ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಡಗು: ಸೆರೆ ಸಿಕ್ಕ ಹುಲಿ

Last Updated 20 ಮೇ 2020, 22:00 IST
ಅಕ್ಷರ ಗಾತ್ರ

ಪೊನ್ನಂಪೇಟೆ: ದಕ್ಷಿಣ ಕೊಡಗಿನ ಪೊನ್ನಂಪೇಟೆ ಹಾಗೂ ಗೋಣಿಕೊಪ್ಪಲು ಭಾಗದಲ್ಲಿ ಆತಂಕ ಸೃಷ್ಟಿಸಿದ್ದ ಹುಲಿಯನ್ನು ಮಂಗಳವಾರ ರಾತ್ರಿ ಸೆರೆ ಹಿಡಿಯಲಾಗಿದೆ.

ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಈ ಹುಲಿಯನ್ನು ಹಿಡಿಯಲು, ಈ ಹಿಂದೆ ನಡೆಸಿದ ಎರಡು ಪ್ರಯತ್ನಗಳು ಫಲಿಸಿರಲಿಲ್ಲ. ಒಂದು ವಾರ ಹುಲಿಯು ಸಂಚರಿಸಿದ ಮಾರ್ಗದಲ್ಲಿ, ಆಯ್ದ ಕೆಲವೆಡೆ ಬಲೆಯ ವ್ಯವಸ್ಥೆ ಮಾಡಲಾಗಿತ್ತು. ಮೊದಲು ಬಲೆಗೆ ಕೆಡವಿ, ನಂತರ ಅರಿವಳಿಕೆ ಚುಚ್ಚುಮದ್ದು ನೀಡಿ ಸೆರೆಹಿಡಿಯಲಾಗಿದೆ. ‌

ವನ್ಯಜೀವಿ ಸಂಸ್ಥೆಯ ವನ್ಯಜೀವಿ ತಜ್ಞ ಡಾ.ಸನತ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಮೈಸೂರು ಸಮೀಪದ ಕೂರ್ಗಳ್ಳಿ ಪುನಶ್ಚೇತನ ಕೇಂದ್ರಕ್ಕೆ ಹುಲಿಯನ್ನು ರವಾನಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT