ಕುಶಾಲನಗರ (ಕೊಡಗು ಜಿಲ್ಲೆ): ತಾಲ್ಲೂಕಿನ 7ನೇ ಹೊಸಕೋಟೆ ಸಮೀಪ ಕೆಎಸ್‌ಆರ್‌ಟಿಸಿ ಬಸ್ ರಸ್ತೆ ಪಕ್ಕದ ಚಿಕ್ಕ ಗುಡ್ಡಕ್ಕೆ (ಬರೆ) ಗುದ್ದಿದ್ದು, 11 ಮಂದಿ ಪ್ರಯಾಣಿಕರಿಗೆ ಗಾಯಗಳಾಗಿವೆ.

ಚನ್ನರಾಯಪಟ್ಟಣದಿಂದ ಮಡಿಕೇರಿಗೆ ಹೊರಟಿದ್ದ ಈ ಬಸ್‌ನಲ್ಲಿ 44 ಮಂದಿ ಪ್ರಯಾಣಿಸುತ್ತಿದ್ದರು. ತಾಂತ್ರಿಕ ದೋಷದಿಂದ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಬರೆಗೆ ಡಿಕ್ಕಿ ಹೊಡೆದಿದೆ. ಕೆಲವು ಪ್ರಯಾಣಿಕರಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್‌ನ ಬಹುಭಾಗ ಜಖಂಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕುಶಾಲನಗರ ಸಂಚಾರ ಠಾಣೆಯ ಪೊಲೀಸರು ಸ್ಥಳಕ್ಕೆ ತೆರಳಿ ಸ್ಥಳೀಯರ ನೆರವಿನಿಂದ ಬಸ್‌ನಲ್ಲಿ ಸಿಲುಕಿದ್ದ ಪ್ರಯಾಣಿಕರನ್ನು ಕಿಟಕಿ ಹಾಗೂ ತುರ್ತು ನಿರ್ಗಮನ ದ್ವಾರದ ಮೂಲಕ ಹೊರಕ್ಕೆ ಕರೆ ತಂದಿದ್ದಾರೆ. ದಾರಿ ಮಧ್ಯೆ ತೆರಳುತ್ತಿದ್ದ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಸಹ ಪ್ರಯಾಣಿಕರ ನೆರವಿಗೆ ಧಾವಿಸಿ ಆಸ್ಪತ್ರೆಗೆ ದಾಖಲಿಸುವಲ್ಲಿ ಸಹಕರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.