಡು ದಿನಗಳಲ್ಲಿ ಕಟ್ಟಡ ಸುರಕ್ಷತಾ ಪ್ರಮಾಣಪತ್ರ ಈ ಬಾರಿ ಇದೇ ಮೊದಲ ಬಾರಿಗೆ ಕಟ್ಟಡ ಸುರಕ್ಷತಾ ಪ್ರಮಾಣಪತ್ರ ನೀಡಬೇಕು ಎಂದು ಸರ್ಕಾರ ಸೂಚಿಸಿದೆ. ಇನ್ನು ಒಂದೆರಡು ದಿನಗಳಲ್ಲಿ ಈ ಪ್ರಮಾಣಪತ್ರ ನೀಡಲಾಗುವುದು ಎಂದು ಡಿಡಿಪಿಐ ಬಸವರಾಜು ತಿಳಿಸಿದ್ದಾರೆ. ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದ ಎಂಜಿನಿಯರ್ಗಳೊಂದಿಗೆ ಕ್ಷೇತ್ರ ಶಿಕ್ಷಣ ಅಧಿಕಾರಿ ಮತ್ತು ಆಯಾ ಶಾಲಾ ಮುಖ್ಯ ಶಿಕ್ಷಕರು ಶಾಲಾ ಕಟ್ಟಡ ಪರಿಶೀಲಿಸಿ ಪ್ರಮಾಣಪತ್ರ ನೀಡಲಿದ್ದಾರೆ.

ಕೊಡಗು ಜಿಲ್ಲೆಗೆ ಈಗಾಗಲೇ ಶೇ 80ರಷ್ಟು ಪಠ್ಯಪುಸ್ತಕ ಪೂರೈಕೆಯಾಗಿದೆ, ಸಮವಸ್ತ್ರ ಶೇ 100ರಷ್ಟು ಪೂರೈಕೆಯಾಗಿ ಡಿಡಿಪಿಐ ಹೇಳಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-51-310433117

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.