ಕುಶಾಲನಗರ: ಪಟ್ಟಣದಲ್ಲಿ ಜೂ.23 ರಂದು ಆಯೋಜಿಸಲಾಗಿರುವ ಕೊಡಗು ಜಿಲ್ಲಾ ಪ್ರಥಮ ಶರಣ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ವಿರಾಜಪೇಟೆ ತಾಲ್ಲೂಕಿನ ಅರಮೇರಿಯ ಕಳಂಚೇರಿ ಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ತೊರೆನೂರು ವಿರಕ್ತ ಮಠದಲ್ಲಿ ಕಿರಿಕೊಡ್ಲಿ ಮಠದ ಸದಾಶಿವ ಸ್ವಾಮೀಜಿ ಅಧ್ಯಕ್ಷತೆಯಲ್ಲಿ ಈಚೆಗೆ ನಡೆದ ಸಮ್ಮೇಳನ ಸಮಿತಿಯ ಪದಾಧಿಕಾರಿಗಳು ಹಾಗೂ ಪ್ರಮುಖರ ಸಭೆಯಲ್ಲಿ ಈ ಆಯ್ಕೆ ನಡೆಯಿತು.

ಕಳೆದ ಹಲವು ದಶಕಗಳಿಂದ ಮಠದ ಪೀಠಾಧಿಪತಿಯಾಗಿ ಕಾರ್ಯನಿರ್ವಹಿಸುತ್ತಿರುವ ಶಾಂತಮಲ್ಲಿಕಾರ್ಜುನ ಶ್ರೀಗಳು, ದಕ್ಷಿಣ ಕೊಡಗಿನಲ್ಲಿ ಎಸ್.ಎಂ.ಎಸ್ ವಿದ್ಯಾಸಂಸ್ಥೆಯನ್ನು ತೆರೆಯುವ ಮೂಲಕ ಶಿಕ್ಷಣ ಸೇವೆಯಲ್ಲಿ, ಹೊಂಬೆಳಕು ಎಂಬ ಮಾಸಿಕ ತತ್ವ ಚಿಂತನಾಗೊಷ್ಠಿಯ ಮೂಲಕ ಶರಣರ ಸಂದೇಶಗಳನ್ನು ಸಾರುತ್ತಾ ಕೊಡಗು ಜಿಲ್ಲೆಯ ಸರ್ವ ಜನ ಸಮುದಾಯದ ಭಕ್ತಿ ಹಾಗೂ ಶ್ರದ್ಧೆಯ ಪ್ರತೀಕವಾಗಿದ್ದು, ಸಮಾಜಕ್ಕೆ ಮಾರ್ಗದರ್ಶನ ನೀಡುತ್ತಿರುವ ಶ್ರೀಗಳ ಆಯ್ಕೆ ಸ್ವಾಗತಾರ್ಹ ಎಂದು ಕೊಡ್ಲಿಪೇಟೆ ಕಿರಿಕೊಡ್ಲಿ ಮಠದ ಸದಾಶಿವ ಸ್ವಾಮೀಜಿ ಹೇಳಿದರು.

ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ ಮಾತನಾಡಿ, ಜೂನ್ 23ರಂದು ಇಲ್ಲಿನ ರೈತ ಸಹಕಾರ ಭವನದಲ್ಲಿ ಅಯೋಜಿಸಿರುವ ಶರಣ ಸಾಹಿತ್ಯ ಸಮ್ಮೇಳನದ ರೂಪುರೇಷೆಗಳ ಕುರಿತು ವಿವರಿಸಿದರು.

ಸುತ್ತೂರು ಶ್ರೀಗಳ ಸಾನ್ನಿಧ್ಯದಲ್ಲಿ ಜರುಗುತ್ತಿರುವ ಸಮ್ಮೇಳನದಲ್ಲಿ ಕೊಡಗು ಜಿಲ್ಲೆಯ ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸಿ ಗೌರವಿಸುವ ಬಗ್ಗೆ ಹಾಗೂ ಕೊಡಗು ಜಿಲ್ಲೆಯಲ್ಲಿ ಶರಣ ಸಾಹಿತ್ಯ ಪರಿಷತ್ತು ವತಿಯಿಂದ ಶರಣರ ವಿಚಾರ ಧಾರೆಗಳ ಕುರಿತ ಸ್ಮರಣ ಸಂಚಿಕೆ ಹೊರತರುವ ಬಗ್ಗೆ ಸಭೆ ತೀರ್ಮಾನಿಸಿತು.

ಸದಾಶಿವ ಸ್ವಾಮೀಜಿ ನೇತೃತ್ವದಲ್ಲಿ ಸಮ್ಮೇಳನ ಸಮಿತಿಯ ಪದಾಧಿಕಾರಿಗಳು ಕಳಂಚೇರಿ ಮಠಕ್ಕೆ ತೆರಳಿ ಶ್ರೀಗಳನ್ನು ಸಮ್ಮೇಳನಕ್ಕೆ ಆಹ್ವಾನಿಸುವ ಬಗ್ಗೆ ನಿರ್ಣಯಿಸಲಾಯಿತು.

ತೊರೆನೂರು ವಿರಕ್ತ ಮಠದ ಶ್ರೀ ಮಲ್ಲೇಶ ಸ್ವಾಮೀಜಿ, ಸಮ್ಮೇಳನ ಸಮಿತಿಯ ಗೌರವ ಅಧ್ಯಕ್ಷರಾದ ಎಚ್.ವಿ.ಶಿವಪ್ಪ, ಆರ್ಥಿಕ ಸಮಿತಿ ಅಧ್ಯಕ್ಷ ಸಾಂಬಶಿವಯ್ಯ, ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಎಸ್.ನಂದೀಶ್, ಅಲಂಕಾರ ಸಮಿತಿ ಅಧ್ಯಕ್ಷೆ ಹೇಮಲತಾ, ಸತ್ಕಾರ ಸಮಿತಿ ಅಧ್ಯಕ್ಷ ಜಿ.ಬಿ.ಲೋಕೇಶ್, ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಬಿ.ನಟರಾಜು, ಕೋಶಾಧ್ಯಕ್ಷ ಕೆ.ಪಿ.ಪರಮೇಶ್, ಶಸಾಪ ಯುವ ಘಟಕದ ಜಿಲ್ಲಾ ಅಧ್ಯಕ್ಷ ಹಕ್ಕೆ ಮೋಹನ್, ಜಿಲ್ಲಾ ಕದಳಿ ವೇದಿಕೆ ಅಧ್ಯಕ್ಷೆ ಸರೋಜಾ ಆರಾಧ್ಯ, ವೇದಶ್ರೀ ಶಿವರಾಜಪ್ಪ, ವೇದಶ್ರೀ ಮಲ್ಲಿಕಾರ್ಜುನ ಸ್ವಾಮಿ, ಕುಶಾಲನಗರ ಎಪಿಸಿಎಂಎಸ್ ಅಧ್ಯಕ್ಷ ಹೆಚ್.ಬಿ.ಚಂದ್ರಪ್ಪ, ಮೆರವಣಿಗೆ ಸಮಿತಿಯ ಟಿ.ಬಿ.ಜಗದೀಶ್, ಕೆ.ಎಸ್.ಕೃಷ್ಣೇಗೌಡ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-51-357733788

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.