ನಾಪೋಕ್ಲು: ಸಮಾಜದ ಮಂದಿ ಒಗ್ಗೂಡಲು ಕ್ರೀಡಾಕೂಟ ಒಂದು ಉತ್ತಮ ವೇದಿಕೆಯಾಗಿದೆ ಎಂದು ಸಾಮಾಜಿಕ ಕಾರ್ಯಕರ್ತ ಎಡಿಕೇರಿ ಪ್ರಸನ್ನ ಹೇಳಿದರು.

ಸಮೀಪದ ಬಲ್ಲಮಾವಟಿ ಗ್ರಾಮದಲ್ಲಿ ನಮೋ ಯುವಕ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಎರಡನೇ ವರ್ಷದ ಹೊನಲು ಬೆಳಕಿನ ಶಟಲ್ ಬ್ಯಾಡ್ಮಿಂಟನ್ ಟೂರ್ನಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಗ್ರಾಮೀಣ ಭಾಗದಲ್ಲಿ ಯುವಕರು ಒಗ್ಗೂಡಿ ಕ್ರೀಡಾಕೂಟವನ್ನು ಆಯೋಜಿಸುತ್ತಿರುವುದು ಸಂತಸದ ವಿಷಯ. ಇದರಿಂದ ಗ್ರಾಮೀಣ ಪ್ರದೇಶದಲ್ಲಿ ಜನರ ನಡುವಿನ ಸಾಮರಸ್ಯಕ್ಕೆ ಒಗ್ಗೂಡುವಿಕೆಗೆ ಸಹಕಾರಿಯಾಗುತ್ತದೆ’ ಎಂದರು. ನಮೋ ಯುವಕ ಸಂಘದ ಅಧ್ಯಕ್ಷ ಬೈರುಡ ವಸಂತ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬಲ್ಲಮಾವಟಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಚೋಕಿರ ಭಾಭಿ ಭೀಮಯ್ಯ, ಮಾಜಿ ಅಧ್ಯಕ್ಷ ಮಣವಟ್ಟೀರ ಹರೀಶ್ ಕುಶಾಲಪ್ಪ, ನಾಲ್ನಾಡ್ ಹಾಕಿ ಕ್ಲಬ್ ಅಧ್ಯಕ್ಷ ಕರವಂಡ ಸುರೇಶ್, ಬಿ.ಎಂ.ಪ್ರದೀಪ್, ಬೊಟ್ಟೋಳಂಡ ಜಾನಕಿ, ಸಂಘದ ಕಾರ್ಯದರ್ಶಿ ಹೊಸೊಕ್ಲು ಶ್ರೀಕಾಂತ್, ಗೌರವ ಕಾರ್ಯದರ್ಶಿ ಚೀಯಂಡ ದಿನೇಶ್, ಖಜಾಂಚಿ ರೋಷನ್ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260324-51-188615623

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.