ಕುಶಾಲನಗರ: ಕೊಡಗು ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷಾ ಫಲಿತಾಂಶವನ್ನು ಉತ್ತಮಪಡಿಸಲು ಶಾಲಾ ಶಿಕ್ಷಣ ಇಲಾಖೆಯು ವಿಶೇಷ ಕಾಳಜಿ ವಹಿಸಿದ್ದು, ಈ ಬಾರಿ ಜಿಲ್ಲೆ ರಾಜ್ಯಕ್ಕೆ ಮೊದಲ ಅಥವಾ ಎರಡನೇ ಸ್ಥಾನ ಗಳಿಸುವ ಗುರಿ ಹೊಂದಲಾಗಿದೆ ಎಂದು ಕೂಡಿಗೆಯ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಂಶುಪಾಕ ರಾಮಚಂದ್ರರಾಜೇ ಅರಸ್ ಹೇಳಿದರು.

ಶಾಲಾ ಶಿಕ್ಷಣ ಇಲಾಖೆಯ ಸೋಮವಾರಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವತಿಯಿಂದ ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಎಸ್ಎಸ್ಎಲ್ಸಿ ರಾಜ್ಯಮಟ್ಟದ ಪೂರ್ವಸಿದ್ಧತಾ ಪರೀಕ್ಷೆ-3ರ ಫಲಿತಾಂಶ ವಿಶ್ಲೇಷಣೆ ಹಾಗೂ ವಾರ್ಷಿಕ ಪರೀಕ್ಷೆ ಕುರಿತು ಪ್ರೌಢಶಾಲಾ ಮುಖ್ಯ ಶಿಕ್ಷಕರಿಗೆ ಬುಧವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಸಕ್ತ ವರ್ಷ, ಜಿಲ್ಲೆಯ ಪ್ರೌಢಶಾಲೆಗಳಲ್ಲಿ ಪರೀಕ್ಷಾ ಫಲಿತಾಂಶದ ಗುಣಮಟ್ಟವನ್ನು ಹೆಚ್ಚಿಸುವ ಗುರಿಯೊಂದಿಗೆ ಉತ್ತಮ ಸಿದ್ಧತೆ ನಡೆಸಿರುವುದು ಕಂಡುಬಂದಿದೆ.ವಿದ್ಯಾರ್ಥಿಗಳ ಉತ್ತಮ ಕಲಿಕೆಗೆ ಮುಖ್ಯ ಶಿಕ್ಷಕರು ಹಾಗೂ ಸಹ ಶಿಕ್ಷಕರು ಹೆಚ್ಚಿನ ಪರಿಶ್ರಮ ನಡೆಸಿರುವುದು ಶ್ಲಾಘನೀಯವಾದುದು ಎಂದರು.

ಮಾರ್ಚ್ 18ರಿಂದ ಏಪ್ರಿಲ್ 2ರ ವರೆಗೆ ನಡೆಯಲಿರುವ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯನ್ನು ವ್ಯವಸ್ಥಿತವಾಗಿ ಹಾಗೂ ಪಾರದರ್ಶಕವಾಗಿ ನಡೆಸುವ ಮೂಲಕ ಪರೀಕ್ಷಾ ಪಾವಿತ್ರ್ಯತೆಯನ್ನು ಕಾಪಾಡಲು ಕ್ರಮ ವಹಿಸಬೇಕು ಎಂದು ಸಲಹೆ ನೀಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಕೃಷ್ಣಪ್ಪ ಮಾತನಾಡಿ, ತಾಲ್ಲೂಕಿನ ಎಲ್ಲಾ ಪ್ರೌಢಶಾಲೆಗಳಲ್ಲಿ ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಸಿದ್ಧಗೊಳಿಸಿದ್ದು, ಜಿಲ್ಲೆಯಲ್ಲಿ ಈ ಬಾರಿ ಉತ್ತಮ ಫಲಿತಾಂಶ ನಿರೀಕ್ಷಿಸಲಾಗಿದೆ ಎಂದರು.

ವಾರ್ಷಿಕ ಪರೀಕ್ಷೆ- 1ರಲ್ಲಿ ತಾಲ್ಲೂಕಿನಲ್ಲಿ 12 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 2,481 ಮಂದಿ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷಾ ಕೇಂದ್ರಗಳಲ್ಲಿ ಮೂಲಸೌಲಭ್ಯ ಒದಗಿಸಲು ಕ್ರಮ ವಹಿಸಲಾಗಿದೆ. ಪರೀಕ್ಷೆಗಳನ್ನು ಅಚ್ಚುಕಟ್ಟಾಗಿ ನಡೆಸಲು ಸಕಲ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ತಾಲ್ಲೂಕು ಎಸ್ಎಸ್ಎಲ್ಸಿ ಪರೀಕ್ಷೆಯ ನೋಡಲ್ ಅಧಿಕಾರಿ ಎಸ್.ಎಸ್.ಶಿವಕುಮಾರ್, ತಾಲ್ಲೂಕಿನಲ್ಲಿ ಶಿಕ್ಷಣ ಇಲಾಖೆಯ ವತಿಯಿಂದ ಎಸ್ಎಸ್ಎಲ್ಸಿ ಪರೀಕ್ಷೆ ಕುರಿತು ಕೈಗೊಂಡಿರುವ ಕ್ರಮಗಳ ಮಾಹಿತಿ ನೀಡಿದರು.

ಈ ಸಂದರ್ಭ ಜಿಲ್ಲಾ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಹ್ಯಾರಿ ಮೋರಸ್, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಮೈಸೂರು ವಿಭಾಗೀಯ ಉಪಾಧ್ಯಕ್ಷ ಪಿ.ನವೀನ್ ಕುಮಾರ್, ಕಾಲೇಜಿನ ಪ್ರೌಢಶಾಲಾ ವಿಭಾಗದ ಪ್ರಭಾರ ಉಪ ಪ್ರಾಂಶುಪಾಲ ಎ.ಸಿ.ಮಂಜುನಾಥ್, ತಾಲ್ಲೂಕು ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷೆ ಇಂದಿರಾ, ಕಾರ್ಯದರ್ಶಿ ಸೋಮಯ್ಯ, ತಾಲ್ಲೂಕು ಸರ್ಕಾರಿ ನೌಕರರ ಸಂಘದ ನಿರ್ದೇಶಕ ಯಶವಂತ್, ತಾಲ್ಲೂಕಿನ ಎಲ್ಲಾ ಪ್ರೌಢಶಾಲಾ ಮುಖ್ಯ ಶಿಕ್ಷಕರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.