ಕುಶಾಲನಗರ: ತಾಲ್ಲೂಕಿನ ಗಡಿಗ್ರಾಮ ತೊರೆನೂರು ಗ್ರಾಮದಲ್ಲಿ 106 ವರ್ಷ ಪೂರೈಸಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಶಿರಂಗಾಲ ಶಾಲೆಗೆ ವಿಲೀನಗೊಳಿಸುವ ಹೆಸರಿನಲ್ಲಿ ಮುಚ್ಚಲು ಹೊರಟಿರುವ ಸರ್ಕಾರದ ನಡೆ ಖಂಡಿಸಿ ಎಐಡಿಎಸ್ಓ ನೇತೃತ್ವದಲ್ಲಿ ಗ್ರಾಮಸ್ಥರು, ಪೋಷಕರು ಹಾಗೂ ವಿದ್ಯಾರ್ಥಿಗಳು ಶುಕ್ರವಾರ ಪ್ರತಿಭಟನೆ ನಡೆಸಿದರು.

ತೊರೆನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಟಿ.ಬಿ.ಜಗದೀಶ್ ಮಾತನಾಡಿ, ‘ಕೊಡಗಿನ ಗಡಿ ಅರೆಮಲೆನಾಡು ಪ್ರದೇಶವಾದ ತೊರೆನೂರು ಗ್ರಾಮದಲ್ಲಿ ಸರ್ಕಾರಿ ಶಾಲೆ ಶತಮಾನ ಪೂರೈಸಿದ್ದು, ಸಾವಿರಾರು ವಿದ್ಯಾರ್ಥಿಗಳಿಗೆ ವಿದ್ಯಾದಾನ ಮಾಡಿ ಭವಿಷ್ಯ ರೂಪಿಸಿದೆ. ಇಂತಹ ಶಾಲೆಯನ್ನು ಮುಚ್ಚುವ ಹುನ್ನಾರ ನಡೆಯುತ್ತಿರುವುದು ಖಂಡನೀಯ. ಈ ಶಾಲೆ ಬಂದ್ ಮಾಡದೆ ಅಭಿವೃದ್ಧಿ ಪಡಿಸುವತ್ತ ಸರ್ಕಾರ ಚಿಂತನೆ ಹರಿಸಬೇಕು’ ಎಂದು ಒತ್ತಾಯಿಸಿದರು.

ಎಐಡಿಎಸ್ಒ ಜಿಲ್ಲಾ ಸಂಚಾಲಕಿ ಸ್ವಾತಿ ಮಾತನಾಡಿ, ‘ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆ ಇದೆ. ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಕಳುಹಿಸುತ್ತಿಲ್ಲ ಎಂದು ಹೇಳುವ ಸರ್ಕಾರ, ಶಾಲೆಗಳಿಗೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವಲ್ಲಿ ವಿಫಲವಾಗಿದೆ. ಮೊದಲು ಶಾಲೆಗಳಿಗೆ ಅಗತ್ಯ ಸೌಕರ್ಯ ಕಲ್ಪಿಸಬೇಕು. ಗ್ರಾಮೀಣ ಕನ್ನಡ ಶಾಲೆಗಳನ್ನು ಮುಚ್ಚಬಾರದು’ ಎಂದು ಆಗ್ರಹಿಸಿದರು.

ಗ್ರಾಮದ ಮುಖಂಡರಾದ ಟಿ.ಕೆ.ಪಾಂಡುರಂಗ, ಕೆ.ಎಸ್.ಕೃಷ್ಣೇಗೌಡ, ಎಚ್.ಬಿ.ಚಂದ್ರಪ್ಪ,ಶಿವಕುಮಾರ್, ಮಹೇಶ್, ರಾಜಾಚಾರ್, ಪುಟ್ಟಸ್ವಾಮಿ ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-51-1160802610

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.