ವಿರಾಜಪೇಟೆ: ‘ಕೋವಿ ಕೊಡವರ ಸಂಪ್ರದಾಯದ ಅವಿಭಾಜ್ಯ ಅಂಗ. ಕೊಡವರ ಸಂಸ್ಕೃತಿ ಮತ್ತು ಪರಂಪರೆಯಿಂದ ಕೋವಿಯನ್ನು ಹೊರತುಪಡಿಸಲು ಸಾಧ್ಯವಿಲ್ಲ’ ಎಂದು ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಸಿ.ಎಸ್.ಅರುಣ್ ಮಾಚಯ್ಯ ಹೇಳಿದರು.

ಮಾಯಾಮುಡಿಯ ರಿಮ್ ಫೈರ್ ಶೂಟರ್ಸ್ ಹಾಗೂ ಗೋಣಿಕೊಪ್ಪಲಿನ ಕಾವೇರಿ ಪೊಮ್ಮಕ್ಕಡ ಕೂಟದಿಂದ ಮಾಯಮುಡಿಯ ಸರ್ಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ತೋಕ್ ನಮ್ಮೆ– 2025ರ ಅಂಗವಾಗಿ ಭಾನುವಾರ ನಡೆದ ತೆಂಗಿನಕಾಯಿಗೆ ಗುಂಡು ಹೊಡೆಯುವ ಮುಕ್ತ ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡಿದರು.

‘ಇಂದಿನ ಯುವ ಪೀಳಿಗೆ ಕೋವಿಯ ಮಹತ್ವವನ್ನು ಅರಿತು ಅದರ ಸಂರಕ್ಷಣೆಯ ಹೊಣೆಗಾರಿಕೆಯನ್ನು ಮೈಗೂಡಿಸಿಕೊಳ್ಳಬೇಕು. ಕೊಡಗಿನಲ್ಲಿ ಇತ್ತೀಚೆಗೆ ಶೂಟಿಂಗ್ ಸ್ಪರ್ಧೆಗಳು ವ್ಯಾಪಕವಾಗಿ ನಡೆಯುತ್ತಿದ್ದು, ಇದರಿಂದ ಉದಯೋನ್ಮುಖ ಶೂಟರ್ಸ್ಗಳನ್ನು ಬೆಳಕಿಗೆ ತರುವ ಕೆಲಸವಾಗಬೇಕು’ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗೋಣಿಕೊಪ್ಪಲಿನ ಕಾವೇರಿ ಪೊಮ್ಮಕ್ಕಡ ಕೂಟದ ಅಧ್ಯಕ್ಷೆ ಕೊಟ್ಟಂಗಡ ವಿಜು ದೇವಯ್ಯ ವಹಿಸಿದ್ದರು. ಕೊಡಗು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಗೋಣಿಕೊಪ್ಪಲು ಎಪಿಎಂಸಿ ಮಾಜಿ ಅಧ್ಯಕ್ಷ ಕಾಳಪಂಡ ಟಿ. ಟಿಪ್ಪು ಬಿದ್ದಪ್ಪ, ಯುವ ಉದ್ಯಮಿ ಕಾಳಪಂಡ ಜೆ. ಬೋಪಣ್ಣ, ಮಾಯಮುಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಆಪಟ್ಟಿರ ಟಾಟು ಮೊಣ್ಣಪ್ಪ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ದಿ. ಸಣ್ಣುವಂಡ ಶ್ರೀನಿವಾಸ್ ಚಂಗಪ್ಪ ಸ್ಮರಣಾರ್ಥ ಅವರ ಪತ್ನಿ ಸುಜಿತಾ ಚಂಗಪ್ಪ ಅವರು ತೋಕ್ ನಮ್ಮೆಯ ಮಧ್ಯಾಹ್ನದ ಬೋಜನವನ್ನು ಪ್ರಾಯೋಜಿಸಿದ್ದರು. ಕೊಡಗು ಸೇರಿದಂತೆ ಹೊರಜಿಲ್ಲೆಗಳ ಸಾಕಷ್ಟು ಸ್ಪರ್ಧಿಗಳು ಪಾಲ್ಗೊಂಡಿದ್ದರು.

ರೈಫಲ್ಸ್ ವಿಭಾಗ: ಪುತ್ತರಿರ ನಂಜಪ್ಪ ಪ್ರಥಮ

0.22 ರೈಫಲ್ಸ್ ವಿಭಾಗದಲ್ಲಿ ಪುತ್ತರಿರ ನಂಜಪ್ಪ ಪ್ರಥಮ ಶಿಜು ಮಂಡ್ಯ ದ್ವಿತೀಯ ಮತ್ತು ಬಡುವಂಡ ಶ್ಲೋಕ್ ಸುಬ್ಬಯ್ಯ ತೃತೀಯ ಸ್ಥಾನ ಪಡೆದರು. 12ನೇ ಬೋರ್ ಕೋವಿಯ ವಿಭಾಗದಲ್ಲಿ ಮೂಕೊಂಡ ಅಕ್ಷಿತ್ ಪ್ರಥಮ ಅಜ್ಜೇಟಿರ ಕಿಶನ್ ದ್ವಿತೀಯ ಮತ್ತು ನಾಪಂಡ ಬನ್ಸಿ ತೃತೀಯ ಸ್ಥಾನ ಪಡೆದುಕೊಂಡರು. ಸಮಾರೋಪದಲ್ಲಿ ಬಹುಮಾನಗಳನ್ನು ವಿತರಿಸಲಾಯಿತು. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ತೋಕ್ ನಮ್ಮೆಯ ಸಂಚಾಲಕ ಸಣ್ಣವಂಡ ವಿನಯ್ ಅಯ್ಯಪ್ಪ ವಹಿಸಿದ್ದರು. ಮಾಯಮುಡಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಆಪಟ್ಟಿರ ಬೋಪಣ್ಣ ಸದಸ್ಯರಾದ ಮಲ್ಲೇಂಗಡ ಮಮತಾ ಪೂಣಚ್ಚ ಮಾಯಮುಡಿಯ ಕಾವೇರಿ ಅಸೋಸಿಯೇಷನ್ ಅಧ್ಯಕ್ಷ ಕಾಳಪಂಡ ಸುಧೀರ್ ಕಾಫಿ ಬೆಳೆಗಾರರಾದ ಸಣ್ಣುವಂಡ ಸರೋಜ ಕೆ.ಸಿ. ನರೇಂದ್ರ ಪುಚ್ಚಿಮಾಡ ರಾಯಿ ಮಾದಪ್ಪ ಗೋಣಿಕೊಪ್ಪಲಿನ ಟಾಟಾ ಮೋಟರ್ಸ್ ವ್ಯವಸ್ಥಾಪಕ ಪುಳ್ಳಂಗಡ ಸಿಮ್ ಕುಟ್ಟಪ್ಪ ವ್ಯವಸ್ಥಾಪಕ ಬೋಪಣ್ಣ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.