ಕೊಣನೂರು: ಹೋಬಳಿಯ ಕಡವಿನಹೊಸಳ್ಳಿಯಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಂಡರೆ ಅದು ಹಿರಿಯ ರಾಜಕಾರಣಿ ದಿ. ಕೆ.ಬಿ.ಮಲ್ಲಪ್ಪ ಅವರಿಗೆ ಗೌರವ ಸಲ್ಲಿಸಿದಂತೆ ಎಂದು ಶಾಸಕ ಎ.ಮಂಜು ಹೇಳಿದರು.

ಕಡವಿನಹೊಸಳ್ಳಿಯಲ್ಲಿ ಭಾನುವಾರ ₹ 65 ಲಕ್ಷ ವೆಚ್ಚದ ಆರೋಗ್ಯ ಉಪಕೇಂದ್ರ ಕಟ್ಟಡ ಕಾಮಗಾರಿಗೆ ಭೂಮಿಪೂಜೆ ಸಲ್ಲಿಸಿ ಮಾತನಾಡಿದರು.

‘ಈ ಹಿಂದೆ ನಾನು ಸಚಿವನಾಗಿದ್ದ ಅವಧಿಯಲ್ಲಿ ಕಡವಿನಹೊಸಳ್ಳಿಗೆ ಉಪಕೇಂದ್ರ ಮಂಜೂರು ಮಾಡಿದ್ದೆ. ಗಡಿ ಗ್ರಾಮವಾದ ಇಲ್ಲಿನ ಜನರು ಗ್ರಾಮ ಪಂಚಾಯಿತಿ ಕೆಲಸಗಳಿಗಾಗಿ ದೂರದ ಊರಿಗೆ ಸುತ್ತುವ ತಾಪತ್ರಯ ತಪ್ಪಿಸಲಾಗಿದೆ. ಗ್ರಾಮೀಣ ಪ್ರದೇಶದ ಜನರಿಗೆ ಅನುಕೂಲ ಕಲ್ಪಿಸುಸಲು ಕಡವಿನಹೊಸಹಳ್ಳಿ ಮತ್ತು ಚನ್ನಿಗರಾಯನ ಅಬ್ಬೂರು ಗ್ರಾಮದಲ್ಲಿ ₹ 65 ಲಕ್ಷ ವೆಚ್ಚದ ಕಟ್ಟಡ ಕಾಮಗಾರಿಗೆ ಭೂಮಿಪೂಜೆ ಸಲ್ಲಿಸಿದ್ದೇನೆ’ ಎಂದರು.

ಗುಣಮಟ್ಟದ ಕಾಮಗಾರಿ ನಿರ್ವಹಿಸುವಂತೆ ಗುತ್ತಿಗೆದಾರರು ಮತ್ತು ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು, 6 ತಿಂಗಳೊಳಗಾಗಿ ಸುಸಜ್ಜಿತ ಕಟ್ಟಡ ನಿರ್ಮಾಣವಾಗಲಿದ್ದು, ಜನರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.

ಕೊಡಗು ಜಿಲ್ಲಾ ಆರೊಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಂ. ಸತೀಶ್, ಹಾರಂಗಿ ಮಹಾ ಮಂಡಳಿ ಅಧ್ಯಕ್ಷ ಎಸ್.ಸಿ. ಚೌಡೇಗೌಡ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ನಾಗರಾಜು, ಶೇಖರ, ಮುಖಂಡರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260323-36-252364539

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.