ನಾಪೋಕ್ಲು: ಮಹಿಳೆಯರು ಸಬಲರಾದಾಗ ಮಾತ್ರ ಸಮಾಜದ ಏಳಿಗೆ ಸಾಧ್ಯ ಎಂದು ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಸ್ಥಾಪಕ ಅಧ್ಯಕ್ಷೆ ಮುತ್ತಮ್ಮ ಕೋಟಿ ಹೇಳಿದರು.

ಕೊಡಗು ಜಿಲ್ಲಾ, ಕುಲಾಲ ಕುಂಬಾರ ಸಂಘದ ಮಹಿಳಾ ಘಟಕದ ವತಿಯಿಂದ ಮಡಿಕೇರಿಯ ಲಯನ್ಸ್ ಕ್ಲಬ್ ನಲ್ಲಿ ಆಯೋಜಿಸಲಾಗಿದ್ದ ಕೊಡಗು ಜಿಲ್ಲಾ ಕುಲಾಲ ಕುಂಬಾರ ಮಹಿಳಾ ಸಂಭ್ರಮ- 2026 ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಮಹಿಳೆಯರಿಗೆ ಸರ್ಕಾರದ ಹತ್ತು ಹಲವು ಯೋಜನೆಗಳಿದ್ದು ಅದನ್ನು ಮಹಿಳೆಯರು ಸದುಪಯೋಗ ಪಡೆದುಕೊಂಡು ಆ ಮೂಲಕ ಬದುಕನ್ನು ಭದ್ರವಾಗಿ ರೂಪಿಸಿಕೊಳ್ಳಬೇಕು. ಮಹಿಳಾ ಘಟಕದ ಇಂತಹ ಕಾರ್ಯಕ್ರಮವು ಮಹಿಳೆಯರ ಸಂಘಟನೆಯ ಜೊತೆಗೆ ಕೊಡಗು ಜಿಲ್ಲೆಯಲ್ಲಿ ಕುಲಾಲ ಕುಂಬಾರ ಸಂಘಟನೆಗೆ ಪೂರಕವಾಗಿದೆ’ ಎಂದರು.

ಮುಖ್ಯ ಅತಿಥಿ ಲತಾ ಮಡಿಕೆಬೀಡು ಮಾತನಾಡಿ, ‘ಮಹಿಳೆಯರು ಸಂಘಟಿತಗೊಳ್ಳುವ ಮೂಲಕ ಸಮಾಜದ ಆಗು ಹೋಗುಗಳನ್ನು ತಿಳಿಯಬಹುದು. ಈ ರೀತಿಯ ಸ್ಪಂದನೆ ಮುಂದಿನ ದಿನಗಳಲ್ಲಿ ಕೊಡಗು ಜಿಲ್ಲೆಯಲ್ಲಿ ಕುಲಾಲ ಕುಂಬಾರ ಸಂಘವು ಬೆಳವಣಿಗೆಗೆ ಇನ್ನಷ್ಟು ಪೂರಕವಾಗಲಿದೆ’ ಎಂದರು.

ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಮಹಿಳಾ ಘಟಕದ ಉಪ ಖಜಾಂಚಿ ಭವಾನಿ ಶಿವರಾಜ್ ಮಡಿಕೆಬೀಡು ಮಾತನಾಡಿ, ಇಂತಹ ಕಾರ್ಯಕ್ರಮದ ಮೂಲಕ ಮಹಿಳೆಯರ ನಡುವೆ ಬಾಂಧವ್ಯ ವೃದ್ಧಿಯಾಗಿ ತಮ್ಮ ಸಾಮರ್ಥ್ಯದ ಬೆಳವಣಿಗೆಗೆ ಪೂರಕವಾಗಲಿದೆ ಎಂದರು.

ಕಾವ್ಯ ಮಾತನಾಡಿ ಮಹಿಳೆಯರು ಧೈರ್ಯದಿಂದ ಮುನ್ನುಗ್ಗಿದಾಗ ಮಾತ್ರ ಎಲ್ಲಾ ಕ್ಷೇತ್ರದಲ್ಲೂ ಮುಂದುವರಿಯಲು ಸಾಧ್ಯ ಎಂದರು. ಸೈಕಾಲಜಿ ವಿದ್ಯಾರ್ಥಿನಿ ವರ್ಷ ಯೋಗ, ಧ್ಯಾನ ನಮ್ಮ ಜೀವನಕ್ಕೆ ಎಷ್ಟು ಪ್ರಯೋಜನ ಹಾಗೂ ಸದುಪಯೋಗದ ಬಗ್ಗೆ ಸಮಗ್ರ ಮಾಹಿತಿ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಮಹಿಳಾ ಘಟಕದ ಅಧ್ಯಕ್ಷೆ ಕಾಂತಿಮಣಿ ರಾಜು ಮಾತನಾಡಿ, ‘ಈಗಾಗಲೇ ಕೊಡಗು ಜಿಲ್ಲೆಯಲ್ಲಿ ಕುಲಾಲ ಕುಂಬಾರ ಸಂಘವು ಅತ್ಯಂತ ಬಲಿಷ್ಠವಾಗಿ ಸಂಘಟಿತವಾಗುತ್ತಲಿದೆ. ಈ ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲೆಯ ಕುಲಾಲ ಕುಂಬಾರ ಮಹಿಳಾ ಸಾಧಕರನ್ನು ಗುರುತಿಸಿ ಸನ್ಮಾನಿಸಲಾಗಿದೆ. ಮುಂದಿನ ದಿನಗಳಲ್ಲಿ ಮಹಿಳಾ ಘಟಕವು ಮಹಿಳೆಯರಿಗೆ ಸರ್ಕಾರದಿಂದ ಲಭ್ಯವಿರುವ ಸವಲತ್ತುಗಳನ್ನು ತಿಳಿಸುವಂತಹ ಕಾರ್ಯಕ್ರಮವನ್ನು ಆಯೋಜಿಸಲಿದೆ’ ಎಂದರು.

ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲೆಯ ಕುಲಾಲ ಕುಂಬಾರ ಮಹಿಳಾ ಸಾಧಕರನ್ನು ಸನ್ಮಾನಿಸಲಾಯಿತು

ಕೊಡಗು ಜಿಲ್ಲಾ, ಕುಲಾಲ ಕುಂಬಾರ ಸಂಘದ ಉಪಾಧ್ಯಕ್ಷೆ ಶ್ವೇತಾ ಅಶ್ವಥ್ ಮಡಿಕೆ ಬೀಡು, ಉಪ ಕಾರ್ಯದರ್ಶಿ ದಮಯಂತಿ ಚೇರಂಬಾಣೆ, ಪದಾಧಿಕಾರಿ ಸಂಧ್ಯಾ ಚಂದ್ರಶೇಖರ್ ಮೂರ್ನಾಡು ಉಪಸ್ಥಿತರಿದ್ದರು.

ಸಭಾ ಕಾರ್ಯಕ್ರಮದ ನಂತರ ಜಿಲ್ಲೆಯ ಕುಲಾಲ ಕುಂಬಾರ ಮಹಿಳಾ ಬಾಂಧವರಿಂದ ನೃತ್ಯ, ಕವಿತೆ ವಾಚನ, ವಿವಿಧ ರೀತಿಯ ಆಟೋಟಗಳು ನಡೆದವು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260327-51-1380467228

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.