ವಿರಾಜಪೇಟೆ: ಸಮೀಪದ ಬಿಟ್ಟಂಗಾಲದ ಬಾಳುಗೋಡು ಗ್ರಾಮದ ವ್ಯಾಪ್ತಿಯಲ್ಲಿ ಸಂಸ್ಥೆಯೊಂದು ಐಷಾರಾಮಿ ವಿಲ್ಲಾಗಳನ್ನು ನಿರ್ಮಿಸುತ್ತಿರುವುದನ್ನು ವಿರೋಧಿಸಿ ಪರಿಸರವಾದಿ ಕರ್ನಲ್ ಸಿ.ಪಿ. ಮುತ್ತಣ್ಣ ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಪರಿಸರವಾದಿಗಳು ಸೋಮವಾರ ಪ್ರತಿಭಟನೆ ಮಾಡಿದರು.

ಕರ್ನಲ್ ಸಿ.ಪಿ. ಮುತ್ತಣ್ಣ ಮಾತನಾಡಿ, ‘ಅಭಿವೃದ್ದಿ ಹೆಸರಿನಲ್ಲಿ ವಿಲ್ಲಾ ನಿರ್ಮಾಣ ಮಾಡುತ್ತಿರುವುದು ಪರಿಸರ ನಾಶಕ್ಕೆ ಕಾರಣವಾಗುತ್ತಿದೆ. ಕರ್ನಾಟಕ ಭೂಸುಧಾರಣೆ ಕಾಯ್ದೆ ಅಧಿನಿಯಮ 1964ರನ್ನು ಉಲ್ಲಂಘಿಸಿ ವಿಲ್ಲಾ ನಿರ್ಮಾಣ ಮಾಡಲಾಗುತ್ತಿದೆ. ಕಾನೂನಿನಂತೆ ಕಾಫಿ ತೋಟ, ಗದ್ದೆ, ಬಾಣೆಗಳನ್ನು ಭೂ ಪರಿವರ್ತನೆ ಮಾಡುವಂತಿಲ್ಲ. ಜಿಲ್ಲೆಯಾದ್ಯಂತ ಇದೇ ರೀತಿ ಹಲವು ಭಾಗಗಳನ್ನು ಪರಿಸರಕ್ಕೆ ಹಾನಿಯಾಗುವಂತಹ ವಿಲ್ಲಾ ಸೇರಿದಂತೆ ಬೃಹತ್ ಯೋಜನೆಗಳು ನಡೆಯುತ್ತಿದೆ. ಇಂತಹ ಯೋಜನೆಗಳಿಗೆ ಅನುಮತಿ ನೀಡಿದ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಪರಿಸರಕ್ಕೆ ಮಾರಕವಾದ ಯೋಜನೆಗಳ ವಿರುದ್ದ ನ್ಯಾಯಯುತ ಹೋರಾಟ ಮುಂದುವರೆಯುತ್ತದೆ. ಜಿಲ್ಲಾಧಿಕಾರಿಗಳು, ಶಾಸಕರು ಮತ್ತು ಸಂಸದರಿಗೆ ಈ ಕುರಿತು ಮನವಿ ಸಲ್ಲಿಸಲಾಗುವುದು’ ಎಂದರು.

ಕೊಡಗು ಮಾರಕ ಯೋಜನೆ ವಿರೋಧಿ ಹೋರಾಟ ವೇದಿಕೆಯ ಜಿಲ್ಲಾ ಸಂಚಾಲಕ ರಾಜೀವ್ ಬೋಪಯ್ಯ ಮಾತನಾಡಿ, ‘ಪೂರ್ವಜರಿಂದ ಬಂದ ಆಸ್ತಿಯಲ್ಲಿ ಮರ ಕಡಿತ ಹಾಗೂ ಕಟ್ಟಡ ನಿರ್ಮಾಣಕ್ಕೆ ಕಾನೂನಿನ ಹೆಸರಿನಲ್ಲಿ ಅಡ್ಡಿಪಡಿಸಲಾಗುತ್ತಿದೆ. ಆದರೆ ಮತ್ತೊಂದೆಡೆ ವಿಲ್ಲಾಗಳ ನಿರ್ಮಾಣಕ್ಕೆ ಅನುಮತಿ ನೀಡಲಾಗುತ್ತಿದೆ. ಸ್ಥಳದಲ್ಲಿ ಜಲಮೂಲಗಳನ್ನು ಮಣ್ಣು ಮುಚ್ಚಿ ನಾಶಗೊಳಿಸಲಾಗಿದೆ. ಮೈಸೂರಿನ ಮೂಡಾದಿಂದ ಇಲ್ಲಿ ವಿಲ್ಲಾ ನಿರ್ಮಾಣಕ್ಕೆ ಅನುಮತಿ ನೀಡಿರುವುದು ಹೇಗೆ? ಪ್ರಕೃತಿಗೆ ಹಾನಿ ಮಾಡುವ ಅಭಿವೃದ್ಧಿ ಕಾರ್ಯಗಳಿಗೆ ನಮ್ಮ ವಿರೋಧವಿದೆ’ ಎಂದರು.

ಸೇವ್ ಕೊಡಗು ಸಂಘಟನೆಯ ಸದಸ್ಯೆ ಪದ್ಮಿನಿ ಮಾತನಾಡಿ, ‘ಅಭಿವೃದ್ಧಿ ಹೆಸರಿನಲ್ಲಿ ಪರಿಸರಕ್ಕೆ ಮಾರಕವಾಗಿರುವ ಇಂತಹ ಯೋಜನೆಗಳಿಗೆ ನಮ್ಮ ಧಿಕ್ಕಾರ. ಪರಿಸರ ನಾಶಮಾಡಿ ಅಭಿವೃದ್ಧಿ ಮಾಡಿದರೆ ಪ್ರವಾಸಿಗರ ಸಂಖ್ಯೆ ಇಳಿಮುಖವಾಗುತ್ತದೆ’ ಎಂದರು.

ಪ್ರಮುಖರಾದ ಮಾಳೇಟಿರ ಶ್ರೀನಿವಾಸ್ ಮಾತನಾಡಿ, ‘ಜಲ ಮೂಲವನ್ನು ಮುಚ್ಚಿಸಿ, ಮಣ್ಣು ಸುರಿದು ಮರಗಳನ್ನು ಹನನ ಮಾಡಿ ಯೋಜನೆ ಸಿದ್ದಪಡಿಸಲಾಗಿದೆ. ಯೋಜನೆ ಸ್ಥಗಿತಗೊಳಿಸಿ, ಪೈಸಾರಿ ಜಾಗವನ್ನು ನಿವೇಶನವಿಲ್ಲದೆ ಬಡ ಕಾರ್ಮಿಕರಿಗೆ ನೀಡಬೇಕು. ಯೋಜನೆಗೆ ಅನುಮತಿ ನೀಡಿದ ಇಲಾಖಾಧಿಕಾರಿಗಳ ವಿರುದ್ಧ ತನಿಖೆಯಾಗಬೇಕು’ ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಾಮಾಜಿಕ ಕಾರ್ಯಕರ್ತರ ಸಂಯುಕ್ತ ಹೋರಾಟ ಸಮಿತಿಯ ಸಂಚಾಲಕ ಮಾಳೇಟಿರ ಕಾಳಯ್ಯ, ದಸಂಸದ ವಿಭಾಗೀಯ ಸಂಚಾಲಕ ಎಚ್.ಬಿ ಸತೀಶ್, ಓತ್ತೋರ್ಮೆ ಕೊಡವ ಕೂಟದ ಅಧ್ಯಕ್ಷ ಚೆಟ್ಟೋಳಿರ ಶರತ್ ಸೋಮಣ್ಣ, ಅಪ್ಪಡೇರಂಡ ಯಶ್ವಂತ್, ಬಬ್ಲು, ಸೇವ್ ಕೊಡಗು ಸಂಸ್ಥೆಯ ಸದಸ್ಯರು, ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ ಪರಿಸರವಾದಿಗಳು ಹಾಗೂ ಸಾರ್ವಜನಿಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-51-1506186903

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.