ಭಾನುವಾರ, 14 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕೆ.ಟಿ.ಬೇಬಿಮ್ಯಾಥ್ಯೂ, ರಂಗಧಾಮಪ್ಪ ಭೇಟಿ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಗೆ ಸಹಕಾರದ ಭರವಸೆ ನೀಡಿದ ನೂತನ ಡಿಡಿಪಿಐ
Published 4 ಜುಲೈ 2024, 5:20 IST
Last Updated 4 ಜುಲೈ 2024, 5:20 IST
ಅಕ್ಷರ ಗಾತ್ರ

ಮಡಿಕೇರಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಕೊಡಗು ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿಮ್ಯಾಥ್ಯೂ ಮತ್ತು ಪದಾಧಿಕಾರಿಗಳು ಕೊಡಗು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಸಿ.ರಂಗಧಾಮಪ್ಪ ಅವರನ್ನು ಬುಧವಾರ ಭೇಟಿ ಮಾಡಿ ಚರ್ಚೆ ನಡೆಸಿದರು.

ಸ್ಕೌಟ್ಸ್, ಗೈಡ್ಸ್‌ ಸಂಸ್ಥೆಯ ಉಪಾಧ್ಯಕ್ಷರೂ ಆಗಿರುವ ನೂತನ ಡಿಡಿಪಿಐ ಸಿ.ರಂಗಧಾಮಪ್ಪ ಅವರಿಗೆ ಸಂಸ್ಥೆಯ ಪರವಾಗಿ ಕಂಠ ವಸ್ತ್ರ ಧರಿಸಿ ಪುಷ್ಪ ಗುಚ್ಛ ನೀಡಿದ ಸಂಸ್ಥೆಯ ಜಿಲ್ಲಾ ಪ್ರಧಾನ ಆಯುಕ್ತ ಬೇಬಿಮ್ಯಾಥ್ಯೂ, ಸ್ಕೌಟ್ಸ್ , ಗೈಡ್ಸ್ ಮಾಹಿತಿ ಪುಸ್ತಕವನ್ನು ಹಸ್ತಾಂತರಿಸಿದರು.

ನೂತನವಾಗಿ ಜಿಲ್ಲೆಗೆ ರಂಗಧಾಮಪ್ಪ ಅವರಿಗೆ ಕೆ.ಟಿ.ಬೇಬಿಮ್ಯಾಥ್ಯೂ ಅವರು ತಮ್ಮ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಕೊಡಗು ಜಿಲ್ಲಾ ಘಟಕದ ಕಾರ್ಯಚಟುವಟಿಕೆಗಳನ್ನು ಕುರಿತು ಮಾಹಿತಿ ನೀಡಿದರು.

ಜಿಲ್ಲೆಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಸಂಸ್ಥೆಯ ಘಟಕಗಳ ಮೂಲಕ ಮಕ್ಕಳಲ್ಲಿ ವಿವಿಧ ಅಭ್ಯಾಸಾತ್ಮಕ ಚಟುವಟಿಕೆಗಳು ಹಾಗೂ ತರಬೇತಿಗಳನ್ನು ಹಮ್ಮಿಕೊಂಡು ಮಕ್ಕಳಲ್ಲಿ ದೇಶಾಭಿಮಾನ ಬೆಳೆಸಲಾಗುತ್ತಿದೆ ಎಂದು ಅವರು ತಿಳಿಸಿದರು.

ರಂಗಧಾಮಪ್ಪ ಪ್ರತಿಕ್ರಿಯಿಸಿ, ‘ಶಾಲಾ ಮಕ್ಕಳಲ್ಲಿ ಶಿಸ್ತು, ಸಂಯಮ, ಉತ್ತಮ ನಾಯಕತ್ವ ಗುಣ ಬೆಳೆಸಲು ಸಹಕಾರಿಯಾಗಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ರಾಷ್ಟ್ರೀಯ ಭಾವೈಕ್ಯತೆ ಬೆಳೆಸಲು ಹಾಗೂ ಭವಿಷ್ಯದಲ್ಲಿ ತಮ್ಮನ್ನು ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಉತ್ತಮ ವೇದಿಕೆ ಒದಗಿಸುತ್ತದೆ’ ಎಂದು ಅಭಿಪ್ರಾಯಪಟ್ಟರು.

ಜೊತೆಗೆ, ಸಂಸ್ಥೆಯ ಕಾರ್ಯನಿರ್ವಹಣೆಗೆ ಇಲಾಖೆಯ ವತಿಯಿಂದ ಅಗತ್ಯ ಸಹಕಾರ ನೀಡಲಾಗುವುದು ಎಂಬ ಭರವಸೆಯನ್ನೂ ನೀಡಿದರು.

ಈ ವೇಳೆ ಸಂಸ್ಥೆಯ ಸ್ಥಾನಿಕ ಆಯುಕ್ತ ಎಚ್.ಎಂ.ಮುತ್ತಪ್ಪ, ಸಹ ಕಾರ್ಯದರ್ಶಿ ಬೊಳ್ಳಜಿರ ಬಿ.ಅಯ್ಯಪ್ಪ, ಜಿಲ್ಲಾ ತರಬೇತಿ ಆಯುಕ್ತ ಕೆ.ಯು.ರಂಜಿತ್, ಸಂಪಾಜೆ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಎಂ.ಧನಂಜಯ, ಕಾರ್ಯದರ್ಶಿ ಕೆ.ಬಿ.ಉಷಾರಾಣಿ, ಸಂಸ್ಥೆಯ ಜಿಲ್ಲಾ ಸಂಘಟಕಿ ಯು.ಸಿ.ದಮಯಂತಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT