ಕುಶಾಲನಗರ: ಸಮೀಪದ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಶುಕ್ರವಾರ ರಾಷ್ಟ್ರೀಯ ಅಂತರಿಕ್ಷ ದಿನಾಚರಣೆ ಆಚರಿಸುವ ಮೂಲಕ ಚಂದ್ರಯಾನ ಯಶಸ್ವಿ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಯಿತು.

ಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಮಾತನಾಡಿ, ‘ಚಂದ್ರಯಾನ-3ರ ಯಶಸ್ಸಿನ ಸ್ಮರಣಾರ್ಥ ಆಗಸ್ಟ್ 23ರಂದು ಬಾಹ್ಯಾಕಾಶ ದಿನ ಆಚರಿಸಲಾಗುತ್ತಿದೆ. ಇಂತಹ ದಿನಗಳು ವಿದ್ಯಾರ್ಥಿಗಳಲ್ಲಿ ಬಾಹ್ಯಾಕಾಶದ ಕುರಿತು ವೈಜ್ಞಾನಿಕ ಸಂಶೋಧನೆಗಳನ್ನು ಮತ್ತು ಸಾಹಸಗಳನ್ನು ಕೈಗೊಳ್ಳಲು ಪ್ರೇರೇಪಣೆ ಸಿಗುತ್ತದೆ’ ಎಂದರು.

ವಿಜ್ಞಾನ ಸಂಘದ ಉಸ್ತುವಾರಿ ಶಿಕ್ಷಕಿ ಬಿ.ಡಿ.ರಮ್ಯ ಮಾತನಾಡಿ, ‘ಬಾಹ್ಯಾಕಾಶ ಸಾಧನೆಗಳ ಪೈಕಿ ಚಂದ್ರಯಾನ-3 ಯೋಜನೆಗೆ ವಿಶೇಷ ಸ್ಥಾನವಿದೆ. ಕಳೆದ ವರ್ಷ ಆ.23ರಂದು ಚಂದ್ರಯಾನ-3 ಮಿಷನ್‌ನ ವಿಕ್ರಮ್ ಲ್ಯಾಂಡರ್ ಚಂದ್ರನ ದಕ್ಷಿಣ ಧ್ರುವಕ್ಕೆ ಇಳಿದ ಕ್ಷಣದಲ್ಲಿ ಇತಿಹಾಸವೇ ಸೃಷ್ಟಿಯಾಯಿತು ಎಂದರು.

ಶಿಕ್ಷಕರಾದ ಕೆ.ಗೋಪಾಲಕೃಷ್ಣ, ಎಂ.ಟಿ. ದಯಾನಂದ ಪ್ರಕಾಶ್, ಬಿ.ಡಿ. ರಮ್ಯಾ, ಎಸ್.ಎಂ.ಗೀತಾ, ಅನ್ಸಿಲಾ ರೇಖಾ, ಕೆ.ಟಿ.ಸೌಮ್ಯ, ಸಿಬ್ಬಂದಿ ಎಂ.ಉಷಾ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.