ಮಡಿಕೇರಿ: ಕೊಡವರಿಗೆ ವಿಶೇಷ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಮತ್ತು ಪ್ರತ್ಯೇಕ ಜನಗಣತಿ ಸಂಕೇತ ನೀಡಬೇಕು ಎಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ (ಸಿಎನ್ಸಿ) ಸಂಘಟನೆಯ ಸದಸ್ಯರು 48 ಗಂಟೆಗಳ ಅಹೋರಾತ್ರಿ ಸತ್ಯಾಗ್ರಹವನ್ನು ಮಂಗಳವಾರ ಇಲ್ಲಿನ ಕೊಡವ ಮಂದ್ನಲ್ಲಿ ಆರಂಭಿಸಿದರು.

ಸಾಂಪ್ರದಾಯಿಕ ಪ್ರಾರ್ಥನೆಗಳೊಂದಿಗೆ ಆರಂಭವಾದ ಈ ಸತ್ಯಾಗ್ರಹದಲ್ಲಿ ಮಾತನಾಡಿದ ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ, ‘ಮುಂಬರುವ ಕ್ಷೇತ್ರ ಮರುವಿಂಗಡಣೆಯ ಸಮಯದಲ್ಲಿ ಕೊಡವರ ಸಾಂಪ್ರದಾಯಿಕ ಆವಾಸಸ್ಥಾನದ ಗಡಿಗಳನ್ನು ಬದಲಾಯಿಸದೆ, ಸಂಸತ್ತು ಮತ್ತು ರಾಜ್ಯ ವಿಧಾನಸಭೆಯಲ್ಲಿ ಕೊಡವರಿಗೆ ವಿಶೇಷ ರಾಜಕೀಯ ಪ್ರಾತಿನಿಧ್ಯ ನೀಡಬೇಕು’ ಎಂದು ಒತ್ತಾಯಿಸಿದರು.

ಸಿಕ್ಕಿಂನ ಬೌದ್ಧ ಸನ್ಯಾಸಿ ಸಮುದಾಯದ ಸಂಘ ಕ್ಷೇತ್ರದ ಮಾದರಿಯಲ್ಲಿ, ಏಕ-ಜನಾಂಗೀಯ ಸ್ಥಳೀಯ ಪ್ರಕೃತಿ ಆರಾಧಕ (ಅನಿಮಿಸ್ಟಿಕ್) ಕೊಡವರಿಗಾಗಿ ‘ಅಮೂರ್ತ ಕೊಡವ ಕ್ಷೇತ್ರ’ವನ್ನು ರಚಿಸಬೇಕು. ಮುಂಬರುವ 2027ರ ರಾಷ್ಟ್ರೀಯ ಜನಗಣತಿಯಲ್ಲಿ ಕೊಡವರಿಗಾಗಿ ಪ್ರತ್ಯೇಕ ಕೋಡ್ (ಸಂಕೇತ) ಮತ್ತು ಕಾಲಂ ನೀಡಬೇಕು ಎಂದು ಆಗ್ರಹಿಸಿದರು.

‘ನಾವು ಸಂವಿಧಾನದಲ್ಲಿ ಇಲ್ಲದ ಯಾವ ಬೇಡಿಕೆಗಳನ್ನೂ ಮಂಡಿಸುತ್ತಿಲ್ಲ. ನಾವೀಗ ಮಂಡಿಸುತ್ತಿರುವ ಬೇಡಿಕೆಗಳು ಈಗಾಗಲೇ ದೇಶದ ಬೇರೆ ಬೇರೆ ಸ್ಥಳಗಳಲ್ಲಿ ಕೊಡವ ಸಮುದಾಯದ ಹಾಗೆ ಇರುವ ಸಣ್ಣ ಸಣ್ಣ ಸಮುದಾಯಗಳಿಗೆ ನೀಡಲಾಗಿದೆ. ಸಂವಿಧಾನದಡಿಯಲ್ಲಿ ನಮ್ಮ ಬೇಡಿಕೆಗಳನ್ನು ಆಳುವ ಸರ್ಕಾರಗಳು ಸಹಾನುಭೂತಿಯಿಂದ ಪರಿಶೀಲಿಸಬೇಕು’ ಎಂದು ಅವರು ಮನವಿ ಮಾಡಿದರು.

ಕೊಡವ ಸಮುದಾಯದ ಎಂಬುದು ಸೂಕ್ಷ್ಮಾತಿಸೂಕ್ಷ್ಮ ಸಮುದಾಯ. ಕೊಡಗು ಬಿಟ್ಟರೆ ಬೇರೆಲ್ಲೂ ಇವರಿಗೆ ಸ್ಥಳ ಇಲ್ಲ. ಈ ಸಮುದಾಯ ಬೇರೆಲ್ಲ ಸಮುದಾಯಕ್ಕಿಂತಲೂ ಅತಿ ವಿಶಿಷ್ಟ. ಹಾಗಾಗಿ, ಕೊಡವ ಸಮುದಾಯವನ್ನು ಪ್ರತಿನಿಧಿಸುವಂತಹ ಕ್ಷೇತ್ರ ಬೇಕು. ಇದು ಈಗಾಗಲೆ ಸಿಕ್ಕಿಂನಲ್ಲಿ ಬೌದ್ಧ ಸನ್ಯಾಸಿ ಸಮುದಾಯಕ್ಕೆ ನೀಡಲಾಗಿದೆ. ಅಲ್ಲಿ ನೀಡಿರುವ ಸಂಘ ಕ್ಷೇತ್ರದ ಮಾದರಿಯಲ್ಲಿಯೇ ಇಲ್ಲೂ ಕೊಡವರಿಗೆ ಪ್ರತ್ಯೇಕ ಕ್ಷೇತ್ರ ನೀಡಬೇಕು ಎಂದು ಆಗ್ರಹಿಸುತ್ತಿದ್ದೇವೆ. ಇದು ತಪ್ಪೇ ಎಂದು ಪ್ರಶ್ನಿಸಿದರು.

ಸರ್ಕಾರದ ಗಮನ ಸೆಳೆಯಲು 48 ಗಂಟೆಗಳ ಅಹೋರಾತ್ರಿ ಸತ್ಯಾಗ್ರಹವನ್ನು ನಡೆಸಲಾಗುತ್ತಿದೆ. ಇದೊಂದು ಶಾಂತಿಯುತವಾದ ಸತ್ಯಾಗ್ರಹ ಎಂದು ಅವರು ಹೇಳಿದರು.

ಪಟ್ಟಮಡ ಕುಶ, ಅರೆಯಡ ಗಿರೀಶ್ ತಿಮ್ಮಯ್ಯ, ಬಡುವಂಡ ವಿಜಯ, ಅಪ್ಪಾರಂಡ ನಂದಿನಿ ನಂಜಪ್ಪ, ಅರೆಯಡ ಸವಿತಾ ತಿಮ್ಮಯ್ಯ, ಸರ್ವಶ್ರೀ ಅಳ್ಮಂಡ ಜೈ ಗಣಪತಿ, ನಂದೇಟಿರ ರವಿ ಸುಬ್ಬಯ್ಯ, ಪುದಿಯೊಕ್ಕಡ ಕಾಶಿ ಕರುಂಬಯ್ಯ, ಕಿರಿಯಮಾಡ ಶೇರಿನ್, ಮಂದಪಂಡ ಮನೋಜ್ ಮಂದಣ್ಣ, ಮಂದಪಂಡ ಸೂರಜ್, ಚೋಳಪಂಡ ನಾಣಯ್ಯ, ನಂದಿನೆರವಂಡ ವಿಜು, ಪುದಿಯೊಕ್ಕಡ ಪೃಥ್ವಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-51-59086913

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.