ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಶಾಲನಗರ: ಬಾಗಿಲು‌ ಮುರಿದು ಕಳವಿಗೆ ಯತ್ನ

Last Updated 21 ಜುಲೈ 2021, 5:53 IST
ಅಕ್ಷರ ಗಾತ್ರ

ಕುಶಾಲನಗರ: ಇಲ್ಲಿನ‌ ಹಳೆ ಹೌಸಿಂಗ್ ಬೋರ್ಡ್ ಕಾಲೊನಿಯಲ್ಲಿ ಮಂಗಳವಾರ ಮನೆಯ ಬಾಗಿಲು ಮುರಿದು ಒಳ ನುಗ್ಗಿದ ಕಳ್ಳರು ಏನೂ ಸಿಗದೆ ಬರಿಗೈಯಲ್ಲಿ ಹಿಂತಿರುಗಿದ್ದಾರೆ.

ಹಳೆ ಹೌಸಿಂಗ್ ಬೋರ್ಡ್ ಕಾಲೊನಿಯ ನಿವಾಸಿ ಯಶೋದಾ ಎಂಬುವವರ ಮನೆ ಬಾಗಿಲು ಮುರಿದು ಮನೆಯನ್ನು ಸಂಪೂರ್ಣ ಶೋಧಿಸಿದ್ದಾರೆ. ಆದರೆ ಮನೆಯಲ್ಲಿ ಯಾವುದೇ ಬೆಲೆ ಬಾಳುವ ವಸ್ತುಗಳು ಸಿಗದೆ ನಿರಾಸೆಯಿಂದ ಕಳ್ಳರು ಹಿಂತಿರುಗಿದ್ದಾರೆ.

ಯಶೋದಾ ಅವರು ಮೊದಲ ಮಹಡಿಯಲ್ಲಿ ವಾಸವಿದ್ದು, ನೆಲಮಹಡಿಯಲ್ಲಿ ಯಾವುದೇ ಬೆಲೆ ಬಾಳುವ ವಸ್ತುಗಳನ್ನು ಇಟ್ಟಿರಲಿಲ್ಲ. ಇದರಿಂದ ಕಳ್ಳರಿಗೆ ಏನೂ ಸಿಕ್ಕಿಲ್ಲ.

ನಗರ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದು, ಸ್ಥಳಕ್ಕೆ ಪಿಎಸ್ಐ ಚಂದ್ರಶೇಖರ್ ಮತ್ತು ಎಎಸ್ಐ ಗೋಪಾಲ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

‘ಇತ್ತೀಚಿನ ದಿನಗಳಲ್ಲಿ ರಸ್ತೆಯಲ್ಲಿ ನಿಲ್ಲಿಸಿದ್ದ ಕಾರಿನ ಟೈರ್‌ಗಳನ್ನು ಕಳ್ಳತನ ಮಾಡಲಾಗಿದೆ. ಅಲ್ಲದೇ ಪಟ್ಟಣ ಪಂಚಾಯಿತಿ ಟ್ರಾಕ್ಟರ್ ಬ್ಯಾಟರಿ ಕಳವು ಮಾಡಿದ್ದಾರೆ. ಆದ್ದರಿಂದ ಪೊಲೀಸರು ರಾತ್ರಿ ವೇಳೆ ಗಸ್ತು ನಡೆಸುವ ಮೂಲಕ ಕಳ್ಳತನಕ್ಕೆ ಕಡಿವಾಣ ಹಾಕಬೇಕು’ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT