ಸುಂಟಿಕೊಪ್ಪ: ಸಮೀಪದ ಕೊಡಗರಹಳ್ಳಿಯಲ್ಲಿ ನೆಲೆಸಿರುವ ಶ್ರೀ ಭೈತೂರಪ್ಪ ಪೊವ್ವೆದಿ ಬಸವೇಶ್ವರ ದೇವರ ವಾರ್ಷಿಕ ಹಬ್ಬ ವಿವಿಧ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಶ್ರದ್ಧಾ ಭಕ್ತಿಯಿಂದ ನೆರವೇರಿತು.

ಸೂರ್ಯೋದಯದ ವೇಳೆಗೆ ಗಣಹೋಮದೊಂದಿಗೆ ವಾರ್ಷಿಕ ಹಬ್ಬಕ್ಕೆ ಚಾಲನೆ ನೀಡಲಾಯಿತು. ನಂತರ ಬೈತೂರಪ್ಪ ಪೊವ್ವೆದಿ ಪರಿವಾರ ದೇವರುಗಳಿಗೆ ವಿಶೇಷ ಪೂಜೆ ಮತ್ತು ರುದ್ರಾಭೀಷೇಕವನ್ನು ದೇವಾಲಯದ ಪ್ರಧಾನ ಆರ್ಚಕರಾದ ರಾಘವೇಂದ್ರ ಭಟ್ ಮತ್ತು ನರಸಿಂಹ ಭಟ್ ಅವರ ತಂಡ ನೆರವೇರಿಸಿತು.

ದೇವತಕ್ಕರಾದ ಜಗ್ಗರಂಡ ಹ್ಯಾರಿ ಕಾರ್ಯಪ್ಪ ಅವರ ಮನೆಯಿಂದ ದೇವರ ಭಂಡಾರವನ್ನು ಆರ್ಚಕ ನರಸಿಂಹ ಭಟ್ ಅವರ ನೇತೃತ್ವದಲ್ಲಿ ಪೂಜೆ ಮತ್ತು ಧಾರ್ಮಿಕ ವಿಧಿವಿಧಾನಗಳನ್ನು ನಡೆಸಿ ದುಡಿಕೊಟ್ ಪಾಟ್ ಸಾಂಪ್ರಾದಾಯಿಕ ಕೊಡವ ಓಲಗದೊಂದಿಗೆ ದೇವಾಲಯಕ್ಕೆ ತಂದು ಪೂಜೆ ನೆರವೇರಿಸಲಾಯಿತು. ಮಧ್ಯಾಹ್ನ ಮಾಹಾಪೂಜೆಯ ಬಳಿಕ ತೀರ್ಥ ಪ್ರಸಾದದೊಂದಿಗೆ ಅನ್ನ ಸಂತರ್ಪಣೆ ನಡೆಯಿತು.

ದೇವಾಲಯದ ವಾರ್ಷಿಕ ಹಬ್ಬದ ಸಂದರ್ಭ ದೇವಾಲಯಕ್ಕೆ ಒಳಪಟ್ಟ ಕುಟುಂಬಗಳು ಸಾಂಪ್ರಾದಾಯಿಕ ವೇಷ ಭೂಷಣದೊಂದಿಗೆ ದೇವಾಲಯದ ಆವರಣದಲ್ಲಿ ಸೇರಿ ಸಾಂಪ್ರಾದಾಯಿಕ ಬೊಳಕಾಟ್ ನೃತ್ಯ ಸೇವೆ ಸಲ್ಲಿಸಿದವು. ವಿಶೇಷವೆಂದರೆ ಹಬ್ಬದ ಕಟ್ಟಿನ ಮರುದಿನದಿಂದ 11 ದಿನಗಳ ಕಾಲ ಬೆಳಗ್ಗಿನ ಜಾವದಲ್ಲಿ ದೀಪದ ಬೆಳಕಿನಲ್ಲಿ ದೇವರಿಗೆ ಬೊಳಕಾಟ್ ನೃತ್ಯ ಸೇವೆ ಸಾಂಪ್ರಾದಾಯಿಕ ಉಡುಪಿನಲ್ಲಿ ಸಲ್ಲಿಸುವುದು ವಿಶೇಷವಾಗಿದೆ.

ಮಾ.24ರಂದು ಗ್ರಾಮ ದೇವತೆಗೆ ಪೂಜೆ ಸಲ್ಲಿಸುವ ಮೂಲಕ ಮಾ.26 ರಂದು ದೇವಾಲಯದ ಆವರಣದಲ್ಲಿ ಹಬ್ಬದ ಕಟ್ಟನ್ನು ಹಾಕಲಾಗಿತ್ತು. ಏ.3ರಂದು ಶ್ರೀಬಸವೇಶ್ವರ ದೇವರ ಎತ್ತುಪೋರಾಟದೊಂದಿಗೆ ಹಬ್ಬಕ್ಕೆ ಚಾಲನೆ ನೀಡಲಾಗಿತ್ತು.

ಕೊಡಗರಹಳ್ಳಿ ಸೇರಿದಂತೆ ಸುತ್ತಮುತ್ತಲ ಗ್ರಾಮಸ್ಥರು ನೂರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು. ವಾರ್ಷಿಕ ಹಬ್ಬವನ್ನು ಬೈತೂರಪ್ಪ ಪೊವ್ವೆದಿ ಬಸವೇಶ್ವರ ದೇವಾಲಯ ಟ್ರಸ್ಟ್ ಮೇಲುಸ್ತುವಾರಿಯಲ್ಲಿ ದೇವ ತಕ್ಕರು ಮತ್ತು ಮುಕ್ಕಟಿಯವರ ನೇತೃತ್ವದಲ್ಲಿ ಯಶಸ್ವಿಯಾಗಿ ನಡೆಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260408-51-2094809425

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.