ಗೋಣಿಕೊಪ್ಪಲು: ಕೊಡವರು ಆಸ್ತಿ ಮಾರಾಟ ಮಾಡದೆ ತಮ್ಮ ಮುಂದಿನ ಪೀಳಿಗೆಗೆ ಉಳಿಸಿ ಹೋಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಮಂಡೇಪಂಡ ಸುಜಾ ಕುಶಾಲಪ್ಪ ಹೇಳಿದರು.

ಟಿ. ಶೆಟ್ಟಿಗೇರಿ ಕೊಡವ ಸಮಾಜದಲ್ಲಿ ನಡೆದ ಒಂಬತ್ತನೇ ವರ್ಷದ ಪತ್ತಲೋದಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಕೊಡವ ಸಮಾಜಗಳು ಹಾಗೂ ಇತರ ಸಂಘ ಸಂಸ್ಥೆಗಳು ಕೊಡವರ ಹಿತಾಸಕ್ತಿ ಕಾಪಾಡಲು ಕೆಲಸ ಮಾಡುತ್ತಿವೆ. ಯಾವುದೇ ಸಣ್ಣ ಪುಟ್ಟ ಭಿನ್ನಾಭಿಪ್ರಾಯ ಬಂದರೆ ಅದನ್ನು ವೇದಿಕೆಯಲ್ಲಿ ಚರ್ಚೆ ಮಾಡಿ ಪರಿಹಾರ ಕಂಡುಕೊಳ್ಳಬೇಕು. ಅದನ್ನು ಬಹಿರಂಗವಾಗಿ ಬೀದಿಗೆ ತರಬಾರದು ಎಂದು ನುಡಿದರು.

ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಮಾತನಾಡಿ, ಕೊಡವರು ಗುಡ್ಡಗಾಡು ಪ್ರದೇಶದಲ್ಲಿ ತಮ್ಮ ನಾಗರಿಕತೆ ಹಾಗೂ ಬದುಕನ್ನು ಕಂಡುಕೊಂಡ ಒಂದು ವಿಶೇಷ ಜನಾಂಗವಾಗಿದೆ. ಇದು ಇತರರಿಗಿಂತ ಧರ್ಮ, ಸಂಸ್ಕೃತಿ, ಆಚರಣೆಗಳು ವಿಭಿನ್ನವಾಗಿರುವ ಪರಂಪರೆಯನ್ನು ಹೊಂದಿದೆ. ಕೊಡವರು ತಮ್ಮ ಸಂಸ್ಕೃತಿ, ಆಚಾರ, ವಿಚಾರ ಮೂಲಕ ವಿಶೇಷವಾಗಿ ಗುರುತಿಸಿಕೊಂಡಿದ್ದಾರೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಟಿ. ಶೆಟ್ಟಿಗೇರಿ ಕೊಡವ ಸಮಾಜದ ಅಧ್ಯಕ್ಷ ಕೈಬುಲೀರ ಹರೀಶ್ ಅಪ್ಪಯ್ಯ ಮಾತನಾಡಿ, 10 ದಿನದ ಕಾರ್ಯಕ್ರಮ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ನಿರಾಯಾಸವಾಗಿ ನಡೆಯಿತು. ಪ್ರತಿ ವರ್ಷದಂತೆ ಈ ವರ್ಷವೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ಸಾಂಸ್ಕೃತಿಕ ಸಮಿತಿ ಸಂಚಾಲಕ ಚೆಟ್ಟಂಗಡ ರವಿ ಸುಬ್ಬಯ್ಯ ಯಶಸ್ವಿಯಾಗಿ ನಿರ್ವಹಿಸಿದ್ದಾರೆ ಎಂದು ಶ್ಲಾಘಿಸಿದರು.

ಉಪಾಧ್ಯಕ್ಷ ಮಚ್ಚಮಾಡ ಸುಮಂತ್, ಸಾಂಸ್ಕೃತಿಕ ಸಮಿತಿಯ ಸಂಚಾಲಕ ಚೆಟ್ಟಂಗಡ ರವಿ ಸುಬ್ಬಯ್ಯ ಮಾತನಾಡಿದರು.

ವೇದಿಕೆಯಲ್ಲಿ ಟಿ. ಶೆಟ್ಟಿಗೇರಿ ರೂಟ್ಸ್ ವಿದ್ಯಾಸಂಸ್ಥೆ ಮುಖ್ಯ ಶಿಕ್ಷಕಿ ನೆಲ್ಲೀರ ಪೂರ್ಣಿಮಾ, ಪೆರುಮಾಳೇಶ್ವರ ಆಟೊ ಮಾಲೀಕ ಮತ್ತು ಚಾಲಕರ ಸಂಘದ ಅಧ್ಯಕ್ಷ ಚೊಟ್ಟೆಯಂಡ ಮಾಡ ಪ್ರವೀಣ್ ಮೇದಪ್ಪ, ಸಂಭ್ರಮ ಮಹಿಳಾ ಕ್ರೀಡೆ ಮತ್ತು ಸಾಂಸ್ಕೃತಿಕ ಸಂಸ್ಥೆ ಕಾರ್ಯದರ್ಶಿ ತೀತಿರ ಲೀನಾ ಸತೀಶ್, ಟಿ.ಶೆಟ್ಟಿಗೇರಿ ಕೊಡವ ಸಮಾಜದ ಪೊಮ್ಮಕ್ಕಡ ಕೂಟ ಅಧ್ಯಕ್ಷ ಕೋಟ್ರಮಾಡ ರೇಷ್ಮಾ ಕಾರ್ಯಪ್ಪ,ಕೊಡವ ಎಳ್ತ್ ಕಾರಡ ಕೂಟದ ಅಧ್ಯಕ್ಷ ಚೆಟ್ಟಂಗಡ ರವಿ ಸುಬ್ಬಯ್ಯ, ಕೊಡವ ಸಮಾಜದ ಕಾರ್ಯದರ್ಶಿ ಕೋಟ್ರಮಾಡ ಸುಮಂತ್ ಮಾದಪ್ಪ, ಜಂಟಿ ಕಾರ್ಯದರ್ಶಿ ಆಂಡಮಾಡ ಸತೀಶ್ ವಿಶ್ವನಾಥ್, ಖಜಾಂಚಿ ಚಂಗುಲಂಡ ಸತೀಶ್, ಕ್ರೀಡಾ ಸಂಚಾಲಕ ತಡಿಯಂಗಡ ಶಮ್ಮಿ ಸುಬ್ಬಯ್ಯ, ನಿರ್ದೇಶಕರಾದ ಚಂಗುಲಂಡ ಅಶ್ವಿನಿ ಸತೀಶ್, ಮುಕ್ಕಾಟಿರ ಸಂದೀಪ್, ಕರ್ನಂಡ ರೂಪದೇವಯ್ಯ, ತೀತಿರ ಅನಿತ ಸುಬ್ಬಯ್ಯ, ಬಾದುಮಂಡ ವಿಷ್ಣು ಕಾರ್ಯಪ್ಪ, ಬೊಳ್ಳೇರ ಅಪ್ಪುಟ ಪೊನ್ನಪ್ಪ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.