ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಬೀದಿನಾಯಿಗಳ ಸಂತಾನಶಕ್ತಿ ಹರಣವಾಗದೇ ವರ್ಷಗಳೇ ಕಳೆದಿದ್ದವು. ಮಡಿಕೇರಿಯಲ್ಲಿ 2 ವರ್ಷದ ಹಿಂದೆ ಕೆಲವು ನಾಯಿಗಳಿಗೆ ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಆದರೆ, ಜಿಲ್ಲಾಮಟ್ಟದಲ್ಲಿ ಒಟ್ಟಿಗೆ ಸಂತಾನಶಕ್ತಿ ಹರಣ ಕಾರ್ಯ ನಡೆದಿರಲಿಲ್ಲ. ಇದೀಗ ಇದೇ ಮೊದಲ ಬಾರಿಗೆ ಜಿಲ್ಲಾಮಟ್ಟದಲ್ಲಿ ಟೆಂಡರ್ ಆಹ್ವಾನಿಸಿ ಬೀದಿನಾಯಿಗಳ ಸಂತನಶಕ್ತಿ ಹರಣ ಶಸ್ತ್ರಚಿಕಿತ್ಸೆ ನಡೆಸಲಾಗುತ್ತಿದೆ.

ಪ್ರತಿ ವರ್ಷ ಪಶುಪಾಲನಾ ಇಲಾಖೆಯಿಂದ ರೇಬಿಸ್ ನಿರೋಧಕ ಚುಚ್ಚುಮದ್ದುಗಳನ್ನಷ್ಟೇ ನೀಡಲಾಗುತ್ತಿತ್ತು. ಆದರೆ, ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆಗೆ ಎಷ್ಟೇ ಬಾರಿ ಟೆಂಡರ್ ಕರೆದರೂ ಯಾರೊಬ್ಬರೂ ಆಸಕ್ತಿ ತೋರುತ್ತಿರಲಿಲ್ಲ. ಇದರಿಂದ ಜಿಲ್ಲೆಯ ಎಲ್ಲೆಡೆ ಬೀದಿನಾಯಿಗಳ ಸಂಖ್ಯೆ ವೃದ್ದಿಸಿ, ಜನರ ಸಂಚಾರಕ್ಕೆ ತೊಡಕಾಗುತ್ತಿತ್ತು. ದಿನವೊಂದಕ್ಕೆ ಕನಿಷ್ಠ ಎಂದರೂ 10ಕ್ಕೂ ಹೆಚ್ಚಿನ ಮಂದಿ ನಾಯಿ ಕಡಿತಕ್ಕೆ ಒಳಗಾಗಿ ಇಲ್ಲಿನ ಕೊಡಗು ಜಿಲ್ಲಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಸೇರಿದ ಬೋಧನಾ ಆಸ್ಪತ್ರೆಯಲ್ಲಿ ರೇಬಿಸ್ ನಿರೋಧಕ ಲಸಿಕೆ ಪಡೆದುಕೊಳ್ಳುತ್ತಿದ್ದರು. ಇದು ಜನರ ಆಕ್ರೋಶಕ್ಕೂ ಕಾರಣವಾಗಿತ್ತು.

ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳಲ್ಲಿ ಸದಸ್ಯರು ಬೀದಿನಾಯಿಗಳು ಹೆಚ್ಚಾಗುತ್ತಿರುವುದನ್ನು ಪದೇ ಪದೇ ಪ್ರಸ್ತಾಪಿಸುತ್ತಿದ್ದರು. ಆದರೆ, ಅಧಿಕಾರಿಗಳು ಎಷ್ಟೇ ಬಾರಿ ಟೆಂಡರ್ ಕರೆದರೂ ಯಾರೊಬ್ಬರೂ ಭಾಗವಹಿಸುತ್ತಿರಲಿಲ್ಲ. ಹೀಗಾಗಿ, ಜಿಲ್ಲಾ ನಗರಾಭಿವೃದ್ಧಿ ಕೋಶದಿಂದ ಜಿಲ್ಲಾಮಟ್ಟದಲ್ಲೇ ‘ಕ್ಲಸ್ಟರ್ ಟೆಂಡರ್’ ಅನ್ನು ಕರೆಯಲಾಯಿತು.

‘ಕೇರಾಫ್ ವೈಸ್ಲೆಸ್ ಎನಿಮಲ್ಸ್’ ಎಂಬ ಸರ್ಕಾರೇತರ ಸಂಸ್ಥೆಯೊಂದು ಟೆಂಡರ್ ಪಡೆದುಕೊಂಡು ಈಗಾಗಲೇ ಸೋಮವಾರಪೇಟೆ ಮತ್ತು ಕುಶಾಲನಗರದಲ್ಲಿ ಬೀದಿನಾಯಿಗಳ ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆ ನಡೆಸುತ್ತಿದೆ. ಮುಂದೆ, ಮಡಿಕೇರಿ, ವಿರಾಜಪೇಟೆ, ಪೊನ್ನಂಪೇಟೆಗಳಲ್ಲೂ ಈ ಕಾರ್ಯ ನಡೆಸಲಿದೆ ಎಂದು ಮೂಲಗಳು ತಿಳಿಸಿವೆ.ಯ

ಬೀದಿನಾಯಿಗಳನ್ನು ಟೆಂಡರ್ ತೆಗೆದುಕೊಂಡವರೇ ಹಿಡಿದು, ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆ ನಡೆಸಬೇಕು. 5 ದಿನಗಳ ಕಾಲ ಅವುಗಳ ಮೇಲೆ ನಿಗಾ ಇರಿಸಿ, ಅವರೇ ಆಹಾರ, ಔಷಧ ಪೂರೈಸಬೇಕು. ಮಾತ್ರವಲ್ಲ, ರೇಬಿಸ್ ನಿರೋಧಕ ಚುಚ್ಚುಮದ್ದನ್ನೂ ನೀಡಬೇಕು. ನಂತರ, ಎಲ್ಲಿ ಹಿಡಿಯಲಾಗಿತ್ತೋ ಅದೇ ಜಾಗಕ್ಕೆ ನಾಯಿಯನ್ನು ತಂದು ಬಿಡಬೇಕು. ಈ ನಿಯಮಗಳಡಿಯಲ್ಲಿ ಟೆಂಡರ್ ನೀಡಲಾಗಿದೆ.

ಒಂದು ಬೀದಿನಾಯಿಗೆ ₹ 1,732 ನಿಗದಿಪಡಿಸಲಾಗಿದೆ. ಆದರೆ, ಈ ಕಾರ್ಯಚಟುವಟಿಕೆಗಳಿಗೆ ಮೂಲಸೌಕರ್ಯಗಳನ್ನು ಸಂಬಂಧಿಸಿದ ಸ್ಥಳೀಯ ಸಂಸ್ಥೆಗಳು ಕಲ್ಪಿಸಬೇಕಿದೆ. ಸೂಕ್ತ ಜಾಗ, ನೀರು ಮತ್ತಿತ್ತರ ಸೌಕರ್ಯಗಳನ್ನು ಕಲ್ಪಿಸಬೇಕಿದೆ.

ಸದ್ಯ, ಈ ಕಾರ್ಯ ಸೋಮವಾರಪೇಟೆ ಪಟ್ಟಣದಲ್ಲಿ ಮುಗಿದಿದ್ದು, ಕುಶಾಲನಗರದಲ್ಲಿ ನಡೆಯುತ್ತಿದೆ. ಮುಂದೆ ಮಡಿಕೇರಿ, ವಿರಾಜಪೇಟೆ, ಪೊನ್ನಂಪೇಟೆ ಪಟ್ಟಣಗಳಲ್ಲೂ ಈ ಕಾರ್ಯ ನಡೆಯಲಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-51-1821648452

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.