ಸೋಮವಾರಪೇಟೆ: ತಾಲ್ಲೂಕಿನ ಕುಂಬೂರು ಗ್ರಾಮದಲ್ಲಿ ನಿವೇಶನ ರಹಿತ ಬಡವರಿಗೆ ನಿವೇಶನ ನೀಡುವಂತೆ ಒತ್ತಾಯಿಸಿ, ಕರ್ನಾಟಕ ಬಹುಜನ ಕಾರ್ಮಿಕ ಸಂಘಟನೆಯ ನೇತೃತ್ವದಲ್ಲಿ ಕುಂಬೂರು ಗ್ರಾಮದ ಪೈಸಾರಿ ಜಾಗದಲ್ಲಿ ವಸತಿರಹಿತ ಕಾರ್ಮಿಕರು ನಡೆಸುತ್ತಿರುವ ಆಹೋರಾತ್ರಿ ಧರಣಿ 13 ನೇ ದಿನಕ್ಕೆ ಕಾಲಿಟ್ಟಿದೆ.

ಧರಣಿ ನಡೆಯುತ್ತಿರುವ ಕುಂಬೂರು ಸ.ನಂ125/1 ಮತ್ತು 22/1 ಜಾಗದ ಸರ್ವೆಗೆ ಬುಧವಾರ ತಹಶೀಲ್ದಾರ್ ಮತ್ತು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಬರುತ್ತಾರೆ ಎಂದು ಮಾದಾಪುರ ಪಿಡಿಓ ಅವರು ಧರಣಿ ನಿರತರಿಗೆ ಮಂಗಳವಾರ ಮಾಹಿತಿ ನೀಡಿದ್ದರು. ಆದರೆ ಇಂದು ತಹಶೀಲ್ದಾರ್ ಕೃಷ್ಣಮೂರ್ತಿ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಪರಮೇಶ ಕುಮಾರ್ ಅವರು ಸ್ಥಳಕ್ಕೆ ತೆರಳಿ ಧರಣಿ ನಿರತರೊಂದಿಗೆ ಮಾತುಕತೆ ನಡೆಸಿ, ನಿವೇಶನ ರಹಿತರಿಗೆ ನಿವೇಶನ ನೀಡಲು ಸರ್ಕಾರದ ಮಟ್ಟದಲ್ಲಿ ಕ್ರಮ ಕೈಗೊಳ್ಳಲಾಗುವುದು. ಅಲ್ಲಿಯವರೆಗೂ ಧರಣಿಯನ್ನು ಹಿಂಪಡೆಯುವಂತೆ ಮನವಿ ಮಾಡಿದರು.

ಇದಕ್ಕೆ ಸ್ಪಂದನೆ ನೀಡದ ನಿವೇಶನ ರಹಿತರು, ನಮಗೆ ನಿವೇಶನ ನೀಡಿದ ನಂತರವಷ್ಟೇ ಇಲ್ಲಿಂದ ತೆರಳುತ್ತೇವೆ. ಅಲ್ಲಿಯವರೆಗೂ ಯಾವುದೇ ಮನವೊಲಿಕೆ, ಭರವಸೆಗಳಿಗೆ ಮಣಿಯುವುದಿಲ್ಲ ಎಂದು ತಿಳಿಸಿದರು. ಕರ್ನಾಟಕ ಬಹುಜನ ಕಾರ್ಮಿಕ ಸಂಘಟನೆಯ ಅಧ್ಯಕ್ಷ ಮೊಣ್ಣಪ್ಪ ಮಾತನಾಡಿ, ಸುಭದ್ರ ಭಾರತ ದೇಶ ಕಟ್ಟುವಲ್ಲಿ ಶ್ರಮಿಕರ ಕೊಡುಗೆ ಅಪಾರವಾಗಿದೆ. ದುಡಿಯುವ ಜನರಿಗೆ ಸೂರಿಲ್ಲದಂತಹ ಹೀನ ಪರಿಸ್ಥಿತಿಯಲ್ಲಿ ನಾವಿದ್ದೇವೆ ಎಂದು ದೂರಿದರು. ಗರಗಂದೂರು ಗ್ರಾಮದ ಸ.ನಂ. 40/1 ರಲ್ಲಿ 46 ಎಕರೆ ಪೈಸಾರಿ ಜಾಗವಿದ್ದು, ಇದರಲ್ಲಿ 12 ಸೆಂಟ್ಸ್ ಜಾಗವನ್ನು ಮಿನಿ ಆರೋಗ್ಯ ಕೇಂದ್ರಕ್ಕೆ ನೀಡಬಹುದು ಎಂದು ತಹಶೀಲ್ದಾರ್ ವರದಿ ನೀಡಿದ್ದಾರೆ. ಉಳಿದಿರುವ ಜಾಗವನ್ನು ಗುರುತಿಸಿ ಧರಣಿ ನಿರತರಿಗೆ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಒತ್ತಾಯಿಸಿದರು. ಅಲ್ಲಿಯವರೆಗೂ ಹೋರಾಟ ನಿರಂತರವಾಗಿರಲಿದೆ ಎಂದರಲ್ಲದೆ, ಈ ಸಂಬಂಧಿತ ಮನವಿಯನ್ನು ಅಧಿಕಾರಿಗಳಿಗೆ ಸಲ್ಲಿಸಿ, ಧರಣಿ ಮುಂದುವರೆಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-51-653625398

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.