ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನ.11ರಿಂದ ಕೊಡವ ಸಮಾಜಗಳ ನಡುವಿನ ಕ್ರಿಕೆಟ್ ಟೂರ್ನಿ

Published 10 ನವೆಂಬರ್ 2023, 6:31 IST
Last Updated 10 ನವೆಂಬರ್ 2023, 6:31 IST
ಅಕ್ಷರ ಗಾತ್ರ

ವಿರಾಜಪೇಟೆ: ಕೊಡವ ಜನಾಂಗದಲ್ಲಿ ಕ್ರಿಕೆಟ್‌ಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕೊಡವ ಕ್ರಿಕೆಟ್ ಅಕಾಡೆಮಿಯಿಂದ ಇದೇ ಪ್ರಥಮ ಬಾರಿಗೆ ವಿರಾಜಪೇಟೆಯಲ್ಲಿ ಲೆದರ್ ಬಾಲ್ ಕ್ರಿಕೆಟ್ ಟೂರ್ನಿಯನ್ನು ಆಯೋಜಿಸಲಾಗಿದೆ ಎಂದು ಕೊಡವ ಕ್ರಿಕೇಟ್ ಅಕಾಡೆಮಿಯ ನಿರ್ದೇಶಕ ಪಟ್ಟಡ ಪ್ರಕಾಶ್ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ನ. 11ರಿಂದ ನ. 14ರವರೆಗೆ ಅಂತರ ಕೊಡವ ಸಮಾಜಗಳ ನಡುವೆ ಸೀಮಿತ ಓವರ್‌ಗಳ ಲೆದರ್‌ಬಾಲ್ ಕ್ರಿಕೆಟ್ ಪಂದ್ಯಾಟ ನಡೆಯಲಿದೆ.

ನ. 11ರಂದು ನಡೆಯುವ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಕೊಡವ ಕ್ರಿಕೆಟ್ ಅಕಾಡೆಮಿಯ ಅಧ್ಯಕ್ಷ ಕೀತಿಯಂಡ ಕರ್ಸನ್ ಕಾರ್ಯಪ್ಪ ಅವರು ವಹಿಸಲಿದ್ದು, ಸಮಾಜ ಸೇವಕ ತೇಲಪಂಡ ಶಿವಕುಮಾರ್, ಅಖಿಲ ಕೊಡವ ಸಮಾಜಗಳ ಅಧ್ಯಕ್ಷ ಪರದಂಡ ಕೆ.ಸುಬ್ರಮಣಿ, ವಿರಾಜಪೇಟೆ ಕೊಡವ ಸಮಾಜದ ಅಧ್ಯಕ್ಷ ಕುಂಬೇರ ಮನುಕುಮಾರ್, ಪುರಸಭೆಯ ಸದಸ್ಯೆ ಅಂಜಪರವಂಡ ಯಶೋಧ ಮಂದಣ್ಣ ಮತ್ತು ಉದ್ಯಮಿ ನಾಗೇಶ್ ಪವನ್ ಅವರು ಭಾಗವಹಿಸಲಿದ್ದಾರೆ.

ನ. 14ರಂದು ಮಧ್ಯಾಹ್ನ 2ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ. ಟೂರ್ನಿಯಲ್ಲಿ ಜಿಲ್ಲೆಯ ಒಟ್ಟು 10 ಕೊಡವ ಸಮಾಜಗಳ ತಂಡಗಳು ಭಾಗವಹಿಸಲಿವೆ. ವಿಜೇತ ತಂಡಕ್ಕೆ ಆಕರ್ಷಕ ಟ್ರೋಫಿ, ನಗದು ಹಾಗೂ ವೈಯಕ್ತಿಕ ಬಹುಮಾನಗಳನ್ನು ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ ದೂ.ಸಂ: 9343856877 ಅಥವಾ 9632606913ಅನ್ನು ಸಂಪರ್ಕಿಸುವಂತೆ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT