ಮಡಿಕೇರಿ: ತಾಲ್ಲೂಕಿನ ಕತ್ತಲೆಕಾಡು ಗ್ರಾಮದಲ್ಲಿ ವನ್ಯಪ್ರಾಣಿ ದಾಳಿಗೆ ಜಾನುವಾರು ಬಲಿಯಾಗಿದೆ.

ಗ್ರಾಮದ ಆನಂದ ಎಂಬವರ ಎತ್ತು ನಾಲ್ಕು ದಿನದಿಂದ ಕಾಣೆಯಾಗಿತ್ತು. ಹುಡುಕಾಟ ನಡೆಸಿದಾಗ ಎಸ್ಟೇಟ್ವೊಂದರಲ್ಲಿ ಭಾನುವಾರ ಸಂಜೆ ಕಳೇಬರ ಪತ್ತೆಯಾಗಿದೆ. ಸ್ಥಳಕ್ಕೆ ಸೋಮವಾರ ಅರಣ್ಯ ಇಲಾಖೆ ಸಿಬ್ಬಂದಿ, ಪಶು ವೈದ್ಯರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭ ಪಕ್ಕದಲ್ಲೇ ಕಾಡು ಹಂದಿಯ ಕಳೇಬರ ಕೂಡಾ ಕಂಡುಬಂದಿದೆ.

ಯಾವ ಪ್ರಾಣಿಯ ದಾಳಿಯಿಂದ ಜಾನುವಾರು ಮೃತಪಟ್ಟಿದೆ ಎಂಬುದು ವೈದ್ಯರ ಪರೀಕ್ಷೆಯಿಂದ ಗೊತ್ತಾಗಬೇಕಿದೆ ಎಂದು ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಸಿಬ್ಬಂದಿ ತಿಳಿಸಿದ್ದಾರೆ. ಸ್ಥಳೀಯರಲ್ಲಿ ಹುಲಿ ದಾಳಿಯಿಂದ ಮೃತಪಟ್ಟಿರಬಹುದು ಎಂಬ ಶಂಕೆ ಮೂಡಿದೆ ಎಂದು ಸ್ಥಳೀಯರೊಬ್ಬರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-51-1676929591

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.