ಸೋಮವಾರ, ಅಕ್ಟೋಬರ್ 21, 2019
26 °C
ನಿವೃತ್ತ ಮೇಜರ್ ಜನರಲ್ ಕುಪ್ಪಂಡ ನಂಜಪ್ಪ ಹೇಳಿಕೆ

‘ಸಂಸ್ಕೃತಿ-ಭಾಷೆಯ ಜತೆಗೆ ಪರಿಸರ ಉಳಿಸಿ’

Published:
Updated:
Prajavani

ವಿರಾಜಪೇಟೆ: ಸಂಸ್ಕೃತಿ-ಭಾಷೆಯನ್ನು ಉಳಿಸುವುದರ ಜೊತೆಜೊತೆಗೆ ಜಿಲ್ಲೆಯ ಪರಿಸರವನ್ನು ಉಳಿಸಬೇಕು ಎಂದು ನಿವೃತ್ತ ಮೇಜರ್ ಜನರಲ್ ಕುಪ್ಪಂಡ ನಂಜಪ್ಪ ಹೇಳಿದರು.

ಸಮೀಪದ ಬಾಳುಗೋಡುವಿನ ಕೊಡವ ಸಮಾಜಗಳ ಒಕ್ಕೂಟದ ವತಿಯಿಂದ ನಡೆಯುತ್ತಿರುವ ಕೊಡವ ನಮ್ಮೆ 2019 ರಲ್ಲಿ ಶನಿವಾರ ನಡೆದ ಸಭಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಸಮುದಾಯದ ಸಂಸ್ಕೃತಿ, ಆಚಾರ-ವಿಚಾರ, ಭಾಷೆಗಳನ್ನು ಉಳಿಸುವ ಕೆಲಸ ಉತ್ತಮವಾಗಿ ನಡೆಯುತ್ತಿದೆ. ಇದಕ್ಕೆ ಮಾಧ್ಯಮಗಳು ಸಹಕಾರ ನೀಡುತ್ತಿದೆ. ಅರಣ್ಯ ಸೇರಿದಂತೆ ನದಿ ದಂಡೆಯಲ್ಲಿ ಬಿದಿರು ಹಲಸು ಸೇರಿದಂತೆ ವಿವಿಧ ಜಾತಿಯ ಮರಗಳನ್ನು ಬೆಳೆಸಬೇಕು. ಕೃಷಿ ಮಾಡುವುದು ಕಷ್ಟ ಎಂದು ಭೂಮಿಯನ್ನು ಮಾರಾಟ ಮಾಡದೆ, ಹಿರಿಯರಿಂದ ಬಂದ ಆಸ್ತಿಯನ್ನು ನಮ್ಮ ಮುಂದಿನ ಪೀಳಿಗೆಗೆ ಉಳಿಸುವ ಕೆಲಸವಾಗಬೇಕು. ಇಂದು ಸೇನೆಯಲ್ಲಿ ಕ್ರೀಡಾಪಟುಗಳು ಹಾಗೂ ಸಾಹಸಿಗಳಿಗೆ ಉತ್ತಮ ಅವಕಾಶವಿದೆ ಎಂದರು.

ಕಾರ್ಯಕ್ರಮದಲ್ಲಿ ಕೊಡವ ಸಮಾಜಗಳ ಒಕ್ಕೂಟದ ಅಧ್ಯಕ್ಷ ಕಳ್ಳಿಚಂಡ ವಿಷ್ಣು ಕಾರ್ಯಪ್ಪ ಪ್ರಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಮಾಜಿ ಸಚಿವ ಎಂ.ಸಿ.ನಾಣಯ್ಯ, ಒಕ್ಕೂಟದ ಮಾಜಿ ಅಧ್ಯಕ್ಷ ಮಲ್ಲೇಂಗಡ ದಾದ ಬೆಳ್ಯಪ್ಪ, ಖಜಾಂಚಿ ಚೆರಿಯಪಂಡ ಕಾಶಿಯಪ್ಪ, ಕುಪ್ಪಂಡ ವೀಣಾ ನಂಜಪ್ಪ, ಒಕ್ಕೂಟದ ಕಾರ್ಯದರ್ಶಿ ವಾಟೇರಿರ ಶಂಕರಿ ಪೂವಯ್ಯ, ಆಕಾಶವಾಣಿ ಕಲಾವಿದ ಮಾದೇಟಿರ ಬೆಳ್ಯಪ್ಪ, ಒಕ್ಕೂಟದ ಮಹಿಳಾ ಘಟಕದ ಅಧ್ಯಕ್ಷೆ ಇಮ್ಮಿ ಉತ್ತಪ್ಪ ಮತ್ತಿತರರು ಉಪಸ್ಥಿತರಿದ್ದರು.

ಸಭಾ ಕಾರ್ಯಕ್ರಮಕ್ಕು ಮುನ್ನ ಕೊಡವ ಸಮಾಜಗಳ ಒಕ್ಕೂಟದ ಆವರಣದಲ್ಲಿರುವ ಯೋಧರ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

Post Comments (+)