ಮಡಿಕೇರಿ: ಕೂರ್ಗ್ ಕ್ರಿಕೆಟ್ ಫೌಂಡೇಷನ್ ವತಿಯಿಂದ ಇಲ್ಲಿನ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ‘ಕೊಡವ ಕ್ರಿಕೆಟ್ ಪ್ರೀಮಿಯರ್ ಲೀಗ್’ ಪಂದ್ಯಾವಳಿಯಲ್ಲಿ ಶನಿವಾರ ಕೂರ್ಗ್ ಯುನೈಟೆಡ್ ಹಾಗೂ ಕೊಡವ ಟ್ರೈಬ್ ತಂಡಗಳು ಜಯ ಗಳಿಸಿದವು.

ಕೂರ್ಗ್ ಯುನೈಟೆಡ್ ತಂಡಕ್ಕೆ ಎಂಟಿಬಿ ರಾಯಲ್ಸ್ ವಿರುದ್ಧ ಬರೋಬರಿ 78 ರನ್‌ಗಳ ಜಯ ಒಲಿಯಿತು. ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು ಕೂರ್ಗ್ ಯುನೈಟೆಡ್ ನೀಡಿದ 200 ರನ್‌ಗಳ ಗುರಿಯನ್ನು ಬೆನ್ನತ್ತಿದ ಎಂಟಿಬಿ ರಾಯಲ್ಸ್ 9 ವಿಕೆಟ್ ಕಳೆದುಕೊಂಡು 121 ರನ್‌ಗಳನ್ನಷ್ಟೇ ಗಳಿಸಲು ಶಕ್ತವಾಯಿತು. 47 ಎಸೆತಗಳಲ್ಲಿ 89 ರನ್ ಗಳಿಸಿದ ಸಿ.ಆರ್.ಅಯ್ಯಪ್ಪ ಅವರು ಪಂದ್ಯ ಪುರುಷೋತ್ತಮ ಗೌರವಕ್ಕೆ ಪಾತ್ರರಾದರು.

ಇದಕ್ಕೂ ಮುನ್ನ ನಡೆದ ಪಂದ್ಯದಲ್ಲಿ ಕೊಡವ ಟ್ರೈಬ್ ತಂಡವು ರಾಯಲ್ಸ್ ಟೈಗರ್ಸ್ ವಿರುದ್ಧ 38 ರನ್‌ಗಳ ಅಮೋಘ ಜಯ ಪಡೆಯಿತು.

ಕೊಡವ ಟ್ರೈಬ್ ತಂಡ 19.5 ಓವರ್‌ಗಳಲ್ಲಿ ತನ್ನೆಲ್ಲ ವಿಕೆಟ್ ಕಳೆದುಕೊಂಡು 165 ರನ್‌ಗಳನ್ನು ಗಳಿಸಿತು. ಗುರಿಯನ್ನು ಬೆನ್ನತ್ತಿದ ರಾಯಲ್ಸ್ ಟೈಗರ್ಸ್ ತಂಡವು 127 ರನ್‌ಗಳನ್ನಷ್ಟೇ ಗಳಿಸಲು ಶಕ್ತವಾಯಿತು. 23 ಎಸೆತಗಳಲ್ಲಿ 60 ರನ್ ಗಳಿಸಿದ ಕೊಡವ ಟ್ರೈಬ್ ತಂಡದ ಗ್ಯಾನ್ ಸೋಮಯ್ಯ ಅವರು ಪಂದ್ಯ ಪುರುಷೋತ್ತಮ ಗೌರವಕ್ಕೆ ಪಾತ್ರರಾದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.