14 ವರ್ಷದೊಳಗಿನ, 17 ವರ್ಷದೊಳಗಿನ ಮತ್ತು 19 ವರ್ಷದೊಳಗಿನ ವಿಭಾಗಗಳಲ್ಲಿ ಬಾಲಕ ಮತ್ತು ಬಾಲಕಿಯರಿಗೆ ಪ್ರತ್ಯೇಕವಾಗಿ ಪಂದ್ಯಾವಳಿ ನಡೆಯಲಿವೆ. ಕ್ರೀಡಾಪಟುಗಳು, ತರಬೇತುದಾರರು ಮತ್ತು ವ್ಯವಸ್ಥಾಪಕರು ಸೇರಿದಂತೆ ಸುಮಾರು 700 ಮಂದಿ ಭಾಗವಹಿಸಲಿದ್ದಾರೆ. ಲೀಗ್ ಮತ್ತು ನಾಕೌಟ್ ಮಾದರಿಯಲ್ಲಿ 60 ಪಂದ್ಯಗಳು ನಡೆಯಲಿದ್ದು, ಹಾಕಿ ಕೂರ್ಗ್‌ನ ಅಂತರಾಷ್ಟ್ರೀಯ ಮಟ್ಟದ ತೀರ್ಪುಗಾರರು ಪಂದ್ಯಗಳನ್ನು ನಿರ್ವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.