ಮಡಿಕೇರಿ: ಕೊಡಗು ಜಿಲ್ಲೆಯ ಪ್ರವಾಸೋದ್ಯಮ ಕುರಿತು ವ್ಯಕ್ತವಾಗುತ್ತಿರುವ ಇಲ್ಲಸಲ್ಲದ ಟೀಕೆ, ದೂರುಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿಬಿಡುತ್ತಿರುವ ಕುರಿತ ಆತಂಕವು ಇಲ್ಲಿ ಮಂಗಳವಾರ ಕೊಡಗು ಹೋಟೆಲ್, ರೆಸಾರ್ಟ್ ಅಸೋಸಿಯೇಷನ್ ವತಿಯಿಂದ ನಡೆದ ವಿವಿಧ ಸಂಘಸಂಸ್ಥಗಳೊಂದಿಗಿನ ಸಭೆಯಲ್ಲಿ ವ್ಯಕ್ತವಾಯಿತು.

ಅಸೋಸಿಯೇಷನ್ ಅಧ್ಯಕ್ಷ ಕುಂಡ್ಯೊಳಂಡ ದಿನೇಶ್ ಕಾರ್ಯಪ್ಪ ಮಾತನಾಡಿ, ‘ಕೊಡಗಿನ ಆತಿಥ್ಯ ಸಂಸ್ಕೖತಿಗೆ ಧಕ್ಕೆ ತರುವ ಪ್ರಯತ್ನ ಮಾಡುತ್ತಿದ್ದಾರೆ. ಇಂಥ ಆಧಾರರಹಿತ ಹೇಳಿಕೆಗಳನ್ನು ಪ್ರವಾಸೋದ್ಯಮದಲ್ಲಿ ತೊಡಗಿಸಿಕೊಂಡ ಸರ್ವರೂ ಖಂಡಿಸಲೇಬೇಕಿದೆ’ ಎಂದರು.

ಪ್ರವಾಸಿ ತಾಣಗಳಲ್ಲಿ ಅಹಿತಕರ ಘಟನೆ ಸಂಭವಿಸಿದ ಕೂಡಲೇ ಪ್ರವಾಸಿ ಚಟುವಟಿಕೆಗಳಿಗೆ ನಿರ್ಬಂಧ ಹೇರುವ ಸರ್ಕಾರದ ಕ್ರಮದಿಂದಾಗಿ ಜಿಲ್ಲೆಯ ಪ್ರವಾಸೋದ್ಯಮಕ್ಕೆ ತೀವ್ರ ಹಿನ್ನಡೆಯಾಗಿದೆ ಎಂದೂ ಬೇಸರ ವ್ಯಕ್ತಪಡಿಸಿದರು.

ಅಸೋಸಿಯೇಷನ್ನ ಗೌರವ ಸಲಹೆಗಾರ ಜಿ.ಚಿದ್ವಿಲಾಸ್ ಮಾತನಾಡಿ, ಪ್ರವಾಸಿ ತಾಣಗಳನ್ನು ಈ ಕೂಡಲೆ ಅಭಿವೖದ್ದಿ ಪಡಿಸಬೇಕು, ಮೂಲಸೌಕರ್ಯ ಕಲ್ಪಿಸಬೇಕು. ಪ್ರವಾಸೋದ್ಯಮಕ್ಕೆ ಸಂಬಂಧಿಸಿದ ಸಂಘಸಂಸ್ಥೆಗಳು ಒಗ್ಗೂಡಿ ತಮ್ಮ ವ್ಯಾಪ್ತಿಯಲ್ಲಿನ ಪ್ರವಾಸಿ ತಾಣಗಳಲ್ಲಿ ಕೈಗೊಳ್ಳಬೇಕಾದ ಅಭಿವೃದ್ದಿ ಕಾರ್ಯಗಳ ಬಗ್ಗೆ 2 ವಾರದೊಳಗಾಗಿ ಬಜೆಟ್ ಸಹಿತವಾಗಿ ವರದಿ ನೀಡಿದರೆ ಸರ್ಕಾರದ ಮಟ್ಟದಲ್ಲಿ ಚರ್ಚಿಸಲು ಅನುಕೂಲವಾಗಲಿದೆ ಎಂದರು. ಪ್ರವಾಸೋದ್ಯಮದಲ್ಲಿ ತೊಡಗಿಸಿಕೊಂಡವರು ಜಿಲ್ಲೆಯಲ್ಲಿ ಪ್ರವಾಸೋದ್ಯಮದ ಚೇತರಿಕೆಗಾಗಿ ಒಂದೇ ಧ್ವನಿಯಲ್ಲಿ ಮಾತನಾಡಬೇಕಾದ ಅಗತ್ಯವಿದೆ ಎಂದೂ ಪ್ರತಿಪಾದಿಸಿದರು.

ಕೊಡಗು ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಬಿ.ಆರ್.ನಾಗೇಂದ್ರ ಪ್ರಸಾದ್ ಮಾತನಾಡಿ, ‘ಜಿಲ್ಲೆಗೆ ಪ್ರವಾಸಿಗರ ಸಂಖ್ಯೆಯಲ್ಲಿ ಇಳಿಮುಖವಾದಲ್ಲಿ ಅದು ವರ್ತಕರ ಮೇಲೂ ವ್ಯತಿರಿಕ್ತ ಪರಿಣಾಮ ಬೀರಲಿದೆ. ಪ್ರವಾಸಿಗರ ವಾಹನ ನಿಲುಗಡೆಯ ಸಮಸ್ಯೆಯನ್ನೂ ಸಂಬಂಧಿಸಿದ ಇಲಾಖೆಗಳು, ಸ್ಥಳೀಯ ಸಂಸ್ಥೆಗಳು ಪರಿಹರಿಸಬೇಕು’ ಎಂದು ಒತ್ತಾಯಿಸಿದರು.

ಕೊಡಗು ಹೋಂಸ್ಟೇ ಅಸೋಸಿಯೇಷನ್ ಅಧ್ಯಕ್ಷೆ ಮೋಂತಿ ಗಣೇಶ್ ಮಾತನಾಡಿ, ‘ಅನಧಿಕೖತ ಹೋಂಸ್ಟೇಗಳನ್ನು ಮುಚ್ಚಿಸಲು ಸರ್ಕಾರದ ಕ್ರಮ ಏನೇನೂ ಸಾಲದು. ಹೆಚ್ಚುವರಿ ಸಿಬ್ಬಂದಿಗಳೊಂದಿಗೆ ನಿಯಮಬಾಹಿರ ಹೋಂಸ್ಟೇಗಳಿಗೆ ಕಡಿವಾಣ ಹಾಕಲೇಬೇಕು’ ಎಂದು ಆಗ್ರಹಿಸಿದರು.

ಲೇಖಕ ಎಚ್.ಟಿ.ಅನಿಲ್ ಮಾತನಾಡಿ, ‘ರಾಜ್ಯದ ಪ್ರವಾಸೋದ್ಯಮಕ್ಕೆ ಕೊಡಗು ಜಿಲ್ಲೆಯು ಮಹತ್ವದ ಕೊಡುಗೆ ನೀಡಿದ್ದರೂ ಅನೇಕ ವರ್ಷಗಳಿಂದ ಪ್ರವಾಸೋದ್ಯಮ ಖಾತೆ ಸಚಿವರು ಜಿಲ್ಲೆಗೆ ಭೇಟಿ ನೀಡಲೇ ಇಲ್ಲ. ಜಿಲ್ಲೆಗೆ ಭೇಟಿ ನೀಡಿದರೆ ಮಾತ್ರ ಸಚಿವರಿಗೆ, ಉನ್ನತ ಅಧಿಕಾರಿಗಳಿಗೆ ಕೊಡಗಿನ ಪ್ರವಾಸೋದ್ಯಮದ ಬೇಕು ಬೇಡಿಕ ತಿಳಿಯಲು ಸಾಧ್ಯ’ ಎಂದರು.

ದುಬಾರೆಯ ರಿವರ್ ರ್ಯಾಫ್ಟಿಂಗ್ ಅಸೋಸಿಯೇಷನ್ ಅಧ್ಯಕ್ಷ ಉತ್ತಪ್ಪ ಮಾತನಾಡಿ, ‘ದುಬಾರೆಯಲ್ಲಿರುವ 84 ರ್ಯಾಫ್ಟಿಂಗ್ಗೆ ಸಂಖ್ಯೆಗೆ ಸ್ಥಗಿತಗೊಳಿಸಬೇಕು. ಹೆಚ್ಚುವರಿ ಅನುಮತಿ ನೀಡಿದರೆ ಸಮಸ್ಯೆಯಾಗಲಿದೆ’ ಎಂದು ಎಚ್ಚರಿಸಿದರು.

ಅಸೋಸಿಯೇಷನ್ ಸಲಹೆಗಾರ ಕೆ.ಎಸ್.ರತೀಶ್, ಮಾಂದಲಪಟ್ಟಿ ಜೀಪು ಮಾಲೀಕರ ಮತ್ತು ಚಾಲಕರ ಸಂಘದ ಅಧ್ಯಕ್ಷ ಪಿ.ಟಿ. ಉಣ್ಣಿಕೖಷ್ಣ, ಮಡಿಕೇರಿ ಪ್ರವಾಸಿ ವಾಹನ ಮಾಲೀಕರ ಮತ್ತು ಚಾಲಕರ ಸಂಘದ ಅಧ್ಯಕ್ಷ ತೆಕ್ಕಡ ಸಂತೋಷ್, ಕೂರ್ಗ್ ಹೋಟೆಲ್ ಮತ್ತು ರೆಸಾಟ್೯ ಅಸೋಸಿಯೇಷನ್ ಪದಾಧಿಕಾರಿ ಮೋಹನ್ ದಾಸ್, ಕೊಡಗು ಚೇಂಬರ್ ಆಫ್ ಕಾಮಸ್೯ ಉಪಾಧ್ಯಕ್ಷ ಎ.ಕೆ.ನವೀನ್, ನಾಸೀರ್ ಅಹಮ್ಮದ್, ಸಾಗರ್ ಗಣಪತಿ, ಜಂಟಿ ಕಾರ್ಯದರ್ಶಿ ಮಂಜುನಾಥ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-51-656925494

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.