ಮಡಿಕೇರಿ: ಕೇರಳ ಗಡಿ ಭಾಗ ಕುಟ್ಟ ವ್ಯಾಪ್ತಿಯ ಹೋಂಸ್ಟೇವೊಂದರಲ್ಲಿ ವಿದೇಶಿ ಮಹಿಳೆಯೊಬ್ಬರು ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದಾರೆ ಎಂಬ ಸುದ್ದಿ ಕೊಡಗು ಜಿಲ್ಲೆಯಲ್ಲಿ ಸಂಚಲನ ಸೃಷ್ಟಿಸಿದೆ. ಜೊತೆಗೆ, ಇದು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಚರ್ಚೆಗೂ ಕಾರಣವಾಗಿದೆ.

ಪ್ರಕರಣ ತಿಳಿಯುತ್ತಿದ್ದಂತೆ ಜಿಲ್ಲೆಯ ಪೊಲೀಸರು ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾದ ಜಾರ್ಖಾಂಡ್ ರಾಜ್ಯದ ಆರೋಪಿ ಹಾಗೂ ಹೋಂಸ್ಟೇ ಮಾಲೀಕ ಇಬ್ಬರನ್ನೂ ಬಂಧಿಸಿದ್ದಾರೆ. ಇದೊಂದು ಸೂಕ್ಷ್ಮ ಪ್ರಕರಣವಾಗಿರುವುದರಿಂದ ಹೆಚ್ಚಿನ ವಿವರ ನೀಡಲಾಗದು ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ತಮ್ಮ ‘ಎಕ್ಸ್’ ಖಾತೆಯಲ್ಲಿ ‘ಇದು ವ್ಯಕ್ತಿಯ ವಿರುದ್ಧದ ದಾಳಿಯಲ್ಲ. ರಾಷ್ಟ್ರದ ಮೌಲ್ಯಗಳ ಮೇಲಿನ ದಾಳಿ’ ಎಂದು ಹರಿಹಾಯ್ದಿದ್ದಾರೆ. ಅತಿಥಿ ದೇವೋಭವ ಎಂದು ಹೇಳುವ ದೇಶದಲ್ಲಿ ಘಟನೆ ನಡೆದಿದ್ದು ನಾಚಿಕೆಗೇಡಿನ ಸಂಗತಿ. ಸರ್ಕಾರ ಕೂಡಲೇ ಇದರಲ್ಲಿ ಭಾಗಿಯಾಗಿರುವ ಎಲ್ಲರ ವಿರುದ್ಧ ತ್ವರಿತ ಮತ್ತು ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು’ ಎಂದುಒತ್ತಾಯಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ಎಸ್.ಪಿ ಅವರೊಂದಿಗೆ ದೂರವಾಣಿ ಮೂಲಕ ಮಾಹಿತಿ ಪಡೆದಿದ್ದಾರೆ. ‘ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸಬೇಕು’ ಎಂದೂ ಸೂಚಿಸಿದ್ದಾರೆ.

ಪ್ರಕರಣ ಕುರಿತು ಅನೇಕ ಊಹಾಪೋಹಾಗಳು ಹಬ್ಬಿದೆ. ರಾಯಭಾರ ಕಚೇರಿಯಿಂದ ಅಧಿಕಾರಿಗಳು ಇಲ್ಲಿಗೆ ಬಂದಿದ್ದರು ಹೀಗೆ ಅನೇಕ ಬಗೆಯ ವದಂತಿಗಳೂ ಹರಡಿವೆ. ಆದರೆ, ಇವೆಲ್ಲವನ್ನು ಪೊಲೀಸರು ಸ್ಪಷ್ಟವಾಗಿ ತಳ್ಳಿ ಹಾಕಿದ್ದಾರೆ.

‘ಪ್ರಕರಣ ನಡೆದಿದೆ ಎಂಬ ಮಾಹಿತಿ ಅರಿತ ಮರು ಗಳಿಗೆಯಲ್ಲೇ ಕಾರ್ಯಾಚರಣೆ ಆರಂಭವಾಯಿತು. ಪ್ರಕರಣದ ಎಲ್ಲ ಇಬ್ಬರು ಆರೋಪಿಗಳನ್ನು ಬಂಧಿಸಲಾಯಿತು. ತ್ವರಿತವಾಗಿ ಕಾನೂನು ಕ್ರಮ ಕೈಗೊಳ್ಳಲಾಗಿದೆ. ತನಿಖಾ ಹಂತದಲ್ಲಿರುವುದರಿಂದ ನಿಯಮಾನುಸಾರ ಇಂತಹ ಪ್ರಕರಣಗಳಲ್ಲಿ ಹೆಚ್ಚಿನ ವಿವರಗಳನ್ನು ನೀಡಲಾಗದು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ‘ಪ್ರಜಾವಾಣಿ’ಗೆ ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-51-1248993738

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.