ಸೋಮವಾರಪೇಟೆ: ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್‌ಟಿಸಿ ಬಸ್ ಗುರುವಾರ ತಾಲ್ಲೂಕಿನ ಗರ್ವಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಮೀಪದ ಕುಂಬಾರಗಡಿಗೆಯಲ್ಲಿ ಮರಕ್ಕೆ ಡಿಕ್ಕಿ ಹೊಡೆದಿದೆ.
ಮಡಿಕೇರಿಯಿಂದ ಸೂರ್ಲಬ್ಬಿ ಮಾರ್ಗವಾಗಿ ಸೋಮವಾರಪೇಟೆಗೆ ಸಂಚರಿಸುತ್ತಿದ್ದ ಬಸ್ ಕಿರಿದಾದ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಮರಕ್ಕೆ ಡಿಕ್ಕಿಯಾಗಿ ನಿಂತಿರುವುದರಿಂದ ಅನಾಹುತ ತಪ್ಪಿದೆ. ಬಸ್‌ನಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಇದ್ದರು.
‘ತಿರುವುಗಳಲ್ಲಿ ನಾಮಫಲಕ ಇಲ್ಲದ ಕಾರಣ ಅವಘಡಗಳು ಸಂಭವಿಸುತ್ತಿವೆ’ ಎಂದು ಗ್ರಾಮಸ್ಥರು ದೂರಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.